ನನ್ನನ್ನು ಲೂಟಿ ರವಿ ಎಂದರೆ ಸಿದ್ದ- ಪೆದ್ದ ಎನ್ನಬಹುದೇ?: ಸಿ.ಟಿ.ರವಿ
ನನ್ನನ್ನು ಲೂಟಿ ರವಿ ಎಂದರೆ ನಾನು ‘ಸಿದ್ದ ಪೆದ್ದ’ ಎನ್ನಬಹುದಲ್ಲವೆ? ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಪ್ರಾಸಬದ್ಧವಾಗಿ ಸಿ.ಟಿ. ಅನ್ನು ಲೂಟಿ ಎನ್ನುವುದಾದರೆ ಸಿದ್ದು ಪೆದ್ದ ಅನ್ನಬಹುದು.
ಬೆಂಗಳೂರು (ಸೆ.13): ನನ್ನನ್ನು ಲೂಟಿ ರವಿ ಎಂದರೆ ನಾನು ‘ಸಿದ್ದ ಪೆದ್ದ’ ಎನ್ನಬಹುದಲ್ಲವೆ? ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಪ್ರಾಸಬದ್ಧವಾಗಿ ಸಿ.ಟಿ. ಅನ್ನು ಲೂಟಿ ಎನ್ನುವುದಾದರೆ ಸಿದ್ದು ಪೆದ್ದ ಅನ್ನಬಹುದು. ನಾನು ಏನು ಹೇಳಬೇಕೋ ಅದನ್ನು ಸೂಕ್ಷ್ಮವಾಗಿ ಹೇಳಿದ್ದೇನೆ. ನನಗೆ ಕೇಳಿದಂತೆ ಇತರರಿಗೂ ಅಷ್ಟೇ ಗಟ್ಟಿಯಾಗಿ ಪ್ರಶ್ನೆ ಕೇಳಲಿ. ಸಮಾಜವಾದಿಗಳ ಮಜಾವಾದಿತನ ನೋಡಿದ್ದೇನೆ. ಸೆಂಟ್ ಹೊಡೆದುಕೊಂಡು ವಾಸನೆ ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದು ಸಿ.ಟಿ.ರವಿ ತಿರುಗೇಟು ನೀಡಿದರು.
ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಕುರಿತು ಕೆಂಪಣ್ಣ ಆಯೋಗವನ್ನು ಸತ್ಯಾಸತ್ಯತೆ ಹೊರಗೆ ತರಲು ರಚನೆ ಮಾಡಲಾಗಿದೆ. ಟಿಎ, ಡಿಎ ತೆಗೆದುಕೊಳ್ಳಲು ಅಲ್ಲ. ಸಿಟಿನ ಲೂಟಿ ಎನ್ನಬೇಕಾದರೆ, ಇವರನ್ನು ಏನೆಂದು ಕರೆಯಬೇಕು? ಇವರೇನು ಸತ್ಯಹರಿಶ್ಚಂದ್ರನ ಮೊಮ್ಮಕ್ಕಳಾ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಟೇಬಲ್ ಗುದ್ದಿ ಕೇಳುತ್ತಿದ್ದರು, ನಾನು ಏನು ಹೇಳಬೇಕೋ ಅದನ್ನು ಸೂಕ್ಷ್ಮವಾಗಿ ಹೇಳಿದ್ದೇನೆ. ನನಗೆ ಕೇಳಿದಂತೆ ಇತರರಿಗೂ ಅಷ್ಟೇ ಗಟ್ಟಿಯಾಗಿ ಪ್ರಶ್ನೆ ಕೇಳಲಿ. ಸಮಾಜವಾದಿಗಳ ಮಜಾವಾದಿತನ ನೋಡಿದ್ದೇನೆ.
Davanagere: ನೀತಿ, ನೇತಾ, ನಿಯತ್ತು ಬಿಜೆಪಿಯ ಆಧಾರ: ಸಿ.ಟಿ.ರವಿ
ಸೆಂಟ್ ಹೊಡೆದುಕೊಂಡು ವಾಸನೆ ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದು ಟೀಕಾಪ್ರಹಾರ ನಡೆಸಿದ ಅವರು, ಕಲ್ಲಿದ್ದಲು ಹಗರಣ ಸಂಬಂಧ ನೀಡಿರುವ ಹೇಳಿಕೆಗೆ ಈಗಲೂ ಬದ್ಧ. ಜನಸ್ಪಂದನ ಸಮಾವೇಶದ ವೇದಿಕೆ ಹಿಂದೆ ಮಾಧ್ಯಮಕ್ಕೆ ಸೂಕ್ಷ್ಮವಾಗಿ ಹೇಳಿದ್ದೇನೆ. ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಾನು ಆ ಹೇಳಿಕೆ ನೀಡಿದ್ದೇನೆ ಎಂದರೆ, ಆ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು ಎಂದೇ ಅರ್ಥ ಎಂದರು. ಇನ್ನು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಚ್ಚೆ ಹರುಕ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮತ್ತು ಸಿದ್ದರಾಮಯ್ಯ ಅವರಿಬ್ಬರದ್ದು ಒಂದೇ ಬ್ಲಡ್. ವಿಶ್ವನಾಥ್ ಅವರನ್ನೇ ಕೇಳಿ ಎಂದು ಕಿಡಿಕಾರಿದರು.
