ಯತ್ನಾಳರ ನಿಜವಾದ ಗುರಿ ಪ್ರಧಾನಿ ಮೋದಿ; ಸಿಎಂ ಸಿದ್ದರಾಮಯ್ಯ ಟ್ವೀಟ್ ವೈರಲ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯಲ್ಲಿ ನಡೆದಿದ್ದ ಮುಸ್ಲಿಂ ಸಮಾವೇಶದಲ್ಲಿ ಐಸಿಸ್​ ಉಗ್ರರ ಜೊತೆ ಸಂಪರ್ಕ ಹೊಂದಿರುವವನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂಬ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಅವರು, ಮುಸ್ಲಿಂ ಧರ್ಮ ಗುರುಗಳ ಜೊತೆಗೆ ಪ್ರಧಾನಿ ಮೋದಿ ಇರುವ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಯತ್ನಾಳ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

Tanveer Hashmi ISIS connection issue CM Siddaramaiah tweet against basanagowda yatnal MLA rav

ಬೆಂಗಳೂರು (ಡಿ.8): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯಲ್ಲಿ ನಡೆದಿದ್ದ ಮುಸ್ಲಿಂ ಸಮಾವೇಶದಲ್ಲಿ ಐಸಿಸ್​ ಉಗ್ರರ ಜೊತೆ ಸಂಪರ್ಕ ಹೊಂದಿರುವವನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂಬ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದು ದೇಶಾದ್ಯಂತ ಸಂಚಲನವನ್ನುಂಟು ಮಾಡಿತ್ತು. ಅಧಿವೇಶನದಲ್ಲೂ ಗದ್ದಲಕ್ಕೆ ಕಾರಣವಾಯಿತು. ಇದೀಗ ಸಿಎಂ ಸಿದ್ದರಾಮಯ್ಯ ಬಸನಗೌಡ ಯತ್ನಾಳರ ಆರೋಪ ವಿರುದ್ಧ ತಿರುಗಿಬಿದ್ದಿದ್ದಾರೆ. ಮುಸ್ಲಿಂ ಧರ್ಮಗುರುಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಇರುವ ಫೋಟೊಗಳನ್ನು ಟ್ವಿಟರ್ ಎಕ್ಸ್ ನಲ್ಲಿ ಶೇರ್‌ ಮಾಡಿಕೊಂಡು ತಿರುಗೇಟು ನೀಡಿದ್ದಾರೆ. 

ಯತ್ನಾಳರ ನಿಜವಾದ ಗುರಿ ಪ್ರಧಾನಿ ಮೋದಿ!

ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಪೋಟೊವನ್ನು ಹಿಡ್ಕೊಂಡು ಬಿಜೆಪಿ ಶಾಸಕ ಬಸವನಗೌಡಪಾಟೀಲ್ ಯತ್ನಾಳ್ ಅವರು ನನ್ನ ವಿರುದ್ದ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ. ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರ ಮೋದಿ ಅವರೂ ಸಂಬಂಧ ಹೊಂದಿರುವುದು  ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ಪೋಟೊಗಳು ಸ್ಪಷ್ಟವಾಗಿ ಹೇಳುತ್ತಿವೆ. ದೀರ್ಘಕಾಲದಿಂದ ಹಾಶ್ಮಿ ಅವರಿಗೆ ಅತ್ಯಂತ ಆತ್ಮೀಯರಾಗಿರುವ ಮತ್ತು ಊರಿನಲ್ಲಿ ತನ್ನ ನೆರೆಹೊರೆಯಾಗಿರುವ  ಯತ್ನಾಳ್ ಅವರಿಗೆ ಇದು ತಿಳಿದಿರಲಿಲ್ಲ ಎನ್ನುವುದನ್ನು ನಂಬಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

ಸಿಎಂ ಜತೆಗಿದ್ದ ಮೌಲ್ವಿಗೆ ಐಸಿಸ್‌ ಜತೆಗೆ ನಂಟು ಆರೋಪ; ಧರ್ಮಗುರು ಜತೆ ಗಡ್ಕರಿ ಫೋಟೋ ಬಿಡುಗಡೆ ಕಾಂಗ್ರೆಸ್‌ ನಾಯಕರಿಂದ ತಿರುಗೇಟು!

