ಕಾಂಗ್ರೆಸ್ ಪಕ್ಷವು ಷರತ್ತು ಇಲ್ಲದೆ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ತರಬೇಕು: ಕಾರಜೋಳ ಆಗ್ರಹ
ರಾಜ್ಯದ ಕಾಂಗ್ರೆಸ್ ಪಕ್ಷವು ನೀಡಿದ ವಿವಿಧ ಗ್ಯಾರಂಟಿ ಯೋಜನೆಗಳನ್ನು ಷರತ್ತುಗಳಿಲ್ಲದೆ ಅನುಷ್ಠಾನಕ್ಕೆ ತರಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ.

ಬೆಂಗಳೂರು (ಜೂ.01): ರಾಜ್ಯದ ಕಾಂಗ್ರೆಸ್ ಪಕ್ಷವು ನೀಡಿದ ವಿವಿಧ ಗ್ಯಾರಂಟಿ ಯೋಜನೆಗಳನ್ನು ಷರತ್ತುಗಳಿಲ್ಲದೆ ಅನುಷ್ಠಾನಕ್ಕೆ ತರಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕೆಂದು ಚುನಾವಣೆ ವೇಳೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಈ ನಾಡಿನ ಜನತೆಗೆ ಐದು ಗ್ಯಾರಂಟಿಗಳನ್ನು ಕೊಟ್ಟಿದ್ದರು. ಅಲ್ಲದೆ, ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷವು ಮೋಸ, ವಂಚನೆ, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಯಾವ ಮಟ್ಟಕ್ಕಾದರೂ ಹೋಗುವುದನ್ನು ಸ್ವಾತಂತ್ರ್ಯಾನಂತರದ 60 ವರ್ಷಗಳಲ್ಲಿ ಮಾಡುತ್ತಲೇ ಬಂದಿದೆ. ಮೊದಲ 60 ವರ್ಷಗಳಲ್ಲಿ ಜಾತಿ-ಜಾತಿ, ಧರ್ಮ-ಧರ್ಮಗಳ ನಡುವೆ ವಿಷಬೀಜ ಬಿತ್ತಿ ಆಡಳಿತ ಮಾಡಿದ್ದರು. ಬಡವರ ಮೂಗಿಗೆ ತುಪ್ಪ ಸವರಿದರು. ಜನರಿಗೆ ಸತತವಾಗಿ ಮೋಸ ಮಾಡುತ್ತ ಬಂದ ಕಾಂಗ್ರೆಸ್ ಪಕ್ಷವು ಇವತ್ತು ವಿಧಾನಸಭಾ ಚುನಾವಣೆಯಲ್ಲಿ ವಿವಿಧ ಗ್ಯಾರಂಟಿಗಳನ್ನು ಕೊಟ್ಟಿದೆ. ಕುಟುಂಬದ ಯಜಮಾನಿಗೆ 2 ಸಾವಿರ ರು. ಕೊಡುವುದಾಗಿ ತಿಳಿಸಿದ್ದರು.
ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ: ಶಾಸಕ ಕೆ.ಎಂ.ಉದಯ್ ಸೂಚನೆ
ಈಗ ಅತ್ತೆಗೆ ಮಾತ್ರ ಕೊಡುವುದಾಗಿ ಹೇಳುತ್ತಿದ್ದಾರೆ. ಅದೇ ಅತ್ತೆಗೆ 4 ಮಕ್ಕಳಿದ್ದರೆ ಅವರು ಬೇರೆ ಬೇರೆ ಮನೆಯಲ್ಲಿರುತ್ತಾರೆ. ಇದನ್ನು ಗಮನಿಸಿ ಯಾವುದೇ ಷರತ್ತು ಇಲ್ಲದೆ ಪ್ರತಿ ಕುಟುಂಬದ ಯಜಮಾನತಿಗೆ 2 ಸಾವಿರ ರು. ಕೊಡಬೇಕು ಎಂದು ಆಗ್ರಹಿಸಿದರು. ಉಚಿತಗಳ ಗ್ಯಾರಂಟಿ ಜಾರಿ ಮಾಡದಿದ್ದರೆ ನಾಡಿನ ಜನ ಇವರಿಗೆ ರಸ್ತೆಯಲ್ಲಿ ಓಡಾಡಲು ಬಿಡುವುದಿಲ್ಲ. ದೀನದಲಿತರಿಗೆ ಶಿಕ್ಷಣ ಕ್ಷೇತ್ರಕ್ಕಾಗಿ ಕೊಡುವ ಅನುದಾನದ ಹಣವನ್ನು ಗ್ಯಾರಂಟಿಗಳ ಅನುಷ್ಠಾನಕ್ಕೆ ಬಳಸುವ ಮಾಹಿತಿ ಇದೆ. ಹೀಗೆ ಮಾಡಿದರೆ ದೊಡ್ಡ ಹೋರಾಟ ಆಗಲಿದೆ ಎಂದು ತಿಳಿಸಿದರು.