ಕಾಂಗ್ರೆಸ್‌ನ ಮಟಾಶ್ ಲೆಗ್ ಬಗ್ಗೆ ಹುಷಾರು: ಅರ್ಕಾವತಿ ಹಗರಣದ ರೀಡೂ ಪಿತಾಮಹ ಯಾರು? ಸೋಲಾರ್ ಹಗರಣದ ಖದೀಮ ಯಾರು ಎಂಬುದು ಶೀಘ್ರದಲ್ಲೇ ಗೊತ್ತಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ದೊಡ್ಡಬಳ್ಳಾಪುರದ ಹೊರವಲಯದಲ್ಲಿ ನಡೆದ ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಲವು ಖಳನಾಯಕರು ಹೀರೋಗಳ ರೀತಿ ಪೋಸು ನೀಡುತ್ತಿದ್ದಾರೆ. ಅರ್ಕಾವತಿ ಹಗರಣದ ರೀಡೂ ಪಿತಾಮಹ ಯಾರು? ಸಿದ್ದರಾಮಯ್ಯ ಉತ್ತರಿಸುತ್ತಾರಾ? ರೈತರ ಹೆಸರಿನಲ್ಲಿ ನಡೆಸಿದ ಸೋಲಾರ್ ಹಗರಣದ ಖದೀಮ ಯಾರು ಎಂದು ರಾಜ್ಯದ ಜನತೆಗೆ ಹೇಳಬೇಕಾ? ಕೆಂಪಣ್ಣ ಆಯೋಗದ ವರದಿ ಬಹಿರಂಗವಾದರೆ ಕಳ್ಳ, ಮಳ್ಳ, ಸುಳ್ಳರ ನಾಟಕ ಗೊತ್ತಾಗಲಿದೆ ಎಂದರು.
ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ಸಿಗನೂ ಗಲ್ಲಿಗೇರಿಲ್ಲ: ಸಿ.ಟಿ. ರವಿ
ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಕೆರೆಗಳು ತುಂಬಿ ಕೋಡಿ ಬಿದ್ದು ಗಂಗಮ್ಮನ ಪೂಜೆ ಮಾಡುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೆರೆ ತುಂಬುತ್ತಾ? ಸಿದ್ದರಾಮಯ್ಯ ಅವಧಿಯಲ್ಲಿ ಕೆರೆಗಳು ತುಂಬಿದ್ದವಾ? ಬಿಜೆಪಿ ಕಾಲ್ಗುಣ ಒಳ್ಳೇದೋ, ಕಾಂಗ್ರೆಸ್ ಕಾಲ್ಗುಣ ಒಳ್ಳೇದೋ ನೋಡಿ ಯೋಚಿಸಿ. ಕೆಲವರು ಕಾಲಿಟ್ಟರೆ ಮಟಾಶ್ ಲೆಗ್ ಎನ್ನಲಾಗುತ್ತದೆ. ಅಂಥವರ ಬಗ್ಗೆ ಹುಷಾರಾಗಿರಿ ಎಂದು ಮಾರ್ಮಿಕವಾಗಿ ಹೇಳಿದರು. ಈ ಭಾಗದಲ್ಲಿ ಡಾ.ಕೆ.ಸುಧಾಕರ್ ಹಾಗೂ ರಾಜೇಶ್ ಇಬ್ಬರೇ ಬಿಜೆಪಿಯಿಂದ ಗೆದ್ದಿರೋದು. ಮುಂದಿನ ಚುನಾವಣೆಯಲ್ಲಿ ಈ ಭಾಗದಿಂದ 10ಕ್ಕೂ ಹೆಚ್ಚು ಸ್ಥಾನ ಗೆಲ್ಲಿಸಿಕೊಡಬೇಕು ಎಂದರು.