ಲೋಕಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಇದರಿಂದ ಅವರು  ಕ್ವಾರಂಟೈನ್‍ನಲ್ಲಿದ್ದಾರೆ.

ಬೆಳಗಾವಿ, (ಏ.27): ಕೇಂದ್ರದ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರ ಪತ್ನಿ ಹಾಗೂ ಲೋಕಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಬಗ್ಗೆ ಫೇಸ್‍ಬುಕ್‍ನಲ್ಲಿ ಮಾಹಿತಿ ಹಂಚಿಕೊಂಡಿರುವ ಮಂಗಳಾ ಅಂಗಡಿ ಅವರು, ರೋಗದ ಲಕ್ಷಣಗಳು ಇಲ್ಲದಿದ್ದರೂ ಕೋವಿಡ್ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿರುವೆ. ನನ್ನ ಸಂಪರ್ಕಕ್ಕೆ ಬಂದವರು ಸಹ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಬೆಳಗಾವಿ ಬೈ ಎಲೆಕ್ಷನ್: ಮಂಗಳಾ ಅಂಗಡಿಗೆ ಬಿಜೆಪಿ​ ಟಿಕೆಟ್​ ಕೊಡುವುದಕ್ಕೆ 5 ಕಾರಣಗಳು

ಸದ್ಯ ಅವರು ಬೆಳಗಾವಿ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕ್ವಾರಂಟೈನ್‍ನಲ್ಲಿದ್ದಾರೆ. ಇನ್ನು ಕಳೆದ ಕೊರೋನಾ ಮೊದಲ ಅಲೆಯಲ್ಲಿ ಸಂದರ್ಭದಲ್ಲಿ ಮಂಗಳ ಅವರ ಪತಿ ಸುರೇಶ್ ಅಂಗಡಿ ಅವರಿಗೂ ಸಹ ಕೊರೋನಾ ಸೋಂಕು ತಗುಲಿತ್ತು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.

ಕೋವಿಡ್ ತಪಾಸಣೆಗೆ ಒಳಪಟ್ಟಾಗ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ, ಆದರೂ ವೈದ್ಯರ ಸಲಹೆ ಮೇರೆಗೆ...

Posted by Mangal Suresh Angadi on Monday, April 26, 2021