ಗ್ಯಾರಂಟಿ ಯೋಜನೆ ಕುರಿತು ರಾಜ್ಯದ ಜನತೆಗೆ ಜಾಗೃತಿ ಮೂಡಿಸಲು ಹಾಗೂ ಈ ಬಗ್ಗೆ ಪ್ರಚಾರಾಂದೋಲನ ಕೈಗೊಳ್ಳಲು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಸರ್ಕಾರದ ಈ ಯೋಜನೆಗಳನ್ನು ಪಕ್ಷದ ಕಾರ್ಯಕರ್ತರು ಮನೆ ಮನೆಗೆ ಮುಟ್ಟಿಸಬೇಕು. ಇದಕ್ಕಾಗಿ ಜನವರಿ ಮಾಸದಿಂದ ಮಾರ್ಚ್ ವರೆಗೂ ಆಂದೋಲನವನ್ನು ಕೈಗೊಳ್ಳಬೇಕು. ಇದಕ್ಕೆ ಪಕ್ಷವೇ ರೂಪರೇಷೆ ರೂಪಿಸಬೇಕು. 

ಬೆಂಗಳೂರು(ನ.29):  ಲೋಕಸಭಾ ಚುನಾವಣೆಗೆ ಗ್ಯಾರಂಟಿ ಯೋಜನೆಗಳನ್ನೇ ಪ್ರಮುಖವಾಗಿ ಬಿಂಬಿಸಲು ಕಾಂಗ್ರೆಸ್ ನಾಯಕತ್ವ ನಿರ್ಧರಿಸಿದ್ದು, ಇದಕ್ಕಾಗಿ ಜನವರಿ ಮಾಸದಿಂದ ಮೂರು ತಿಂಗಳವರೆಗೆ ರಾಜ್ಯಾದ್ಯಂತ ಗ್ಯಾರಂಟಿ ಯೋಜನೆ ಕುರಿತು ಜಾಗೃತಿ ಆಂದೋಲನ ಕೈಗೊಳ್ಳಲು ತೀರ್ಮಾನಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕರ್ನಾಟಕದಲ್ಲಿ 5 ವರ್ಷವೂ ಗ್ಯಾರಂಟಿ ಯೋಜನೆ ಇರುತ್ತವೆ: ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆ ಕುರಿತು ರಾಜ್ಯದ ಜನತೆಗೆ ಜಾಗೃತಿ ಮೂಡಿಸಲು ಹಾಗೂ ಈ ಬಗ್ಗೆ ಪ್ರಚಾರಾಂದೋಲನ ಕೈಗೊಳ್ಳಲು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಸರ್ಕಾರದ ಈ ಯೋಜನೆಗಳನ್ನು ಪಕ್ಷದ ಕಾರ್ಯಕರ್ತರು ಮನೆ ಮನೆಗೆ ಮುಟ್ಟಿಸಬೇಕು. ಇದಕ್ಕಾಗಿ ಜನವರಿ ಮಾಸದಿಂದ ಮಾರ್ಚ್ ವರೆಗೂ ಆಂದೋಲನವನ್ನು ಕೈಗೊಳ್ಳಬೇಕು. ಇದಕ್ಕೆ ಪಕ್ಷವೇ ರೂಪರೇಷೆ ರೂಪಿಸಬೇಕು ಎಂದು ನಿರ್ಧರಿಸಲಾಗಿದೆ ಎಂದು ಮೂಲಗಳು ಹೇಳಿವೆ.