ಚುನಾವಣಾ ಅಂಗಳದಲ್ಲಿ ನಾಯಕರ ವಾಗ್ಯುದ್ಧ: ಸಿದ್ದು ವರ್ಸಸ್ ಅಮಿತ್ ಶಾ ಬರ ಪರಿಹಾರ ಜಟಾಪಟಿ..!
ರಾಜ್ಯದಲ್ಲಿ ತೀವ್ರ ಬರಗಾಲವಿದೆ. ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರ ಎದುರಿಸುತ್ತಿವೆ. ಹೀಗಾಗಿ, ಕೇಂದ್ರದಿಂದ 18 ಸಾವಿರ ಕೋಟಿ ರು.ಗಳ ಬರ ಪರಿಹಾರಕ್ಕಾಗಿ ಮನವಿ ಸಲ್ಲಿಸಲಾಗಿದೆ. ಆದರೆ, ನಮಗೆ ಬರಗಾಲದ ಪರಿಹಾರವಾಗಿ ಐದು ಪೈಸೆಯೂ ಈವರೆಗೆ ಬಂದಿಲ್ಲ, ಪರಿಹಾರ ಕೊಡದೆ ಇಲ್ಲಿಗೆ ಬಂದು ಹೇಗೆ ಮತ ಕೇಳುತ್ತಾರೆ? ಎಂದು ಅಮಿತ್ ಶಾ ವಿರುದ್ಧ ಕಿಡಿ ಕಾರಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು/ಮೈಸೂರು(ಏ.03): ತೀವ್ರ ಬರಗಾಲವಿದ್ದರೂ ರಾಜ್ಯಕ್ಕೆ ಬರ ಪರಿಹಾರ ನೀಡದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕನ್ನಡಿಗರ ಮತ ಕೇಳಲು ಯಾವುದೇ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಮೈಸೂರು ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ತೀವ್ರ ಬರಗಾಲವಿದೆ. ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರ ಎದುರಿಸುತ್ತಿವೆ. ಹೀಗಾಗಿ, ಕೇಂದ್ರದಿಂದ 18 ಸಾವಿರ ಕೋಟಿ ರು.ಗಳ ಬರ ಪರಿಹಾರಕ್ಕಾಗಿ ಮನವಿ ಸಲ್ಲಿಸಲಾಗಿದೆ. ಆದರೆ, ನಮಗೆ ಬರಗಾಲದ ಪರಿಹಾರವಾಗಿ ಐದು ಪೈಸೆಯೂ ಈವರೆಗೆ ಬಂದಿಲ್ಲ, ಪರಿಹಾರ ಕೊಡದೆ ಇಲ್ಲಿಗೆ ಬಂದು ಹೇಗೆ ಮತ ಕೇಳುತ್ತಾರೆ? ಎಂದು ಅಮಿತ್ ಶಾ ವಿರುದ್ಧ ಕಿಡಿ ಕಾರಿದರು.
ಎಸ್‌ಡಿಪಿಐ ಬೆಂಬಲಿತ ಕಾಂಗ್ರೆಸ್ ಸರ್ಕಾರದಲ್ಲಿ ಜನ ಸುರಕ್ಷತೆವೇ?: ಅಮಿತ್ ಶಾ
ನಾವೇನು ಕೇಂದ್ರದ ಬಳಿ ಭಿಕ್ಷೆ ಬೇಡುತ್ತಿಲ್ಲ. ನಾವು ತೆರಿಗೆ ಕಟ್ಟುತ್ತೇವೆ, ನಮ್ಮ ತೆರಿಗೆ ಹಣದ ಪಾಲು ಕೇಳುತ್ತಿದ್ದೇವೆ. ಅಮಿತ್ ಶಾ ಅವರು ತಮ್ಮ ಮನೆಯಿಂದ ಬರ ಪರಿಹಾರದ ಹಣ ಕೊಡುತ್ತಾರಾ? ಅದೆನೂ ನಮಗೆ ಭಿಕ್ಷೆಯೇ ಎಂದವರು ಖಾರವಾಗಿ ಪ್ರಶ್ನಿಸಿದರು. ಜೆಡಿಎಸ್‌ನವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಒಟ್ಟಾಗಿ ಲೋಕಸಭಾ ಚುನಾವಣೆ ಎದುರಿಸುತ್ತಿದ್ದಾರೆ. ಕುಮಾರಸ್ವಾಮಿಯವರುಬಿಜೆಪಿಯವಕ್ತಾರರರೀತಿಮಾತನಾಡುತ್ತಿದ್ದಾರೆ. ಕುಮಾರಸ್ವಾಮಿಯವರು ರಾಜ್ಯಕ್ಕೆ ಬರ ಪರಿಹಾರ ಕೊಡಿಸಿ ನಂತರ ಅಮಿತ್ ಶಾರನ್ನು