ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಡಾ.ಬಿ.ಡಿ.ಭೂಕಾಂತ್‌ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಿಂಪಡೆದು ರಾಜ್ಯ ಸರ್ಕಾರ ಆದೇಶಿಸಿದೆ.

ಬೆಂಗಳೂರು: ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಡಾ.ಬಿ.ಡಿ.ಭೂಕಾಂತ್‌ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಿಂಪಡೆದು ರಾಜ್ಯ ಸರ್ಕಾರ ಆದೇಶಿಸಿದೆ.

Add Asianetnews Kannada as a Preferred SourcegooglePreferred

ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡ ಅಧ್ಯಕ್ಷ

ಡಾ. ಬಿ.ಡಿ.ಭೂಕಾಂತ್‌ ಅಧ್ಯಕ್ಷರಾಗಿರುವ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳ ಸೇರಿ 54 ನಿಗಮ-ಮಂಡಳಿ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಕಳೆದ ವಾರ ಆದೇಶಿಸಿತ್ತು.

ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ

ಆದರೆ, ಭೂಕಾಂತ್‌ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದು ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ ಮೂಡಿತ್ತು. ಅಲ್ಲದೆ, ಈ ಕೂಡಲೇ ಅವರಿಗೆ ನೀಡಲಾದ ಸ್ಥಾನಮಾನವನ್ನು ಹಿಂಪಡೆಯುವಂತೆಯೂ ಸರ್ಕಾರವನ್ನು ಒತ್ತಾಯಿಸಿದ್ದರು. ಕಾರ್ಯಕರ್ತರ ಒತ್ತಡಕ್ಕೆ ಮಣಿದಿರುವ ಸರ್ಕಾರ ಭೂಕಾಂತ್‌ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನವನ್ನು ಹಿಂಪಡೆದಿದೆ.