ಬೆಂಗಳೂರು, (ಫೆ.25): ಮುಂಬರುವ ಲೋಕಸಭಾ ಚುನಾವಣೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರೆಂಬುದು ಬಹುತೇಕ ಫೈನಲ್ ಆಗಿದೆ. 

ಕೇಂದ್ರ ಸಚಿವರಾಗಿದ್ದ ಅನಂತಕುಮಾರ್‌ ಅವರ ಪತ್ನಿ ಡಾ.ತೇಜಸ್ವಿನಿ ಅನಂತಕುಮಾರ್ ಅವರನ್ನು ಅಂತಿಮಗೊಳಿಸಿದೆ ಎಂದು ರಾಜ್ಯ ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ.

ಟಿಕೆಟ್ ಫೈಟ್: ಅನಂತ್‌ ಕ್ಷೇತ್ರದಲ್ಲಿ ಪತ್ನಿ ಬಿಜೆಪಿ ಅಭ್ಯರ್ಥಿ?

ಬಿಜೆಪಿಯ ಮೂಲಗಳು ಹೇಳಿದಂತೆ, ಮೊನ್ನೆಯಷ್ಟೇ ರಾಜ್ಯಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ತೇಜಸ್ವಿನಿ ಸ್ಪರ್ಧೆಗೆ  ಗ್ರೀನ್ ಸಿಗ್ನಲ್ ನೀಡಿದ್ದಾರೆ.

 ಅನಂತಕುಮಾರ್‌ ನಿಧನದಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ತೆರವಾಗಿತ್ತು. ಅನಂತ್​ಕುಮಾರ್​ ಅವರು 7 ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 

ತೇಜಸ್ವಿನಿಗೆ ಟಿಕೆಟ್ ತಪ್ಪಿಸಲು BJP ಮುಖಂಡ ಕಸರತ್ತು

ಈಗ ಅನಂತಕುಮಾರ್‌ರಿಂದ ತೆರವಾಗಿರುವ ಕ್ಷೇತ್ರಕ್ಕೆ ಡಾ.ತೇಜಸ್ವಿನಿ ಅನಂತಕುಮಾರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ಡಾ. ತೇಜಸ್ವಿನಿ ಅನಂತಕುಮಾರ್, ಸಕ್ರಿಯಾವಾಗಿ ರಾಜಕಾರಣದಲ್ಲಿ ಇಲ್ಲವಾದರೂ ಅದಮ್ಯ ಚೇತನದ ಮೂಲಕ ಜನರ ಸಂಪರ್ಕದಲ್ಲಿದ್ದು, ನಿನ್ನೆ (ಭಾನುವಾರ)  ಪ್ರಧಾನಿ ‘ಮನ್ ಕೀ ಬಾತ್’ ಕಾರ್ಯಕ್ರಮದ ಬೆಂಗಳೂರಿನ ವೇದಿಕೆಯಲ್ಲಿ ತೇಜಸ್ವಿನಿ ಅನಂತಕುಮಾರ್ ಪ್ರತ್ಯಕ್ಷರಾಗಿದ್ದರು.  ಈ ಮೂಲಕ ಪೂರ್ಣ ಪ್ರಮಾಣದಲ್ಲಿ ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ.