ಚೆನ್ನೈ (ನ.01): ಕೊರೋನಾ ಸೋಂಕು ತಗುಲಿದ್ದರಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಮಿಳುನಾಡು ಕೃಷಿ ಸಚಿವ ಆರ್. ದೊರೈಕಣ್ಣು ಶನಿವಾರ ಮಧ್ಯರಾತ್ರಿ ಸಾವನ್ನಪ್ಪಿದ್ದಾರೆ. 

72 ವರ್ಷದ ಆರ್. ದೊರೈಕಣ್ಣು ತೀವ್ರ ಉಸಿರಾಟದ ತೊಂದರೆಯಿಂದ ಅ. 13ರಂದು ಆಸ್ಪತ್ರೆಗೆ ಸೇರಿದ್ದರು. ತಪಾಸಣೆ ವೇಳೆ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ವಿಲ್ಲೂಪುರಂ ಸರ್ಕಾರಿ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಾಗಿದ್ದ ದೊರೈಕಣ್ಣು ಅವರ ಆರೋಗ್ಯ ತೀರಾ ಹದಗೆಟ್ಟಿದ್ದರಿಂದ ಕಾವೇರಿ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿತ್ತು. ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಸಾವನ್ನಪ್ಪಿದ್ದಾರೆ.

ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರೋ ಸಚಿವರ ಆರೋಗ್ಯ ಸ್ಥಿತಿ ಚಿಂತಾಜನಕ

ಸಚಿವರ ಸಾವಿನ ಸುದ್ದಿಯನ್ನು ಖಚಿತಪಡಿಸಿರುವ ಕಾವೇರಿ ಆಸ್ಪತ್ರೆಯ ಕಾರ್ಯಕಾರಿ ನಿರ್ದೇಶಕ ಅರವಿಂದನ್ ಸೆಲ್ವರಾಜ್, ತಮಿಳುನಾಡಿನ ಕೃಷಿ ಸಚಿವ ಆರ್​. ದೊರೈಕಣ್ಣು ಶನಿವಾರ ರಾತ್ರಿ 11.30ಕ್ಕೆ ಸಾವನ್ನಪ್ಪಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.