ರಾಜ್ಯ ಬಿಜೆಪಿ ಅಧ್ಯಕ್ಷತೆ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ತಪ್ಪಿಹೋಗಿರುವುದರಿಂದ ಯತ್ನಾಳ್ ಅವರು ಕೆರಳಿ ಕೆಂಡವಾಗಿದ್ದಾರೆ. ಇದಕ್ಕೆ ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಹಾ ವಿರುದ್ದ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದಲೇ ಮೌಲ್ವಿ ತನ್ವೀರ್ ಹಾಶ್ಮಿ ಜೊತೆಗಿನ ನನ್ನ ಪೋಟೋವನ್ನು ತೋರಿಸಿ ಆರೋಪ ಮಾಡಿದ್ದಾರೆ. ಈ ಆರೋಪದ ನಂತರ ಮೌಲ್ವಿ ಅವರ ಜೊತೆಗಿನ ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧದ ವಿವರವೂ ಹೊರಬರಲಿದೆ ಎನ್ನುವುದು ಅವರಿಗೆ ಖಂಡಿತ ಗೊತ್ತಿತ್ತು. ಅವೆಲ್ಲವೂ ಬಯಲಾಗಿ ಪ್ರಧಾನಿ ಮತ್ತು ಬಿಜೆಪಿ ನಾಯಕರು ಮುಜುಗರಕ್ಕೀಡಾಗಲಿ ಎನ್ನುವ ದುರುದ್ದೇಶದಿಂದ ನನ್ನ ವಿರುದ್ದ ಆರೋಪ ಮಾಡುವ ಆಟ ಆಡಿದ್ದಾರೆ ಎಂದು ಸಿಎಂ ಟಾಂಗ್ ನೀಡಿದ್ದಾರೆ.

ಮೌಲ್ವಿ ಹಾಶ್ಮಿ ಅವರ ಜೊತೆಗಿನ ನನ್ನ ಸ್ನೇಹ ಸಂಬಂಧವನ್ನು ನಾನು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದೇನೆ. ಹಾಶ್ಮಿಯವರೂ ಕೂಡಾ ಅವರ ಮೇಲಿನ ಆರೋಪದ ತನಿಖೆಯನ್ನು ಕೇಂದ್ರ ಸರ್ಕಾರವೇ ನಡೆಸಲಿ ಎಂದು ಸವಾಲು ಹಾಕಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿಯವರು ತನ್ನ ವಿರುದ್ದದ ಆರೋಪಕ್ಕೆ ಪ್ರತಿಕ್ರಿಯಿಸಲೇ ಬೇಕಾಗುತ್ತದೆ. ಮೌಲಿ ತನ್ವೀರ್ ಹಾಶ್ಮಿ ಅವರಿಗೆ ನಿಜವಾಗಿ ಐಸಿಎಸ್ ಜೊತೆ ಸಂಬಂಧ ಇದ್ದರೆ ಆ ಬಗ್ಗೆ ತನಿಖೆಗೆ ಪ್ರಧಾನಿಯವರು ತಕ್ಷಣ ಆದೇಶ ನೀಡಬೇಕು ಮತ್ತು ಹಾಶ್ಮಿ ಮತ್ತು ತನ್ನ ಸಂಬಂಧದ ವಿವರವನ್ನು ದೇಶದ ಮುಂದಿಡಬೇಕು. ಇದು ಎರಡೂ ಮಾಡದೆ ಇದ್ದರೆ ಇಂತಹ ಸುಳ್ಳು ಆರೋಪ ಮಾಡುವ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ದ ಕ್ರಮವನ್ನಾದರೂ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಈ ರೀತಿಯ ಆರೋಪಗಳನ್ನು ಮಾಡುವುದು ಇದೇ ಮೊದಲ ಸಲವೇನಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ದ ಪುಂಖಾನುಪುಂಖವಾಗಿ ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಬೇಕಾದರೆ ಪಕ್ಷದ ಹೈಕಮಾಂಡಿಗೆ ಎರಡು ಸಾವಿರ ಕೋಟಿ ರೂಪಾಯಿ ಕೊಡಬೇಕಾಗುತ್ತದೆ ಎನ್ನುವ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ. ಈ ರೀತಿ ಬಹಿರಂಗವಾಗಿ ತಮ್ಮ ಪಕ್ಷದ ಉನ್ನತ ನಾಯಕರ ವಿರುದ್ದವೇ ಆರೋಪ ಮಾಡುತ್ತಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಬಾಯಿಬಲದ ಹಿಂದೆ ಇರುವ ಶಕ್ತಿ ಯಾವುದು? ಬಿಜೆಪಿಯಲ್ಲಿರುವ ಯಾವ ‘ಜೀ’’ ಗಳ ಬಲದಿಂದ ಇಂತಹ ಸ್ವಪಕ್ಷೀಯರ ವಿರುದ್ದ ಇಂತಹ ಮಾನಹಾನಿಕರ ಆರೋಪ ಮಾಡಿಯೂ ಅವರೂ ಬಚಾವಾಗುತ್ತಿದ್ದಾರೆ ಎನ್ನುವುದು ಕೂಡಾ ಬಯಲಾಗಬೇಕಾಗಿದೆ ಎನ್ನುವ ಮೂಲಕ ಪರೋಕ್ಷವಾಗಿ ಸಂತೋಷ್ ಜೀ ಕಡೆಗೆ ಬೊಟ್ಟು ಮಾಡಿದ್ದಾರೆ.

