ಹೈದರಾಬಾದ್, (ಡಿ.07):  ಸುಮಾರು 4 ದಶಕಗಳಿಂದ ಪಕ್ಷದಲ್ಲಿದ್ದ ಹಿರಿಯ ಮುಖಂಡ ಗುಡೂರ್ ನಾರಾಯಣ ರೆಡ್ಡಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. 

ಎಐಸಿಸಿಯ ಸದಸ್ಯ ಮತ್ತು ತೆಲಂಗಾಣ ಕಾಂಗ್ರೆಸ್‌ ಸಮಿತಿಯ ಖಜಾಂಚಿಯಾಗಿದ್ದ ನಾರಾಯಣ ರೆಡ್ಡಿ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಅಚ್ಚರಿ ಬೆಳವಣಿಗೆ: ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ, ಸೋನಿಯಾ ಗಾಂಧಿಗೆ ಪತ್ರ ರವಾನೆ...!

ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 2 ಸ್ಥಾನ ಮಾತ್ರ ಗೆಲುವು ಸಾಧಿಸಿದೆ. ಈ ಹೀನಾಯ ಸೋಲಿನಿಂದಾಗಿ ಮೊನ್ನೇ ಅಷ್ಟೇ ಉತ್ತಮ್ ಕುಮಾರ್ ರೆಡ್ಡಿ ಅವರು ತೆಲಂಗಾಣ ಪ್ರದೇಶ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದರ ಬೆನ್ನಲ್ಲೇ ನಾರಾಯಣ ರೆಡ್ಡಿ ಅವರ ರಾಜೀನಾಮೆಯಿಂದಾಗಿ ತೆಲಂಗಾಣ ಕಾಂಗ್ರೆಸ್‌ಗೆ ಮತ್ತೊಂದು ಹೊಡೆತ ಬಿದ್ದಿದೆ.  ತಮ್ಮ ರಾಜೀನಾಮೆ ಕುರಿತು ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ. 1981ರಿಂದ ವಿದ್ಯಾರ್ಥಿ ದಿನಗಳಿಂದ ಇದುವರೆಗೂ ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ. 

ಕಾಂಗ್ರೆಸ್ ನಾಯಕತ್ವಕ್ಕೆ ಧನ್ಯವಾದ ಸಲ್ಲಿಸಿರುವ ನಾರಾಯಣ ರೆಡ್ಡಿ, ಟಿಪಿಸಿಸಿ ಖಜಾಂಚಿ, ಎಐಸಿಸಿ ಸದಸ್ಯತ್ವ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ಹೇಳಿದ್ದಾರೆ.