ಸುಳ್ಯ ಶಾಸಕ ಎಸ್. ಅಂಗಾರ ರಾಜಕೀಯ ನಿವೃತ್ತಿ: ಬಿಜೆಪಿ ಅಭ್ಯರ್ಥಿಗೂ ಬೆಂಬಲಿಸಲ್ಲ

ನಾನು ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದೇನೆ. ನಾನು ಈಗ ರಾಜಕಾರಣದಲ್ಲಿಲ್ಲ. ಆದ್ದರಿಂದ ಹೊಸ ಅಭ್ಯರ್ಥಿ ಹಾಗೂ ಅವರ ಗೆಲುವಿನ ಬಗ್ಗೆ ಪಕ್ಷವೇ ನೋಡಿಕೊಳ್ಳಬಹುದು.

Sulya MLA S Angara retires from politics I do not support the BJP candidate either sat

ಬೆಂಗಳೂರು (ಏ.12): ಇಷ್ಟು ವರ್ಷ ಪಕ್ಷಕ್ಕಾಗಿ ದುಡಿದವರಿಗೆ ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದ್ದು, ನಾನು ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದೇನೆ. ನಾನು ಈಗ ರಾಜಕಾರಣದಲ್ಲಿಲ್ಲ. ಆದ್ದರಿಂದ ಹೊಸ ಅಭ್ಯರ್ಥಿ ಹಾಗೂ ಅವರ ಗೆಲುವಿನ ಬಗ್ಗೆ ಪಕ್ಷವೇ ನೋಡಿಕೊಳ್ಳಬಹುದು ಎಂದು ಶಾಸಕ ಎಸ್. ಅಂಗಾರ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಯಾವುದೇ ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ಈಗ ರಾಜ್ಯ ರಾಜಕಾರಣದಲ್ಲಿ ನನಗೆ ಮುಳುವಾಗಿದೆ ಎಂದು ಬಿಜೆಪಿ ಹೈಕಮಾಂಡ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಚಾಮರಾಜಪೇಟೆ ಟಿಕೆಟ್‌ ಸಮರ್ಥಿಸಿಕೊಂಡ ಭಾಸ್ಕರ್‌ ರಾವ್‌: ಗೆದ್ದು ಇತಿಹಾಸ ನಿರ್ಮಿಸ್ತೇನೆ

ಹೊಸ ಅಭ್ಯರ್ಥಿ ಗೆಲ್ಲಿಸಿಕೊಳ್ಳುವುದು ಪಕ್ಷಕ್ಕೆ ಬಿಟ್ಟಿದ್ದು: ರಾಜ್ಯ ರಾಜಕಾರಣದಲ್ಲಿ ಬಿಜೆಪಿಯಿಂದ ಟಿಕೆಟ್‌ ಪಡೆಯುವುದಕ್ಕೆ ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಆದರೆ, ಟಿಕೆಟ್‌ಗೆ ಲಾಬಿ ಮಾಡಿದರುವುದೇ ನನಗೆ ತೀವ್ರ ಹಿನ್ನಡೆಯಾಯಿತು. ಇನ್ನು ನಾನು ಈಗಾಗಲೇ ರಾಜಕೀಯ ನಿವೃತ್ತಿ ಘೋಷಣೆ ಮಾಡಿಯಾಗಿದೆ. ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ನಾನು ಇರುವುದಿಲ್ಲ. ಈಗ ಬಿಜೆಪಿ ಪಟ್ಟಿಯಲ್ಲಿ ಘೋಷಣೆ ಮಾಡಿರುವ ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಂದು ಖಾರವಾಗಿಯೇ ಹೇಳಿದರು.

ಕುಂದಗೋಳ ಟಿಕೆಟ್‌ ತಪ್ಪಿದ್ದಕ್ಕೆ ಚಿಕ್ಕನಗೌಡ ಸಭೆ: ಕುಂದಗೋಳ- ಟಿಕೆಟ್ ಕೈ ತಪ್ಪಿದ್ದಕ್ಕೆ ಬೆಂಬಲಿಗರ ಸಭೆ ಮಾಡಲಾಗುತ್ತಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಎಸ್‌ಐ ಚಿಕ್ಕನಗೌಡರ ಅವರು ಹುಬ್ಬಳ್ಳಿ ತಾಲೂಕಿನ ಆದರಗುಂಚಿ ಗ್ರಾಮದಲ್ಲಿ ಬೆಂಬಲಿಗರ ಸಭೆ ಮಾಡುತ್ತಿದ್ದಾರೆ. ಈ ಸಭೆಯಲ್ಲಿ ಸಾವಿರಾರು ಬೆಂಬಲಿಗರು ಭಾಗಿಯಾಗಿದ್ದಾರೆ. ಬಿಜೆಪಿ ಟಿಕೆಟ್ ಎಂ.ಆರ್. ಪಾಟೀಲ್ ಗೆ ಘೋಷಣೆಯಾದ ಹಿನ್ನಲೆ ಬೆಂಬಲಿಗರ ಸಭೆ ಮಾಡ್ತಿರೋ ಚಿಕ್ಕನಗೌಡ. ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ದಾರ ಮಾಡಲಿದ್ದಾರೆ.

ಪ್ರಹ್ಲಾದ್‌ ಜೋಷಿ ವಿರುದ್ಧ ಆಕ್ರೋಶ: ಯಡಿಯೂರಪ್ಪ ಸಂಬಂಧಿಯಾಗಿರುವ ಎಸ್.ಐ ಚಿಕ್ಕನಗೌಡರ ಅವರು ಬಿಜೆಪಿಗೆ ತೊರೆಯುವ ನಿರ್ಧಾರಕ್ಕೆ‌ ಬಂದಿದ್ದಾರೆ. ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ಶುರುವಾಗಿದೆ. ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಚಿಕ್ಕನಗೌಡರಿಗೆ ಟಿಕೆಟ ತಪ್ಪಲು ಜೋಶಿ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಗೆ ರಾಜಿನಾಮೆ ನೀಡಿದ ಎಂಎಲ್ಸಿ ಆರ್. ಶಂಕರ್‌: ಪಕ್ಷೇತರ ಸ್ಪರ್ಧೆಗೆ ಸಿದ್ಧತೆ

ಬಿಜೆಪಿಗೆ ರಾಜಿನಾಮೆ ನೀಡಿದ ಎಂಎಲ್ಸಿ ಆರ್. ಶಂಕರ್‌:  ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾಗಿದ್ದ ವಿಧಾನ ಪರಿಷತ್‌ ಸದಸ್ಯ ಆರ್. ನಾಗೇಶ್‌ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಕೆ ಮಾಡಲು ಮುಂದಾಗಿದ್ದಾರೆ. ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಆರ್. ಶಂಕರ್‌ ಅವರಿಗೆ ಬಿಜೆಪಿ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಇಂದು ಬಿಜೆಪಿಗೆ ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆ. ಇನ್ನು ಅವರನ್ನು ಬಿಜೆಪಿಯಿಂದ ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಲಾಗಿದ್ದು, ಮಧ್ಯಾಹ್ನ 3 ಗಂಟೆಗೆ ರಾಜಿನಾಮೆ ಸಲ್ಲಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ. 

Latest Videos
Follow Us:
Download App:
  • android
  • ios