ಪಕ್ಷ ಸಂಘಟಿಸಿ, ಮೋದಿ ಮಹತ್ಕಾರ್ಯಕ್ಕೆ ಬೆಂಬಲಸಿ : ಶಾಸಕಿ ರೂಪಾಲಿ ನಾಯ್ಕ್
ಬಿಜೆಪಿಯನ್ನು ಇನ್ನಷ್ಟುಗಟ್ಟಿಗೊಳಿಸಲು ಆತ್ಮವಿಶ್ವಾಸದಿಂದ ಕಾರ್ಯಕರ್ತರು ತೊಡಗಿಕೊಳ್ಳಬೇಕು. ಈ ಮೂಲಕ ನರೇಂದ್ರ ಮೋದಿ ಮಹತ್ಕಾರ್ಯಕ್ಕೆ ಸಕ್ರಿಯವಾಗಿ ಸಹಕಾರ ನೀಡಬೇಕು ಎಂದು ಶಾಸಕಿ ರೂಪಾಲಿ ಎಸ್. ನಾಯ್ಕ ತಿಳಿಸಿದರು.
ಕಾರವಾರ (ಅ.6) : ಬಿಜೆಪಿಯನ್ನು ಇನ್ನಷ್ಟುಗಟ್ಟಿಗೊಳಿಸಲು ಆತ್ಮವಿಶ್ವಾಸದಿಂದ ಕಾರ್ಯಕರ್ತರು ತೊಡಗಿಕೊಳ್ಳಬೇಕು. ಈ ಮೂಲಕ ನರೇಂದ್ರ ಮೋದಿ ಮಹತ್ಕಾರ್ಯಕ್ಕೆ ಸಕ್ರಿಯವಾಗಿ ಸಹಕಾರ ನೀಡಬೇಕು ಎಂದು ಶಾಸಕಿ ರೂಪಾಲಿ ಎಸ್. ನಾಯ್ಕ ತಿಳಿಸಿದರು. ಇದೇ ಅ.30ರಂದು ಕಲಬುರಗಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆಯಲಿರುವ ಬಿಜೆಪಿಯ ಹಿಂದುಳಿದ ಮೋರ್ಚಾದ ಬೃಹತ್ ಸಮಾವೇಶಕ್ಕೆ ಪೂರ್ವಭಾವಿಯಾಗಿ ಯಾದಗಿರಿ ಹಾಗೂ ರಾಯಚೂರಿನಲ್ಲಿ ನಡೆದ ಸಭೆಯಲ್ಲಿ ಅವರು ಪಕ್ಷ ಸಂಘಟನೆಯ ಬಗ್ಗೆ ಮಾತನಾಡಿ ಗಮನ ಸೆಳೆದರು.
ಉ.ಕನ್ನಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಿಎಂ ಬೊಮ್ಮಾಯಿ ತಾತ್ವಿಕ ಒಪ್ಪಿಗೆ?
ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಬಲು ದೊಡ್ಡ ಕೊಡುಗೆ ನೀಡಿದ್ದಾರೆ. ಜಾಗತಿಕ ಮಟ್ಟದಲ್ಲಿ ನಮ್ಮ ದೇಶ ಮುಂಚೂಣಿಯಲ್ಲಿ ನಿಲ್ಲುವಂತಾಗಿದೆ. ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶದ ಮೂಲೆ ಮೂಲೆಯಲ್ಲೂ ಬಿಜೆಪಿಯನ್ನು ಸಂಘಟಿಸಿ ಪಕ್ಷವನ್ನು ಗಟ್ಟಿಗೊಳಿಸುತ್ತಿದ್ದಾರೆ. ಅದೇ ರೀತಿ ರಾಜ್ಯದಲ್ಲಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ…, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಕ್ಷವನ್ನು ಮತ್ತಷ್ಟುಬಲಪಡಿಸಿದ್ದಾರೆ ಎಂದು ಹೇಳಿದರು.
