ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ ಉಳಿಸಿದ್ದಕ್ಕೆ ಕರ್ನಾಟಕ ಜನತೆಗೆ ಧನ್ಯವಾದ: ಕೆ.ಹೆಚ್. ಮುನಿಯಪ್ಪ
ಬಿಜೆಪಿ ಕೋಮು ಗಲಭೆ ಮಾಡಿ ಮುಂದೆ ಇಟ್ಟು ಅಧಿಕಾರಿಕ್ಕೆ ಬಂದಿದ್ದರು. ಭಾರತ ಜಾತ್ಯತೀತ ರಾಷ್ಟ್ರ ಎಂದು ಇಂದು ನಿಜವಾಗಿದೆ. ಈ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ. ವಿಶೇಷವಾಗಿ ಕರ್ನಾಟಕ ಜನತೆಗೆ ಧನ್ಯವಾದಗಳು: ಕೆ.ಹೆಚ್. ಮುನಿಯಪ್ಪ
ಬೆಂಗಳೂರು(ಮೇ.14): ಕಾಂಗ್ರೆಸ್ ಪಕ್ಷವನ್ನು ಸ್ಪಷ್ಟವಾಗಿ ಬಹುಮತ ತಂದಿದ್ದಕ್ಕೆ ಕರ್ನಾಟಕ ಜನತೆಗೆ ಧನ್ಯವಾದಗಳು. ಈ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾಗಿತ್ತು. ಹೀಗಾಗಿ ಜನತೆ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತಂದಿದ್ದಾರೆ. ಪ್ರಜಾಪ್ರಭುತ್ವ ಉಳಿದಿದೆ. ಕರ್ನಾಟಕ ಜನತೆಗೆ ಕೋಟಿ ಕೋಟಿ ನಮಸ್ಕಾರ ಅಂತ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಇಂದು(ಭಾನುವಾರ) ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೋಮು ಗಲಭೆ ಮಾಡಿ ಮುಂದೆ ಇಟ್ಟು ಅಧಿಕಾರಿಕ್ಕೆ ಬಂದಿದ್ದರು. ಭಾರತ ಜಾತ್ಯತೀತ ರಾಷ್ಟ್ರ ಎಂದು ಇಂದು ನಿಜವಾಗಿದೆ. ಈ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ. ವಿಶೇಷವಾಗಿ ಕರ್ನಾಟಕ ಜನತೆಗೆ ಧನ್ಯವಾದಗಳು ಅಂತ ಹೇಳಿದ್ದಾರೆ.
ಶ್ರೀರಾಮುಲು ಅವರಂತ ದೊಡ್ಡ ನಾಯಕನನ್ನು ಸೋಲಿಸಿರುವೆ, ನಾನು ಮಂತ್ರಿ ಆಕಾಂಕ್ಷಿ: ನಾಗೇಂದ್ರ
ಸಿಎಂ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಕೆ.ಹೆಚ್. ಮುನಿಯಪ್ಪ, ಇವತ್ತು ಸಂಜೆ ಮೀಟಿಂಗ್ ಇದೆ. ಯಾರನ್ನ ಮುಖ್ಯಮಂತ್ರಿ ಮಾಡ್ತಾರೆ ಅನ್ನೋದು ಹೈಕಮಾಂಡ್ ಡಿಸೈಡ್ ಮಾಡುತ್ತೆ. ನಮಗೆ ಸಚಿವ ಸ್ಥಾನದ ಬಗ್ಗೆ ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ. ಪಕ್ಷ ಏನು ಹೇಳುತ್ತೆ ಅದನ್ನ ನಾನು ಮಾಡ್ತೇನೆ ಅಂತ ಸ್ಪಷ್ಟಪಡಿಸಿದ್ದಾರೆ.