ಕರೆದುಕೊಂಡು ಬರಬೇಕಿತ್ತು. ಕನ್ನಡಿಗರು ಅವರಿಗೆ ಇದನ್ನೆಲ್ಲಾ ಕೇಳಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ಪರಿಹಾರ ಕೊಡದೇ ಇರುವುದನ್ನು ಕುಮಾರಸ್ವಾಮಿಯವರು ಸಮರ್ಥಿಸಿಕೊಳ್ಳುತ್ತಾರಾ ಎಂದು ಅವರು ಪ್ರಶ್ನಿಸಿದರು. ಕನ್ನಡಿಗರು ಈ ಚುನಾವಣೆಯಲ್ಲಿ ಅವರಿಗೆ ಸರಿಯಾದ ಪಾಠ ಕಲಿಸುತ್ತಾರೆ ಎಂದು ಕಿಡಿ ಕಾರಿದರು.
ತಿಂಗಳು ತಡ ಮಾಡಿ ಕೇಳಿದ್ರು, ಅದಕ್ಕೇ ನೆರವು ದೊರೆತಿಲ್ಲ: ಅಮಿತ್ ಶಾ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಮೂರು ತಿಂಗಳು ತಡವಾಗಿ ಪ್ರಸ್ತಾವನೆ ಸಲ್ಲಿಸಿದ ಕಾರಣ ಕೇಂದ್ರ ಸರ್ಕಾರವು ಸಮಯಕ್ಕೆ ಸರಿಯಾಗಿ ಬರ ಪರಿಹಾರ ಬಿಡುಗಡೆಮಾಡಲುಸಾಧ್ಯವಾಗ ಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಶಾ ಅವರ ಈ ಹೇಳಿಕೆಯು ಚುನಾವಣೆಯ ಸಂದ ರ್ಭದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಭಾರಿ ವಾಕ್ತಮರಕ್ಕೆ ನಾಂದಿ ಹಾಡಿದೆ.
ಮಂಗಳವಾರ ಅರಮನೆ ಮೈದಾನ ದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಕರ್ನಾಟಕದಲ್ಲಿ ಬರಗಾಲವಿದೆ. ರಾಜ್ಯ ಸರ್ಕಾರದಿಂದ ಮೂರು ತಿಂಗಳು ತಡವಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರದ ಮನವಿ ಇದೀಗ ಚುನಾವಣಾ ಆಯೋಗದಲ್ಲಿ ಸಿಲುಕಿಕೊಂಡಿದೆ. ಆದರೆ, ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಪರಿಹಾರ ಕೋರಿ ತಮ್ಮ ಸರ್ಕಾರ ಕೇಂದ್ರದ ಮೊರೆ ಹೋಗಿ ಐದು ತಿಂಗಳಾದರೂ ರಾಜ್ಯಕ್ಕೆ ಒಂದು ರುಪಾಯಿ ಕೂಡ ನೀಡಿಲ್ಲ ಎಂದು ಪದೇ ಪದೇ ಹೇಳಿಕೆ ನೀಡುತ್ತಿದ್ದರಿಂದ ಅಮಿತ್ ಶಾ ಅವರು ಬಿಜೆಪಿ ಸಮಾವೇಶದಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ತಿರುಗೇಟು ನೀಡಿದರು.
ಮುಂದುವರೆದ ಅಮಿತ್ ಶಾ ಅವರು, ಹಿಂದಿನ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ ಯುಪಿಎ ಸರ್ಕಾರ ಕರ್ನಾಟಕಕ್ಕೆ ನೀಡಿದ್ದು ಕೇವಲ 1.42 ಲಕ್ಷ ಕೋಟಿ ರು. ಅನುದಾನ. ಆದರೆ, ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು 10 ವರ್ಷಗಳಲ್ಲಿ ಮೂರು ಪಟ್ಟು ಅನುದಾನ ನೀಡಿದೆ. 4.91 ಲಕ್ಷ ಕೋಟಿ ರು. ಅನುದಾನ ಒದಗಿಸಲಾಗಿದೆ
ಎಂದು ತಿಳಿಸಿದರು.
