ದೇಶ, ರಾಜ್ಯವನ್ನು ಆರ್ಥಿಕ ದಿವಾಳಿಯಾಗಿಸಿದ ಬಿಜೆಪಿ ಸರ್ಕಾರ, Siddaramaiah ಟೀಕೆ
- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯಟೀಕೆ
- ಕೋಣಮ್ಮ ತಾಯಿ ದೇವಾಲಯ ಉದ್ಘಾಟನೆ
- ಬೇರೆಯವರ ಹೆಗಲ ಕುಳಿತು ಸವಾರಿ ಮಾಡುವ ಪಕ್ಷ ಜೆಡಿಎಸ್
ಕೆ.ಆರ್. ನಗರ (ಮಾ.5): ಪ್ರಧಾನಿ ನರೇಂದ್ರಮೋದಿ (Prime Minister Narendra Modi) ಮತ್ತು ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ (Basavaraja Bommai) ನೇತೃತ್ವದ ಬಿಜೆಪಿ ಸರ್ಕಾರ ದೇಶ ಮತ್ತು ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯನ್ನಾಗಿ ಮಾಡಿವೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ (Opposition Leader Siddaramaiah) ಟೀಕಿಸಿದರು. ಸಾಲಿಗ್ರಾಮ ತಾಲೂಕಿನ ತಂದ್ರೆಕೊಪ್ಪಲು (Tandreoppal) ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಕೋಣಮ್ಮ ತಾಯಿ ದೇವಾಲಯ (Konamma Temple) ಉದ್ಘಾಟನೆ ನೆರವೇರಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ 5 ಲಕ್ಷದ 18 ಸಾವಿರ ಕೋಟಿ ಮತ್ತು ರಾಜ್ಯ ಸರ್ಕಾರ 2 ಲಕ್ಷದ 20 ಸಾವಿರ ಕೋಟಿ ಸಾಲ ಮಾಡಿದ್ದು, ಜನರನ್ನು ಸಾಲದ ಸುಳಿಯಲ್ಲಿ ಮುಳುಗಿಸಿದ್ದು, ಇದು ಅಭಿವೃದ್ಧಿ ಕಾರ್ಯಗಳಿಗೆ ಮಾರಕವಾಗಿ ಪರಿಣಮಿಸಿದೆ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಳುವ ಸರ್ಕಾರಗಳು ಸಾಲ ಮಾಡುವುದು ಸಹಜ, ಆದರೆ ಆ ಹಣದಿಂದ ಅಭಿವೃದ್ಧಿ ಕೆಲಸಗಳನ್ನು ಮಾಡಿ ಸರ್ಕಾರಕ್ಕೆ ಮತ್ತು ದೇಶಕ್ಕೆ ಆಸ್ತಿಯನ್ನು ಮಾಡದೇ ಕೇವಲ ಸಂಬಳ ನೀಡಲು ಸಾಲ ಮಾಡುವುದು ಯಾವ ನ್ಯಾಯ ಎಂದು ಅವರು ಪ್ರಶ್ನಿಸಿದರು. ನಾನು ಬಜೆಟ್ ಮಂಡಿಸುವ ವೇಳೆ ಕೇವಲ 13 ಸಾವಿರ ಕೋಟಿ ಸಾಲವಿತ್ತು. ಆದರೆ, ಈಗ ಎಲ್ಲಾ ಮಿತಿಗಳನ್ನು ಮೀರಿಯಾಗಿದೆ ಎಂದು ಸಿದ್ಧರಾಮಯ್ಯ ಹೇಳಿದರು. ಬಿಜೆಪಿ ಆಪರೇಷನ್ ಕಮಲದ ಮೂಲಕ ಅಧಿಕಾರ ಪಡೆದುಕೊಂಡಿದೆ. ಜನರ ಬೆಂಬಲದಿಂದ ಅವರು ಅಧಿಕಾರಕ್ಕೆ ಏರಿಲ್ಲ ಎಂದು ಟೀಕೆ ಮಾಡಿದರು.
ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್, ಗ್ಯಾಸ್, ಸಿಮೆಂಟ್, ಕಬ್ಬಿಣ, ರಸಗೊಬ್ಬರ ಸೇರಿದಂತೆ ದಿನ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಜನಸಾಮಾನ್ಯರು ಜೀವನ ನಡೆಸುವುದೇ ದುಸ್ತರವಾಗಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಮತದಾರರು ಹಳೆಯ ತಪ್ಪುಗಳನ್ನು ಪುನರಾವರ್ತಿಸದೆ ಉತ್ತಮ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಜನರ ಆಶೀರ್ವಾದದಿಂದ ಬಂದಿದ್ದಲ್ಲ ಬದಲಾಗಿ ಆಪರೇಷನ್ ಕಮಲ ನಡೆಸಿ ವಾಮ ಮಾರ್ಗದ ಮೂಲಕ ಆಡಳಿತ ಮಾಡುತ್ತಿದ್ದು, ಅವರಿಗೆ ಅಧಿಕಾರ ಬೇಕೆ ಹೊರತು ಜನರ ಅಭಿವೃದ್ಧಿ ಮುಖ್ಯವಲ್ಲವೆಂದರು. ದಲಿತರು, ಬಡವರು ಮತ್ತು ದೇಶದ ಅಭಿವೃದ್ಧಿ ಕಾಂಗ್ರೆಸ್‌ನಿಂದ ಸಾಧ್ಯ ಎಂದು ಪ್ರತಿಪಾದಿಸಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಸೋಲು ಅನುಭವಿಸಿರುವ ನಮ್ಮ ಪಕ್ಷದ ಅಭ್ಯರ್ಥಿ ಡಿ. ರವಿಶಂಕರ್ ಅವರನ್ನು ಮುಂಬರುವ ಚುನಾವಣೆಯಲ್ಲಿ ಎಲ್ಲರೂ ಒಮ್ಮತದಿಂದ ವಿಧಾನಸಭೆಗೆ ಆಯ್ಕೆ ಮಾಡಿ ಕಳುಹಿಸಬೇಕೆಂದು ಅವರು ಕೋರಿದರು.
ಶಿಕಾರಿಪುರ ಜನರ ಋಣದ ಬಗ್ಗೆ ಮಾತನಾಡಿದ ಯಡಿಯೂರಪ್ಪ, ಬೆಂಕಿಯ ಚೆಂಡು ಎಂದ ಈಶ್ವರಪ್ಪ
ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಡಿ. ರವಿಶಂಕರ್ (D.Ravi Shankar) ಅಭಿವೃದ್ಧಿಗೆ ಹಿಡಿ ಮಣ್ಣನ್ನೂ ಹಾಕಿಲ್ಲ ಎಂದು ಹೇಳಿರುವ ಶಾಸಕ ಸಾ. ರಾ. ಮಹೇಶ್ (Sa Ra Ramesh) ಅವರ ಹೇಳಿಕೆ ಮೂರ್ಖತನದ ಪರಮಾವಧಿಯಿಂದ ಕೂಡಿದ್ದು, ಹಾಗಾದರೆ ನೀನು ಶಾಸಕನಾಗಿರುವುದು ಏಕೆ? ಎಂದು ಪ್ರಶ್ನಿಸಿದರು.
Karnataka Budget 2022 ಸಿಎಂ ಬಸವರಾಜ ಬೊಮ್ಮಾಯಿಗೆ ಅಭಿನಂದನೆ ಹೇಳಿದ ಡಿಕೆ ಶಿವಕುಮಾರ್
ಜೆಡಿಎಸ್‌ನವರು ಹೆಗಲ ಮೇಲೆ ಕುಳಿತು ಸವಾರಿ ಮಾಡುವ ಗಿರಾಕಿಗಳು: ಜೆಡಿಎಸ್ ಬಗ್ಗೆ ನಾನು ಯಾವಾಗಲೂ ಮಾತನಾಡುವುದಿಲ್ಲ, ಏಕೆಂದರೆ ಅವರು ಬೇರೆಯವರ ಹೆಗಲ ಮೇಲೆ ಕುಳಿತುಕೊಂಡು ಸವಾರಿ ಮಾಡುವ ಗಿರಾಕಿಗಳು ಎಂದು ಅವರು ವ್ಯಂಗ್ಯವಾಡಿದರು. ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಶಾಸಕ ಸಾ.ರಾ. ಮಹೇಶ್ ಸಹೋದರ ಸಾ.ರಾ. ನಂದೀಶ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹೂಗುಚ್ಚ ನೀಡಿ ಅಭಿನಂದಿಸಿದರಲ್ಲದೆ, ತಮ್ಮ ಸಹೋದರನ ವಿರುದ್ಧ ರಾಜಕೀಯವಾಗಿ ದೂರವಾದ ಮೇಲೆ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿ ಗಮನ ಸೆಳೆದರು.