Asianet Suvarna News Asianet Suvarna News

ಬಿಜೆಪಿ ಸರ್ಕಾರದ ಸಾಧನೆ, ಜನೋಪಯೋಗಿ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಿ: ಅರುಣ್ ಸಿಂಗ್

ನಮ್ಮ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೂರಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರತಿಯೊಂದು ಮನೆಯಲ್ಲೂ ಫಲಾನುಭವಿಗಳಿದ್ದು ಇದನ್ನು ನಮ್ಮ ಕಾರ್ಯಕರ್ತರು ಜನರಿಗೆ ಸಮರ್ಪಕವಾಗಿ ತಿಳಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣಸಿಂಗ್‌ ಹೇಳಿದರು.

Tell people about BJP governments achievements welfare schemes says Arun Singh at gadag rav
Author
First Published Jan 28, 2023, 10:19 AM IST

ಗದಗ (ಜ.28) : ನಮ್ಮ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೂರಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರತಿಯೊಂದು ಮನೆಯಲ್ಲೂ ಫಲಾನುಭವಿಗಳಿದ್ದು ಇದನ್ನು ನಮ್ಮ ಕಾರ್ಯಕರ್ತರು ಜನರಿಗೆ ಸಮರ್ಪಕವಾಗಿ ತಿಳಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣಸಿಂಗ್‌ ಹೇಳಿದರು.

ಅವರು ಶುಕ್ರವಾರ ಸಂಜೆ ನಗರದ ವಿಠ್ಠಲಾರೂಢ ಸಭಾಭವನದಲ್ಲಿ ಆಯೋಜಿಸಲಾಗಿದ್ದ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

 

Assembly Election : ಕಾಂಗ್ರೆಸ್‌ ಅಭ್ಯರ್ಥಿಗಳ ಠೇವಣಿ ಕಳೆಯಿರಿ: ಅರುಣ್ ಸಿಂಗ್

ಕೋವಿಡ್‌ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರು, ಜನರು ಮನೆಯಿಂದ ಹೊರ ಬರದೇ ಇರುವಂತಾ ಸ್ಥಿತಿಯಲ್ಲಿ ಜನರ ಸಮಸ್ಯೆಗೆ ಸ್ಪಂದಿಸಿದ್ದಾರೆ. ಕಾಂಗ್ರೆಸ್‌ ಮುಖಂಡರು ಹೊರಗೆ ಬರಲು ಹೆದರುತ್ತಿರುವ ಸಂದರ್ಭದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಜನರಿಗೆ ಮಾÓ್ಕ…, ಔಷಧಿ ಆಹಾರ ನೀಡಿದ್ದಾರೆ. ದೇಶದ ಜನತೆಗೆ ಉಚಿತ ಲಸಿಕೆ ನೀಡುವ ಕೆಲಸವನ್ನು ಪ್ರಧಾನಿ ಮೋದಿ ಮಾಡಿದ್ದರೆ ಆ ಸಮಯದಲ್ಲಿ ಕಾಂಗ್ರೆಸ್‌ ಸೇರಿದಂತೆ ಇತರೆ ಪಕ್ಷಗಳು ದೇಶಿಯ ಲಸಿಕೆಯ ಬಗ್ಗೆ ಅಪಹಾಸ್ಯ ಮಾಡಿದ್ದರು. ನಂತರ ಅವರೇ ಲಸಿಕೆಯನ್ನು ಹಾಕಿಸಿಕೊಂಡರು ಎಂದು ವ್ಯಂಗ್ಯ ಮಾಡಿದರು.

ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಮಾತನಾಡಿ, ಕಾರ್ಯಕರ್ತರೇ ನಮ್ಮ ಪಕ್ಷದ ಶಕ್ತಿಯಾಗಿದ್ದಾರೆ, ನಮ್ಮ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೋರ್ವರು ಪಕ್ಷದ ಕರಪತ್ರವನ್ನು ಮನೆ ಮನೆಗೆ ವಿತರಿಸಲು ಬರುವುದು ನಮ್ಮ ಪಕ್ಷದಲ್ಲಿ ಮಾತ್ರ ಸಾಧ್ಯವಿದೆ. ಡಿ.ಕೆ. ಶಿವಕುಮಾರ ಹಾಗೂ ಸಿದ್ದರಾಮಯ್ಯ ಅವರ ಯಾತ್ರೆಯ ಬಗ್ಗೆ ಕಾರ್ಯಕರ್ತರು ತಲೆ ಕೆಡಿಸಿಕೊಳ್ಳಬಾರದು. ಪ್ರತಿ ಭೂತ್‌ದಲ್ಲಿ ಕನಿಷ್ಠ 700 ಮತಗಳನ್ನು ಪಡೆಯುವಂತೆ ಪಕ್ಷದ ಕಾರ್ಯಕರ್ತರು ನೋಡಿಕೊಳ್ಳಬೇಕು ಎಂದರು.

ಬಿಜೆಪಿ ರಾಜ್ಯ ಕಾರ್ಯದರ್ಶಿ ಅಶ್ವಥ ನಾರಾಯಣ ಮಾತನಾಡಿ, ವಿಜಯ ಸಂಕಲ್ಪ ಅಭಿಯಾನದಲ್ಲಿ ಬಿಜೆಪಿ ಭರವಸೆ ಸ್ಟಿಕರ್‌, ವಾಹನಗಳಿಗೆ ಸ್ಟಿಕರ್‌, ಗೋಡೆ ಬರಹ ಪ್ರಚಾರ, ಕರಪತ್ರಗಳನ್ನು ವಿತರಿಸುತ್ತಿದ್ದೇವೆ, ರಾಜ್ಯದ 58 ಸಾವಿರ ಭೂತ್‌ಗಳಲ್ಲಿ ಪ್ರಚಾರ ಮಾಡಲಾಗುತ್ತದೆ ಎಂದರು.

ಹುಬ್ಬಳ್ಳಿಗೆ ಆಗಮಿಸಿದ ಬಿಜೆಪಿ ಉಸ್ತುವಾರಿ, ಶಾಸಕ ಬೆಲ್ಲದ ಶಕ್ತಿ ಪ್ರದರ್ಶನ

ಈ ವೇಳೆ ಶಾಸಕ ಕಳಕಪ್ಪ ಬಂಡಿ, ವಿಪ ಸದಸ್ಯ ಎಸ್‌.ವಿ. ಸಂಕನೂರ, ನಗರಸಭೆ ಅಧ್ಯಕ್ಷೆ ಉಷಾ ದಾಸರ, ಭಾರತಿ ಮುಗದಮ…, ಲಿಂಗರಾಜ ಪಾಟೀಲ, ಅನಿಲ ಮೆಣಸಿನಕಾಯಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದು ಪಲ್ಲೇದ, ಬಿಜೆಪಿ ಜಿಲ್ಲಾಧ್ಯಕ್ಷ ಮುತ್ತಣ್ಣ ಲಿಂಗನಗೌಡ, ವಿಜಯಲಕ್ಷ್ಮಿ ಮಾನ್ವಿ, ನಗರಸಭೆ ಸದಸ್ಯ ಅನೀಲ ಅಬ್ಬಿಗೇರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Follow Us:
Download App:
  • android
  • ios