ಶಾ ಹೇಳಿದ್ದು ನಿಜವೇ ಆದರೆ ರಾಜಕೀಯ ನಿವೃತ್ತಿ: ಸಿಎಂ
ಬೆಂಗಳೂರು: ಬರ ಪರಿಹಾರ ನೀಡುವ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ದ ಸುಳ್ಳು ಆರೋಪ ಮಾಡುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿಯ ಚುನಾವಣಾ ಪ್ರಚಾರವನ್ನು ಸುಳ್ಳುಗಳ ಮೂಲಕವೇ ಉದ್ಘಾಟಿಸಿದ್ದಾರೆ. ಅವರ ಸುಳ್ಳಿನ ಪ್ರಚಾರಕ್ಕೆ ಅಭಿನಂದಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
'ರಾಜ್ಯ ಸರ್ಕಾರ ಮೂರು ತಿಂಗಳು ವಿಳಂಬವಾಗಿ ಬರ ಪರಿಹಾರ ಕೋರಿ ಮನವಿ ಸಲ್ಲಿಸಿತ್ತು. ಅಷ್ಟರಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾದ ಕಾರಣ ಪರಿಹಾರ ನೀಡಲು ಸಾಧ್ಯವಾಗಿಲ್ಲ' ಎಂದು ಹೇಳಿರುವ ಅಮಿತ್ ಶಾ ಅವರ ಹೇಳಿಕೆಗೆ ಪತ್ರಿಕಾ ಹೇಳಿಕೆ ಮೂಲಕ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.
'ಬರ ಪರಿಹಾರ ನೀಡುವ ವಿಚಾರವಾಗಿ ರಾಮನಗರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಅಪ್ಪಟ ಸುಳ್ಳು ಹೇಳಿದ್ದೀರಿ. ಈ ಸುಳ್ಳನ್ನು ಹೇಳುವಾಗ ನಿಮ್ಮ ಆತ್ಮಸಾಕ್ಷಿಯಾದರೂ ಕುಟುಕಲಿಲ್ಲವೇ?' ಎಂದು ಪ್ರಶ್ನಿಸಿದ್ದಾರೆ.
'ನಾನು ನಿಮ್ಮ ಮುಂದಿಡುವ ಸತ್ಯವನ್ನು ಸುಳ್ಳೆಂದು ನೀವು ಸಾಬೀತುಮಾಡಿದರೆನಾನು ರಾಜಕೀಯದಿಂದಲೇ ನಿವೃತ್ತನಾಗುತ್ತೇನೆ. ಹಾಗೆಯೇ, ನೀವು ಹೇಳಿರುವ ಮಾತನ್ನು ಸತ್ಯ ಎಂದು ಸಾಬೀತು ಮಾಡಲಾಗದಿದ್ದರೆ ನೀವೇನು ಮಾಡುತ್ತೀರಿ ಎಂದು ನೀವೇ ನಿರ್ಧರಿಸಿ' ಎಂದು ಸವಾಲು ಹಾಕಿದ್ದಾರೆ.