ಐಸಿಸ್‌ ನಂಟಿನ ಬಗ್ಗೆ ಯತ್ನಾಳ್ ಆರೋಪ ಬೆನ್ನಲ್ಲೇ ಸ್ಫೋಟಕ ಬೆಳವಣಿಗೆ; ಎನ್‌ಐಎ ತನಿಖೆಗೆ ಮನವಿ ಮಾಡಿದ ರಾಘವ ಅನ್ನಿಗೇರಿ 

ಇಂದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿಯ ಪ್ರಕಾರ ಮೌಲ್ವಿ ತನ್ವೀರ್ ಹಾಶ್ಮಿ ಕುಟುಂಬದ ಜೊತೆಯಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್  ಅವರಿಗೆ ವ್ಯಾಪಾರಿ ಸಂಬಂಧ ಕೂಡಾ ಇದೆ ಎನ್ನುವುದು ಬಯಲಾಗಿದೆ.  ಯತ್ನಾಳ್ ಅವರ ಆರೋಪದಂತೆ ತನ್ವೀರ್ ಹಾಶ್ಮಿ ಅವರಿಗೆ ಐಸಿಎಸ್ ಜೊತೆ ಸಂಬಂಧ ಇರುವುದಾಗಿದ್ದರೆ  ಅವರ ಜೊತೆಗೆ ವ್ಯವಹಾರದ ಪಾಲುದಾರರಾಗಿರುವ ಯತ್ನಾಳ್ ಅವರಿಗೆ ಅದು ಗೊತ್ತಿರಲಿಲ್ಲವೇ? ಗೊತ್ತಿದ್ದೂ ಸುಮ್ಮನಿರಲು ಕಾರಣವೇನು? ಇಷ್ಟು ಸಮಯದ ನಂತರ ಇಂತಹ ಆರೋಪ ಮಾಡಲು ಕಾರಣಗಳೇನು ಎನ್ನುವುದನ್ನು ಕೂಡಾ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಸಿಎಂ ಟ್ವೀಟ್ಟರ್ ಮೂಲಕ ಒತ್ತಾಯಿಸಿದ್ದಾರೆ.

Latest Videos
Follow Us:
Download App:
  • android
  • ios