ಪ್ರಧಾನಿ ಮೋದಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆಧಾರವಾಗುವಂತಹ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ದೇಶದ ಜನರಲ್ಲಿ ರಾಷ್ಟ್ರಪ್ರೇಮ ಜಾಗೃತಗೊಳಿಸಿದ್ದಾರೆ. ಅಭಿವೃದ್ಧಿಯ ಪರ್ವವೇ ನಮ್ಮ ಮುಂದಿದೆ. ಮುಂದಿನ ದಿನಗಳಲ್ಲೂ ಬಿಜೆಪಿ ಹೊರತಾಗಿ ಯಾವ ಪಕ್ಷವೂ ಪ್ರಬಲವಾಗಿ ಇರಲಾರದು. ಈ ಸಂದರ್ಭದಲ್ಲಿ ನಾವೀಗ ಆತ್ಮವಿಶ್ವಾಸದಿಂದ ಪಕ್ಷವನ್ನು ಮತ್ತಷ್ಟುಗಟ್ಟಿಗೊಳಿಸಲು ಶ್ರಮಿಸಬೇಕಾಗಿದೆ ಎಂದು ಅವರು ತಿಳಿಸಿದರು.
ಪಕ್ಷ ನಮಗೆ ತಾಯಿ ಇದ್ದಂತೆ. ಪಕ್ಷ ಬಲಿಷ್ಠವಾಗಿದ್ದರೆ ನಾವೂ ಬಲಶಾಲಿಯಾಗಿರುತ್ತೇವೆ. ಈ ಸಮಾವೇಶ ನಮ್ಮ ಮನೆಯ ಕಾರ್ಯಕ್ರಮವೆಂದು ಭಾವಿಸಿ, ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಹಿಂದುಳಿದ ಮೋರ್ಚಾದ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರಬಾಬು, ಶಾಸಕ ವೆಂಕಟರೆಡ್ಡಿ, ರಾಯಚೂರು ನಗರ ಶಾಸಕ, ಶಿವರಾಜ ಪಾಟೀಲ, ವಿಧಾನಪರಿಷತ್ ಸದಸ್ಯ ಬಾಬೂರಾವ್ ಚಿಂಚನಸೂರ, ನಿಗಮ ಮಂಡಳಿ ಅಧ್ಯಕ್ಷರು, ರಾಯಚೂರ ಜಿಲ್ಲಾ ಬಿಜೆಪಿ ಅಧ್ಯಕ್ಷ ರಮಾನಂದ ಯಾದವ, ರಾಯಚೂರ ಜಿಲ್ಲಾ ಹಿಂದುಳಿದ ಮೋರ್ಚಾದ ಅಧ್ಯಕ್ಷ ಗುಡ್ಸಿ ನರಸಾರೆಡ್ಡಿ, ಯಾದಗಿರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಶರಣಭೂಪಾಲ ರೆಡ್ಡಿ, ಯಾದಗಿರಿ ಜಿಲ್ಲಾ ಹಿಂದುಳಿದ ಮೋರ್ಚಾ ಅಧ್ಯಕ್ಷ ಮಲ್ಲಿಕಾರ್ಜುನ ಕಂದಕೂರ, ಮಹಿಳಾ ಮೋರ್ಚಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
Uttara Kannada: ವೃಕ್ಷಮಾತೆಗೆ ಕೊಟ್ಟ ಮಾತು ಉಳಿಸಿದ ಶಾಸಕಿ ರೂಪಾಲಿ ನಾಯ್ಕ್
ಸನ್ಮಾನ: ರಾಯಚೂರ ಹಾಗೂ ಯಾದಗಿರಿಯಲ್ಲಿ ನಡೆದ ಸಭೆಯಲ್ಲಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರೂಪಾಲಿ ಎಸ್. ನಾಯ್ಕ ಅವರನ್ನು ಸನ್ಮಾನಿಸಿದರು.
-ಸಮಾವೇಶದಲ್ಲಿ 8 ಲಕ್ಷ ಜನರು ಸೇರುವ ನಿರೀಕ್ಷೆ
ಸಮಾವೇಶದ ಯಶಸ್ಸಿಗಾಗಿ ಬಿಜೆಪಿಯ ಮುಖಂಡರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಸುನೀಲಕುಮಾರ ನೇತೃತ್ವದ ತಂಡದಲ್ಲಿ ರೂಪಾಲಿ ನಾಯ್ಕ, ನೆ.ಲ.ನರೇಂದ್ರಬಾಬು ಮತ್ತಿತರರು ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ. ಸಮಾವೇಶದಲ್ಲಿ 8 ಲಕ್ಷ ಜನರು ಸೇರುವ ನಿರೀಕ್ಷೆ ಇದೆ.