ತೃತೀಯ ರಂಗಕ್ಕೆ ಬಲ ನೀಡಲು ಇಂದು ತೆಲಂಗಾಣ ಸಿಎಂ ಕೆಸಿಆರ್‌-ದೇವೇಗೌಡ ಚರ್ಚೆ

ರಾಷ್ಟ್ರಪತಿ ಆಯ್ಕೆ, ಪ್ರಸಕ್ತ ರಾಜಕೀಯ ವಿದ್ಯಮಾನ ಮತ್ತು ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯ ಶಕ್ತಿಯಾಗಿ ತೃತೀಯ ರಂಗ ಬಲಪಡಿಸುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸುವ ಸಂಬಂಧ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್‌ ರಾವ್‌ ಅವರು ಗುರುವಾರ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರನ್ನು ಭೇಟಿ ಮಾಡಲಿದ್ದಾರೆ.

telangana cm kc chandrashekhar meeting former prime minister hd devegowda today gvd

ಬೆಂಗಳೂರು (ಮೇ.26): ರಾಷ್ಟ್ರಪತಿ ಆಯ್ಕೆ, ಪ್ರಸಕ್ತ ರಾಜಕೀಯ ವಿದ್ಯಮಾನ ಮತ್ತು ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯ ಶಕ್ತಿಯಾಗಿ ತೃತೀಯ ರಂಗ ಬಲಪಡಿಸುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸುವ ಸಂಬಂಧ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್‌ ರಾವ್‌ ಅವರು ಗುರುವಾರ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರನ್ನು ಭೇಟಿ ಮಾಡಲಿದ್ದಾರೆ.

ಕಳೆದ ಶನಿವಾರ ಉತ್ತರ ಪ್ರದೇಶಕ್ಕೆ ತೆರಳಿ ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌ ಅವರನ್ನು ಭೇಟಿ ಮಾಡಿದ್ದ ಚಂದ್ರಶೇಖರ್‌ ರಾವ್‌ ಅವರು ಭಾನುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಹಾಗೂ ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರನ್ನು ಕಂಡು ತೃತೀಯ ರಂಗ ರಚನೆ ಸಂಬಂಧ ಮಾತುಕತೆ ನಡೆಸಿದ್ದರು.

ಪ್ರಾದೇಶಿಕ ಪಕ್ಷವನ್ನು ಉಳಿಸಿ ಅಧಿಕಾರಕ್ಕೆ ತರಬೇಕು ಎನ್ನುವುದೇ ನನ್ನ ಕೊನೆಯ ಆಸೆ: ಹೆಚ್.ಡಿ.ದೇವೇಗೌಡ

ಗುರುವಾರ ರಾಜ್ಯಕ್ಕೆ ಆಗಮಿಸುತ್ತಿರುವ ಚಂದ್ರಶೇಖರ್‌ ರಾವ್‌ ಅವರು ಮಧ್ಯಾಹ್ನ 12.30ಕ್ಕೆ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿ ಸಮಾಲೋಚನೆ ನಡೆಸಲಿದ್ದಾರೆ. ಈ ವೇಳೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಹ ಉಪಸ್ಥಿತರಿರುವರು. ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವುದು, ರಾಷ್ಟ್ರಪತಿ ಚುನಾವಣೆ ವೇಳೆ ಪ್ರಾದೇಶಿಕ ಪಕ್ಷಗಳೆಲ್ಲಾ ಸೇರಿ ಒಮ್ಮತ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಉಭಯ ನಾಯಕರು ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಸಕ್ತ ರಾಜಕಾರಣ, ರಾಜಕೀಯ ವಿದ್ಯಮಾನ ಸೇರಿದಂತೆ ಇತರೆ ವಿಚಾರಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಲಿದ್ದಾರೆ. ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸಲು ಡಿಎಂಕೆ, ತೃಣಮೂಲ, ಆರ್‌ಜೆಡಿ, ಸಮಾಜವಾದಿ ಪಕ್ಷಗಳ ನಾಯಕರ ಜತೆ ಚಂದ್ರಶೇಖರ್‌ ರಾವ್‌ ಮಾತುಕತೆ ನಡೆಸಿದ್ದು, ಇದಿಗ ದೇವೇಗೌಡರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಈ ಹಿಂದೆಯೂ ಪ್ರಾದೇಶಿಕ ಪಕ್ಷಗಳು ಒಗ್ಗೂಡಿ ಚುನಾವಣೆ ಎದುರಿಸುವ ಪ್ರಯತ್ನ ನಡೆಸಲಾಗಿತ್ತು. ಮತ್ತೊಮ್ಮೆ ತೃತೀಯ ರಂಗವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಾದೇಶಿಕ ಶಕ್ತಿಗಳು ಕಾರ್ಯೋನ್ಮುಖವಾಗಿವೆ. ಈ ಕುರಿತು ಮಾತುಕತೆ ನಡೆಸಿ ಅಂತಿಮ ಸ್ವರೂಪ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ದೇಶದ ಐಕ್ಯತೆಗೆ ಧಕ್ಕೆ ತರಲು ಮತಾಂಧ ಶಕ್ತಿಗಳ ಪ್ರಯತ್ನ: ದೇಶದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಸಲುವಾಗಿ ಧರ್ಮಗಳ ನಡುವಿನ ಸಾಮರಸ್ಯ ಹಾಳು ಮಾಡಲು, ದೇಶದ ಐಕ್ಯತೆಯನ್ನು ಕೆಡಿಸಲು ಕೆಲ ಮತಾಂಧ ಶಕ್ತಿಗಳು ಪ್ರಯತ್ನಿಸುತ್ತಿವೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಆರೋಪಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಜಾನ್‌ ವಿರುದ್ಧ ನಡೆಯುತ್ತಿರುವ ಸುಪ್ರಭಾತ ಅಭಿಯಾನದ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು. 

PSI Recruitment Scam: ಮಾಜಿ ಪ್ರಧಾನಿ ದೇವೇಗೌಡರ ಭದ್ರತೆಯಲ್ಲಿದ್ದವನ ‘ಪಿಎಸ್‌ಐ’ ಕಳ್ಳಾಟ

ಹಿಂದೂ ದೇವಾಲಯಗಳಲ್ಲಿ ಬೆಳಗಿನ ಜಾವ ಸುಪ್ರಭಾತ, ಮುಸ್ಲಿಮರ ಮಸೀದಿಗಳಲ್ಲಿ ಬೆಳಗಿನ ಜಾವ ಅಜಾನ್‌ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.  ಆಯಾ ಧರ್ಮದವರು ತಮ್ಮ ಆಚರಣೆಗಳನ್ನು ವಿಧಿವತ್ತಾಗಿ ಮಾಡುತ್ತಾ ಬಂದಿದ್ದಾರೆ. ಆದರೆ ದೇಶದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹಾಗೂ ದೇಶದ ಐಕ್ಯತೆಯನ್ನು ಹಾಳು ಮಾಡಲು ಕೆಲ ಮತಾಂಧಶಕ್ತಿಗಳು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.

Latest Videos
Follow Us:
Download App:
  • android
  • ios