ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತನಿಖೆ ನಡೆಸಿ ಹೆಣ್ಣು ಭ್ರೂಣ ಹತ್ಯೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದರು.

Take Strict Action against Female Foeticide Says Dr Shailendra Beldale gvd

ಬೀದರ್ (ಡಿ.14): ಹೆಣ್ಣು ಭ್ರೂಣ ಹತ್ಯೆ ಲಿಂಗ ಭೇದಯಂತಹ ಮಹಾಪಾಪದಲ್ಲಿ ಯಾರೆಲ್ಲ ಇದ್ದಾರೆ, ಯಾರೆಲ್ಲ ಭ್ರೂಣ ಹತ್ಯೆ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಸೂಕ್ಷ್ಮವಾಗಿ ಮಾಹಿತಿ ಕಲೆ ಹಾಕಿ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತನಿಖೆ ನಡೆಸಿ ಹೆಣ್ಣು ಭ್ರೂಣ ಹತ್ಯೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದರು.

ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಗೆ ಕಠಿಣ ಕ್ರಮ ಜರುಗಿಸುವ ನಿಟ್ಟಿನಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಅವರು ಸಭಾಧ್ಯಕ್ಷರ ಮೂಲಕ ಆರೋಗ್ಯ ಸಚಿವರಿಗೆ ಸಲಹೆ ನೀಡಿದರು. ನಮ್ಮ ಭಾರತ ದೇಶದಲ್ಲಿ ಸ್ತ್ರೀಯರಿಗೆ ಉನ್ನತ ಸ್ಥಾನಮಾನ ಗೌರವವಿದೆ, ಹೀಗಾಗಿ ನಾವೆಲ್ಲರೂ ಭಾರತ್‌ ಮಾತಾಕಿ ಜೈ ಎಂದು ಘೋಷಣೆ ಕೂಗುತ್ತೇವೆ. ಇಂದು ಸಮಾಜದಲ್ಲಿ ಹೆಣ್ಣು ಹುಟ್ಟುವ ಮೊದಲೇ ಹತ್ಯೆ ಮಾಡುವ ಕೆಲಸ ಅವ್ಯವಹಾರವಾಗಿ ನಡೆಯುತ್ತಿರುವುದು ನಿಜಕ್ಕೂ ಆತಂಕಕಾರಿ ಬೆಳವಣಿಗೆ. 

ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ 83,000 ಕೋಟಿ ರು. ಅನ್ಯಾಯ: ಸಿಎಂ ಸಿದ್ದರಾಮಯ್ಯ

ಹೀಗಾಗಿ ಭ್ರೂಣ ಹತ್ಯೆ ವಿರುದ್ಧ ಕಠಿಣ ಕಾನೂನು ಜಾರಿ ಮಾಡಿದರೆ ಮಾತ್ರ ಈ ಹೀನಾಯ ಕೃತ್ಯ ತಡೆಯಲು ಸಾಧ್ಯ ಎಂದು ಶಾಸಕರು ಸಭಾಧ್ಯಕ್ಷರ ಮೂಲಕ ಆರೋಗ್ಯ ಸಚಿವರಿಗೆ ಸಲಹೆ ನೀಡಿದರು. ಹೆಣ್ಣು ಭ್ರೂಣ ಹತ್ಯೆ ತಡೆಯಲು ಆಶಾ ಕಾರ್ಯಕರ್ತೆ, ವೈದ್ಯ ಸಿಬ್ಬಂದಿ ಹಿಡಿದು ವೈದ್ಯರು ಹಾಗೂ ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ವರೆಗೂ ಭ್ರೂಣ ಹತ್ಯೆ ವಿರುದ್ಧದ ಕಾನೂನಿನ ಭಯ ಇರಬೇಕು ಮತ್ತು ಗ್ರಾಮೀಣ ಭಾಗದಲ್ಲಿ ಈ ಕೃತ್ಯದ ವಿರುದ್ಧ ಇರುವ ಕಠಿಣ ಕಾನೂನಿನ ಕ್ರಮ ಕುರಿತು ಅರಿವು ಮೂಡಿಸಿ ಈ ಕೃತ್ಯದಲ್ಲಿ ಭಾಗಿಯಾಗುವ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಜಾನುವಾರುಗಳಿಗೆ ನೀರಿನ ತೊಟ್ಟಿ ನಿರ್ಮಿಸಿ: ಜಾನುವಾರುಗಳಿಗೆ ಪ್ರತಿಯೊಂದು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ನೀರಿನ ತೊಟ್ಟಿಯ ವ್ಯವಸ್ಥೆ ಮಾಡಬೇಕೆಂದು ಶಾಸಕ ಡಾ ಶೈಲೇಂದ್ರ ಬೆಲ್ದಾಳೆ ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ, ಕೃಷಿ ಹಾಗೂ ತೋಟಗಾರಿಕೆ, ಪಶು ಇಲಾಖೆ, ಕಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯನ್ನು ಈಗಾಗಲೆ ಬರ ಘೋಷಣೆಯಾದ ಹಿನ್ನೆಲೆ ಮುಂದಿನ ದಿನಗಳಲ್ಲಿ ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದರು.

ಕ್ಷೇತ್ರದ ಯಾವ ಶಾಲಾ ಕಾಲೇಜು ಹಾಗೂ ಹಾಸ್ಟೆಲ್‌ನಲ್ಲಿ ನೀರಿನ ಕೊರತೆ ಇದೆಯೊ ಅದನ್ನು ಗುರುತಿಸಿ ಕೊಳವೆ ಬಾವಿಗಳನ್ನು ಕೊರೆದು ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕೆಂದು ನೀರಾವರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೇಸಿಗೆಯಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ, ಮೇವಿನ ಕೊರತೆಯಾಗದಂತೆ ಎಚ್ಚರ ವಹಿಸಬೇಕು ಮತ್ತು ಪರಿಸರ ಬೆಳೆಸಿ ಉಳಿಸಲು ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಗುಳೆ ಜಾನುವಾರುಗಳನ್ನು ಗೋಶಾಲೆಗೆ ಒಪ್ಪಿಸಿ: ಗುಳೆ ಜಾನುವಾರುಗಳನ್ನು ಗುರುತಿಸಿ ಗೋಶಾಲೆಗೆ ಒಪ್ಪಿಸಬೇಕು. ಖಾಸಗಿಯಾಗಿ ರೈತರು ಮೇವು ಬೆಳೆಯಲು ಉತ್ತೇಜನ ನೀಡುವಂತಹ ಯೋಜನೆ ಜಾರಿಗೆ ತಂದು ಸರ್ಕಾರದಿಂದ ರೈತ ಬೆಳೆದ ಮೇವು ಖರೀದಿಸಿ ಗೋಶಾಲೆಯಲ್ಲಿ ಮೇವು ತಲುಪಿಸಲು ವ್ಯವಸ್ಥೆ ಮಾಡಬೇಕು ಈ ಕುರಿತು ಹೆಚ್ಚಿನ ಗಮನ ಹರಿಸಬೇಕೆಂದರು.

ಪಬ್ಲಿಸಿಟಿಗಾಗಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಸಚಿವ ಮಧು ಬಂಗಾರಪ್ಪ ಕಿಡಿ

ಪ್ರತಿಯೊಂದು ಗ್ರಾಮದಲ್ಲಿ ಕುಡಿಯುವ ನೀರಿನ ತೊಟ್ಟಿಗಳನ್ನು ನಿರ್ಮಾಣ ಮಾಡಬೇಕು. ಅದಕ್ಕೆ ಗ್ರಾಪಂ ವತಿಯಿಂದ ನೀರಿನ ಪೈಪ್‌ಲೈನ್ ವ್ಯವಸ್ಥೆ ಮಾಡಿ ನೀರು ಸಂಗ್ರಹಿಸಬೇಕು. ಇದರಿಂದ ಗ್ರಾಮದ ಸುತ್ತಮುತ್ತಲಿನ ಜಾನುವಾರುಗಳಿಗೆ ನೀರೊದಗಿಸುವ ಕಾರ್ಯವಾಗುತ್ತದೆ. ಪಶುವೈದ್ಯಕೀಯ ಅಧಿಕಾರಿಗಳು ಗುಳೆ ಜಾನುವಾರು ಕುರಿತು ಹೆಚ್ಚಿನ ನಿಗಾ ವಹಿಸಬೇಕು. ಸರ್ಕಾರಿ ಗೋಮಾಳೆ ಜಮೀನಿನಲ್ಲಿ ಮೇವಿನ ಬ್ಯಾಂಕ್ ಅಥವಾ ಮೇವು ಮತ್ತು ನೀರು ಸಂಗ್ರಹ ಘಟಕ ನಿರ್ಮಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

Latest Videos
Follow Us:
Download App:
  • android
  • ios