Asianet Suvarna News Asianet Suvarna News

ಮಂಡ್ಯದ ಬಿಜೆಪಿ-ಜೆಡಿಎಸ್‌ ಸಮನ್ವಯ ಸಭೆಗೆ ಸುಮಲತಾ ಗೈರು: ಕುತೂಹಲ ಮೂಡಿಸಿದ ಮುಂದಿನ ನಡೆ

ಸುಮಲತಾ ಮೌನ ನಡೆಗೆ ಮೈತ್ರಿ ನಾಯಕರು ಮುನಿಸು ಪ್ರದರ್ಶಿಸುತ್ತಿರುವಂತೆ ಕಂಡು ಬರುತ್ತಿದೆ. ಹೀಗಾಗಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕೆ.ಸಿ.ನಾರಾಯಣಗೌಡ ಅವರೂ ಸಹ ಸುಮಲತಾ ಹೆಸರನ್ನು ಸ್ಮರಿಸುವ ಗೋಜಿಗೂ ಹೋಗಲಿಲ್ಲ.
 

Sumalatha Ambareesh Absent from BJP JDS Coordination Meeting in Mandya grg
Author
First Published Mar 29, 2024, 8:00 AM IST

ಮಂಡ್ಯ(ಮಾ.29):  ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಾಗಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಸಂಸದೆ ಸುಮಲತಾ ಮೌನಕ್ಕೆ ಶರಣಾಗಿದ್ದಾರೆ. ಅಲ್ಲದೆ, ಗುರುವಾರ ನಗರದಲ್ಲಿ ನಡೆದ ಜೆಡಿಎಸ್-ಬಿಜೆಪಿ ಸಮನ್ವಯ ಸಮಿತಿ ಸಭೆಗೂ ಹಾಜರಾಗದೆ ದೂರ ಉಳಿದಿದ್ದು, ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ.

ಸುಮಲತಾ ಮೌನ ನಡೆಗೆ ಮೈತ್ರಿ ನಾಯಕರು ಮುನಿಸು ಪ್ರದರ್ಶಿಸುತ್ತಿರುವಂತೆ ಕಂಡು ಬರುತ್ತಿದೆ. ಹೀಗಾಗಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕೆ.ಸಿ.ನಾರಾಯಣಗೌಡ ಅವರೂ ಸಹ ಸುಮಲತಾ ಹೆಸರನ್ನು ಸ್ಮರಿಸುವ ಗೋಜಿಗೂ ಹೋಗಲಿಲ್ಲ.

ಸುಮಲತಾ ಜೊತೆ ಶೀಘ್ರ ಭೇಟಿ, ಪಕ್ಷದಲ್ಲಿ ಗೌರವಯುತ ಸ್ಥಾನದ ಭರವಸೆ: ವಿಜಯೇಂದ್ರ

ಬೆಂಬಲಿಗರ ಸಭೆ:

ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ಅವರು ಶನಿವಾರ (ಮಾ.30) ಬೆಂಗಳೂರಿನ ತಮ್ಮ ನಿವಾಸದಲ್ಲಿ ಬೆಂಬಲಿಗರು, ಆಪ್ತರ ಸಭೆ ಕರೆದಿದ್ದು ತಮ್ಮ ಮುಂದಿನ ರಾಜಕೀಯ ನಡೆಯನ್ನು ನಿರ್ಧರಿಸಲಿದ್ದಾರೆ.

ಅಂದು ಮಧ್ಯಾಹ್ನ 2.30ಕ್ಕೆ ಸಭೆ ನಿಗದಿಪಡಿಸಿದ್ದು, ಮುಂದಿನ ರಾಜಕೀಯ ನಡೆ ಹೇಗಿರಬೇಕೆಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗುವ ಮೂಲಕ ಜೆಡಿಎಸ್-ಬಿಜೆಪಿ ಮೈತ್ರಿ ಒಪ್ಪಿ ಮೈತ್ರಿ ಧರ್ಮ ಪಾಲಿಸುವುದೋ ಅಥವಾ ಬಿಜೆಪಿ ಹೈಕಮಾಂಡ್‌ನಿಂದ ಸಿಗಬಹುದಾದ ಸ್ಥಾನ-ಮಾನಗಳನ್ನು ನಿರೀಕ್ಷಿಸುವುದೋ ಅಥವಾ ರಾಜಕೀಯವಾಗಿ ತಟಸ್ಥ ಧೋರಣೆ ಅನುಸರಿಸುವುದೋ ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.

Follow Us:
Download App:
  • android
  • ios