ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಿಳಿಸಿ: ಸಂಸದ ಡಿ.ಕೆ.ಸುರೇಶ್

ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳಿಂದ ಅಭ್ಯರ್ಥಿ ಯಾರೇ ಆಗಲಿ ನೀವು ತಲೆಕಡೆಸಿಕೊಳ್ಳದೆ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಿ ಎಂದು ಸಂಸದ ಡಿ.ಕೆ.ಸುರೇಶ್ ಕರೆ ನೀಡಿದರು.

Tell people about Congress guarantee schemes Says MP DK Suresh gvd

ಚನ್ನಪಟ್ಟಣ (ಮಾ.15): ಕಾಂಗ್ರೆಸ್ ನುಡಿದಂತೆ ನಡೆದಿದೆ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ವಿಧಾನಸಭೆ ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳಿಂದ ಅಭ್ಯರ್ಥಿ ಯಾರೇ ಆಗಲಿ ನೀವು ತಲೆಕಡೆಸಿಕೊಳ್ಳದೆ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಿ ಎಂದು ಸಂಸದ ಡಿ.ಕೆ.ಸುರೇಶ್ ಕರೆ ನೀಡಿದರು.

ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತೆಯರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಇದನ್ನು ಮನೆಮನೆಗೆ ತಲುಪಿಸುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲವಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಬೇರೆ ಪಕ್ಷಗಳಂತೆ ಚುನಾವಣೆ ಸಂದರ್ಭದಲ್ಲಿ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಮೇಲೆ ಅದನ್ನು ಮರೆಯುವ ಕೆಲಸ ಕಾಂಗ್ರೆಸ್ ಎಂದೂ ಮಾಡಿಲ್ಲ. 

ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡುವ ಮೂಲಕ ನಾಡಿನ ಜನರ ಹಿತಕಾಯುವ ಕೆಲಸ ಮಾಡಿದೆ. ಪ್ರತಿಯೊಂದು ಮನೆಯಲ್ಲೂ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳ ಪಲಾನುಭವಿಗಳಿದ್ದು ಇವರೆಲ್ಲಾ ನಮ್ಮ ಪಕ್ಷಕ್ಕೆ ಆಶೀರ್ವಾದ ಮಾಡುತ್ತಾರೆಂಬ ಭರವಸೆ ಇದೆ. ಕಾಂಗ್ರೆಸ್ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಅರಿವು ಮೂಡಿಸುವ ಮಹತ್ತರವಾದ ಜವಾಬ್ದಾರಿ ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತೆಯರ ಮೇಲಿದೆ ಎಂದರು. ನಾನು ಈ ಕ್ಷೇತ್ರದ ಸಂಸದನಾಗಿ ಆಯ್ಕೆಯಾದ ನಂತರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದ್ದೇನೆ. 

ಡಯಾಲಿಸಿಸ್‌ನಲ್ಲಿ 28,000 ಮಂದಿಗೆ ಉಚಿತ ಚಿಕಿತ್ಸೆ: ಶಾಸಕ ಎಚ್.ಡಿ.ರೇವಣ್ಣ

ಮೂರು ಅವಧಿಯಲ್ಲೂ ಸಿಕ್ಕ ಅವಕಾಶವನ್ನು ಬಳಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಶ್ರಮಿಸಿದ್ದೇನೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದ ಜನರ ಆಶಿರ್ವಾದ ಮತ್ತೊಮ್ಮೆ ಸಿಗುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ-ಜೆಡಿಎಸ್ ಅಪವಿತ್ರ ಮೈತ್ರಿಯಿಂದಾಗಿ ಎರಡು ಪಕ್ಷದ ಕಾರ್ಯಕರ್ತರು ನಮ್ಮ ಪಕ್ಷ ಸೇರ್ಪಡೆಯಾಗಲು ತುದಿಗಾಲಲ್ಲಿ ನಿಂತಿದ್ದಾರೆ. ಮುಂದಿನ ದಿನಗಳಲ್ಲಿ ಸಾಮೂಹಿಕವಾಗಿ ಸೇರ್ಪಡೆ ಕಾರ್ಯಕ್ರಮಗಳು ನಡೆಯಲಿವೆ. ಪಕ್ಷದ ತತ್ವ ಸಿದ್ಧಾಂತ ಮೆಚ್ಚಿ ಬರುವ ಎಲ್ಲರಿಗೂ ಪಕ್ಷ ಸ್ವಾಗತಿಸುತ್ತದೆ ಎಂದು ಹೇಳಿದರು.

Latest Videos
Follow Us:
Download App:
  • android
  • ios