ಸುದೀಪ್ ಅವರ ಪ್ರಚಾರಕ್ಕಾಗಿ ವಿಶೇಷ ಹೆಲಿಕಾಪ್ಟರ್ ವ್ಯವಸ್ಥೆ ಕಲ್ಪಿಸಿದ್ದು, ಬೆಳಗ್ಗೆಯಿಂದ ರಾತ್ರಿವರೆಗೆ ಸಾರ್ವಜನಿಕ ಸಭೆ ಹಾಗೂ ರೋಡ್ ಶೋ ಮೂಲಕ ಪ್ರಚಾರ ಕೈಗೊಳ್ಳಲಿದ್ದಾರೆ.
ಬೆಂಗಳೂರು(ಏ.26): ನಟ ಸುದೀಪ್ ಅವರು ಬುಧವಾರ ಆಡಳಿತಾರೂಢ ಬಿಜೆಪಿ ಪರ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ.
ಸುದೀಪ್ ಅವರ ಪ್ರಚಾರಕ್ಕಾಗಿ ವಿಶೇಷ ಹೆಲಿಕಾಪ್ಟರ್ ವ್ಯವಸ್ಥೆ ಕಲ್ಪಿಸಿದ್ದು, ಬೆಳಗ್ಗೆಯಿಂದ ರಾತ್ರಿವರೆಗೆ ಸಾರ್ವಜನಿಕ ಸಭೆ ಹಾಗೂ ರೋಡ್ ಶೋ ಮೂಲಕ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಎರಡು ದಿನ ಬಿಜೆಪಿ ಪರ ನಟ ಸುದೀಪ್ ಕ್ಯಾಂಪೇನ್: ಸಿಎಂ ಬೊಮ್ಮಾಯಿ
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಜಗಳೂರು ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ. ಬಳಿಕ ದಾವಣಗೆರೆ ಜಿಲ್ಲೆಯ ಮಾಯಕೊಂಡ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿಂದ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳಲ್ಲಿ ರೋಡ್ ಶೋ ಮೂಲಕ ಮತಯಾಚಿಸಲಿದ್ದಾರೆ. ನಂತರ ಸಂಜೆ ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರದಲ್ಲಿ ರೋಡ್ ಶೋ ನಡೆಸಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
