Asianet Suvarna News Asianet Suvarna News

ಎಸ್ಸಿ, ಎಸ್ಟಿ ಹಣ ಕಾಂಗ್ರೆಸ್‌ ಗ್ಯಾರಂಟಿಗೆ: ಸುನಿಲ್‌ ಕುಮಾರ್‌ ಆಕ್ರೋಶ

ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರೇ ಈ ಆರೋಪವನ್ನು ಒಪ್ಪಿಕೊಂಡಿದ್ದಾರೆ. ಎಸ್‌ಸಿಎಸ್‌ಪಿ, ಟಿಎಸ್‌ಪಿಗೆ ನಿಗದಿಯಾದ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳಬಾರದೆಂಬ ನಿಯಮವೇ ಇದೆ. ಆದರೆ ರಾಜ್ಯ ಸರ್ಕಾರ ಇದನ್ನು ಉಲ್ಲಂಘಿಸುವ ಮೂಲಕ ದಲಿತ ಸಮುದಾಯಕ್ಕೆ ಮಹಾಮೋಸ ಮಾಡಿದೆ ಎಂದು ಟೀಕಿಸಿದ ಮಾಜಿ ಸಚಿವ ವಿ.ಸುನಿಲ್‌ ಕುಮಾರ್‌ 

Sunil Kumar Outraged For SC, ST Money For Congress Guarantee in Karnataka grg
Author
First Published Aug 3, 2023, 1:30 AM IST

ಕಾರ್ಕಳ(ಆ.03):  ಪರಿಶಿಷ್ಟಜಾತಿ ಹಾಗೂ ಪಂಗಡಗಳ ಉಪಯೋಜನೆಯಡಿ ಮೀಸಲಿರಿಸಿದ ಅನುದಾನದಲ್ಲಿ 11 ಸಾವಿರ ಕೋಟಿ ರುಪಾಯಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ಶೋಷಿತ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಮಾಜಿ ಸಚಿವ ವಿ.ಸುನಿಲ್‌ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರೇ ಈ ಆರೋಪವನ್ನು ಒಪ್ಪಿಕೊಂಡಿದ್ದಾರೆ. ಎಸ್‌ಸಿಎಸ್‌ಪಿ, ಟಿಎಸ್‌ಪಿಗೆ ನಿಗದಿಯಾದ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳಬಾರದೆಂಬ ನಿಯಮವೇ ಇದೆ. ಆದರೆ ರಾಜ್ಯ ಸರ್ಕಾರ ಇದನ್ನು ಉಲ್ಲಂಘಿಸುವ ಮೂಲಕ ದಲಿತ ಸಮುದಾಯಕ್ಕೆ ಮಹಾಮೋಸ ಮಾಡಿದೆ ಎಂದು ಟೀಕಿಸಿದ್ದಾರೆ.

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆ ಕುಸಿತ: ಸಿದ್ದರಾಮಯ್ಯ ಕಿಡಿ

ಎಸ್ಸಿಎಸ್ಪಿ, ಟಿಎಸ್ಪಿ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯಲ್ಲೇ ಈ ವಿಚಾರವನ್ನು ಮುಚ್ಚಿಡುವ ಪ್ರಯತ್ನವನ್ನು ಸರ್ಕಾರದಿಂದ ನಡೆದಿತ್ತು. 2023-24ನೇ ಸಾಲಿನ ಪರಿಷ್ಕೃತ ಬಜೆಟ್‌ ಲಿಂಕ್‌ ಡಾಕ್ಯುಮೆಂಟ್‌ನಲ್ಲಿ ಗ್ಯಾರಂಟಿ ಯೋಜನೆಗೆ ಈ ಹಣವನ್ನು ಬಳಸಿಕೊಂಡ ಬಗ್ಗೆ ದಾಖಲೆ ಇತ್ತು. ಸರ್ಕಾರ ಸತ್ಯವನ್ನು ಮುಚ್ಚಿ ಹಾಕಲು ನಡೆಸಿದ ಪ್ರಯತ್ನ ಈಗ ಬಯಲಾಗಿದೆ ಎಂದಿದ್ದಾರೆ.

Follow Us:
Download App:
  • android
  • ios