* ಕನ್ನಡದ ದನಿಯಾಗಿ ಕೆಲಸ ಮಾಡುವೆ* ಕನ್ನಡ ನನ್ನ ಪ್ರಥಮ ಆಯ್ಕೆ* ಪತಿ ರಾಜ್ಯಸಭೆಗೆ ಆಯ್ಕೆಯಾಗಿರುವುದು ತುಂಬಾ ಸಂತಸ ತಂದಿದೆ: ಪರಿಮಳ
ಬೆಂಗಳೂರು(ಜೂ.11): ಕನ್ನಡ ನನ್ನ ಪ್ರಥಮ ಆಯ್ಕೆಯಾಗಿರುತ್ತದೆ. ಸಂಸತಿನಲ್ಲಿ ಯಾವಾಗಲೂ ಕನ್ನಡದ ದನಿಯಾಗಿರುತ್ತೇನೆ ಎಂದು ರಾಜ್ಯಸಭೆಗೆ ಆಯ್ಕೆಯಾಗಿರುವ ನಟ ಜಗ್ಗೇಶ್ ತಿಳಿಸಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಗೆ ನನ್ನನ್ನು ಆಯ್ಕೆ ಮಾಡಿದ ಎಲ್ಲ ಶಾಸಕರು ಹಾಗೂ ಕಾರ್ಯಕರ್ತರಿಗೂ ಧನ್ಯವಾದ ಅರ್ಪಿಸುತ್ತೇನೆ. ಸಂಸತ್ತಿನಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುತ್ತೇನೆ. ನನ್ನ ಕರ್ನಾಟಕದ ದನಿಯಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
Rajya Sabha Election: ಬಿಜೆಪಿಗೆ ಒಕ್ಕಲಿಗರ ಸೆಳೆಯಲು ಜಗ್ಗೇಶ್ ರಾಜ್ಯಸಭೆಗೆ ಆಯ್ಕೆ?
ನನ್ನ ಬೆಳವಣಿಗೆಗೆ ಕಾರಣಕರ್ತರಾದ ಎಲ್ಲಾ ಕನ್ನಡಿಗರಿಗೂ ಹಾಗೂ ಪಕ್ಷದ ಕಾರ್ಯಕರ್ತರಿಗೂ ಧನ್ಯವಾದ ಹೇಳುತ್ತೇನೆ. ಅನೇಕ ಕಾರ್ಯಕ್ರಮಗಳು ಇವೆ. ಆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಕೆಲಸ ಮಾಡುತ್ತೇನೆ ಎಂದು ಜಗ್ಗೇಶ್ ತಿಳಿಸಿದರು. ಇದೇ ವೇಳೆ ಮಾತನಾಡಿದ ಜಗ್ಗೇಶ್ ಪತ್ನಿ ಪರಿಮಳ, ಜಗ್ಗೇಶ್ ರಾಜ್ಯಸಭೆಗೆ ಆಯ್ಕೆಯಾಗಿರುವುದು ಬಹಳ ಸಂತೋಷವಾಗಿದೆ. ಕಳೆದ 40 ವರ್ಷಗಳಿಂದ ಜಗ್ಗೇಶ್ ಕನ್ನಡದ ಸೇವೆ ಮಾಡಿಕೊಂಡು ಬಂದಿದ್ದಾರೆ. ಅದರ ಬಗ್ಗೆ ಜನರಿಗೆ ಚೆನ್ನಾಗಿ ಗೊತ್ತಿದೆ. ಪತಿ ರಾಜ್ಯಸಭೆಗೆ ಆಯ್ಕೆಯಾಗಿರುವುದು ತುಂಬಾ ಸಂತಸ ತಂದಿದೆ ಎಂದು ಹೇಳಿದರು.