ಸಿದ್ದು ವಿವರಣೆ ಇಷ್ಟು:
ಮಳೆ ಅಭಾವದ ಸೂಚನೆ ಸಿಗುತ್ತಿದ್ದಂತೆಯೇ ರಾಜ್ಯ ಸರ್ಕಾರ2023ರ ಸರ್ಕಾರ2023ರ ಆ.22ರಂದು ಆ.22ರಂ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಪ್ರಕೃತಿ ವಿಕೋಪ ಸಂಪುಟ ಉಪಸಮಿತಿಯ ಮೊದಲ ಸಭೆ ನಡೆಸಿ, ರಾಜ್ಯದ 116 ತಾಲೂಕುಗಳಲ್ಲಿ ಬರಪೀಡಿತವಾಗಿರುವುದನ್ನು ದಾಖಲಿಸಿತು. ಅಂತಿಮವಾಗಿ ನನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಅದರಂತೆ ತುರ್ತು ಪರಿಹಾರವಾಗಿ 4,860 ಕೋಟಿ ರು. ನೀಡಬೇಕೆಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಿಗೆ ಸೆ. 22ರಂದು ರಾಜ್ಯ ಸರ್ಕಾರ ಮನವಿ ಸಲ್ಲಿಸಿತು. ಆ ಮನವಿಯಂತೆ ಕೇಂದ್ರ ಸರ್ಕಾರ 10 ಸದಸ್ಯರ ತಜ್ಞರ ತಂಡವನ್ನು ರಾಜ್ಯಕ್ಕೆ ಕಳುಹಿಸಿತು ಹಾಗೂ ಆ ತಂಡವು ಅಕ್ಟೋಬರ್ 4ರಿಂದ 9ರವರೆಗೆ ರಾಜ್ಯದ ಬರ ಅಧ್ಯಯನ ನಡೆಸಿತು.
Lok Sabha Election 2024: ಕರ್ನಾಟಕದಲ್ಲಿ ಕಾಂಗ್ರೆಸ್ ಖಾತೆ ತೆರೆಯಲು ಬಿಡಬೇಡಿ: ಅಮಿತ್ ಶಾ
ಆನಂತರವೂ ರಾಜ್ಯದ ಸಂಪುಟ ಉಪಸಮಿತಿ ಅಕ್ಟೋಬರ್‌ನಲ್ಲಿ ನಾಲ್ಕು ಬಾರಿ ಸಭೆ ನಡೆಸಿ ರಾಜ್ಯದ ದ ಒಟ್ಟು 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರಪೀಡಿತ ಎಂದು ಘೋಷಿಸಿತು. ಬರಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯ ನಡೆಸಲು ಎನ್‌ಡಿಆರ್ ಎಫ್‌ನಿಂದ 18,171.44 ಕೋಟಿ ರು. ನೀಡಬೇಕೆಂದು ಕೇಂದ್ರ ಕೃಷಿ ಸಚಿವರಿಗೆ 2023ರ ನವೆಂಬರ್ 15ರಂದು ನಾನೇ ಮನವಿ ಪತ್ರವನ್ನು ಬರೆದಿದ್ದೆ. ಆದರೆ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಬರದ ಕಾರಣ 2023ರ ಡಿ. 19ರಂದು ನಾನು ಮತ್ತು ಕಂದಾಯ ಸಚಿವರು ಪ್ರಧಾನಿ ನರೇಂದ್ರ ಮೋದಿ ಹಾಗೂ ನಿಮ್ಮನ್ನು ಭೇಟಿಯಾಗಿ ಬರ ಪರಿಹಾರಕ್ಕಾಗಿ ಮನವಿ ಮಾಡಿದ್ದೆವು. ಆ ಭೇಟಿ ಸಮಯದಲ್ಲಿ ಒಂದು ವಾರದೊಳಗೆ ಉನ್ನತಾಧಿಕಾರಿಗಳ ಸಭೆ ನಡೆಸಿ ಪರಿಹಾರ ನೀಡುವ ನಿರ್ಧಾರ ಕೈಗೊಳ್ಳುವುದಾಗಿ ನೀವೇ ಆಶ್ವಾಸನೆ ನೀಡಿದ್ದೀರಿ.
ನೀವು ಕೊಟ್ಟ ಒಂದು ವಾರದ ಆಶ್ವಾಸನೆ ಮುಗಿದು ಮೂರು ತಿಂಗಳಾಗಿವೆ. ಈಗ ರಾಜ್ಯಕ್ಕೆ ಬಂದು ನೀವು ಮಾಡಿರುವ ಘನಘೋರ ಅನ್ಯಾಯವನ್ನು ಮುಚ್ಚಿಹಾಕಲು ಸುಳ್ಳಿನ ಮೊರೆ ಹೋಗಿದ್ದೀರಿ. ಆದರೆ, ಜಾಗೃತ ಕನ್ನಡಿಗರು ನಿಮ್ಮ ಸುಳ್ಳಿಗೆ ಬಲಿಯಾಗುವುದಿಲ್ಲ. ನಿಮ್ಮ ದ್ರೋಹಕ್ಕೆ ತಕ್ಕ ಉತ್ತರ ನೀಡುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.