ಷರತ್ತುಗಳಿಲ್ಲದೇ ಜನರಿಗೆ ಉಚಿತ ಗ್ಯಾರಂಟಿ ನೀಡಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಾವುದೇ ಷರತ್ತುಗಳಿಲ್ಲದೇ 5 ಗ್ಯಾರಂಟಿ ಯೋಜನೆಗಳನ್ನು ಈ ನಾಡಿನ 6.5 ಕೋಟಿ ಜನಕ್ಕೆ ನೀಡಬೇಕೆಂದು ಮಾಜಿ ಸಚಿವ ಗೋವಿಂದ ಕಾರಜೋಳ ಒತ್ತಾಯಿಸಿದರು. ಪಟ್ಟಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಮೊದಲು ಪ್ರಣಾಳಿಕೆಯಲ್ಲಿ ಯಾವುದೇ ಷರತ್ತುಗಳಿಲ್ಲದೇ ರಾಜ್ಯದ ಪ್ರತಿ ಕುಟುಂಬಕ್ಕೆ 200 ಯುನಿಟ್ ಉಚಿತ ವಿದ್ಯುತ್, ಬಿಪಿಎಲ್ ಕುಟುಂಬದ ಪ್ರತಿ ಸದಸ್ಯನಿಗೂ ತಿಂಗಳಿಗೆ ತಲಾ 10 ಕೆ.ಜೆ.ಅಕ್ಕಿ, ಪ್ರತಿ ಕುಟುಂಬದ ಯಜಮಾನಿಗೆ ತಿಂಗಳಿಗೆ 2 ಸಾವಿರ, ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3 ಸಾವಿರ, ನಿರುದ್ಯೋಗಿ ಡಿಪ್ಲೋದವರರಿಗೆ ತಿಂಗಳಿಗೆ .1500, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವುದಾಗಿ ಭರವಸೆ ನೀಡಿದೆ.
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಚುನಾವಣೆಗೆ ಮೊದಲು ನನಗೂ ಫ್ರೀ, ನಿಮಗೂ ಫ್ರೀ ಎಂದು ತಿಳಿಸಿದ್ದೀರಿ, ಈಗೇಕೆ ಮಾನದಂಡನೆಗಳನ್ನು ಮತ್ತು ಷರತ್ತುಗಳನ್ನು ವಿಧಿಸುತ್ತಿದ್ದೀರಿ ಎಂದು ಪ್ರಶ್ನಿಸಿದರು. ಸಿಎಂ ಸಿದ್ದರಾಮಯ್ಯ ಅವರು ಜೂನ್ 1 ರಿಂದ ಚುನಾವಣೆಯಲ್ಲಿ ಕೊಟ್ಟಭರವಸೆಗಳನ್ನು ಅನುಷ್ಠಾನಗೊಳಿಸಲೇಬೇಕು ಇಲ್ಲದಿದ್ದರೆ, ಈ ನಾಡಿನ ಜನರಿಗೆ ಮೋಸ ಮಾಡಿರಿ ಎಂದು ಕ್ಷಮೆ ಕೇಳಬೇಕು. ನಿಮ್ಮ ಸಚಿವ ಸಂಪುಟದ ಸಹದ್ಯೋಗಿಗಳು ಬಾಯಿಗೆ ಬಂದ ಮಾತನಾಡುತ್ತಿದ್ದಾರೆ. ಹಾದಿ ಬೀದಿಗೆ ಜನಕ್ಕೆ ಗ್ಯಾರಂಟಿಗಳನ್ನು ಕೊಡಲು ಆಗುವುದಿಲ್ಲ ಅಂತಿದ್ದಾರೆ. ಹಾದಿ ಬೀದಿಗಳ ಜನರ ವೋಟು ತೆಗೆದುಕೊಂಡಿಲ್ಲವೇ? ನಾಲಿಗೆ ಒಂದು ಅದಾವೋ ಎರಡು ಅದಾವು ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ವಾಗ್ಧಾಳಿ ನಡೆಸಿದರು.
Mandya: ಏಪ್ರಿಲ್‌ನಲ್ಲಿ ವಿದ್ಯುತ್ ಬಿಲ್ 5 ಕೋಟಿ ಬಾಕಿ: ಅಧಿಕಾರಿಗಳಿಂದ ನಿರಂತರ ಸುತ್ತಾಟ
ಮುಧೋಳ ನಗರಸಭೆಯ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಸರಕಾರ ಬಂದ್ ಮಾಡಿದೆ. ಅದಕ್ಕೆ ನಾನು ಖಂಡಿಸುತ್ತೇನೆ. ಸರಕಾರ ಕೂಡಲೇ ಎಲ್ಲ ಕಾಮಗಾರಿಗಳು ಮುಗಿಸಬೇಕೆಂದು ಒತ್ತಾಯಿಸಿದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಧೋಳ ಮತಕ್ಷೇತ್ರಕ್ಕೆ ಸಾವಿರಾರು ಕೋಟಿ ರು.ಗಳ ಅನುದಾನ ತಂದು ಮುಧೋಳ ಮತಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಿದರು ಜನರು ಅಭಿವೃದ್ಧಿ ಕೆಲಸಕ್ಕೆ ಮತ್ತು ವ್ಯಕ್ತಿತ್ವಕ್ಕೆ ಮನ್ನಣಿ ನೀಡಲಿಲ್ಲ? ಎಂಬುದಕ್ಕೆ ಮುಧೋಳ ವಿಧಾನಸಭಾ ಕ್ಷೇತ್ರವೇ ಸಾಕ್ಷಿ ಎಂದು ತಿಳಿಸಿದರು. ಜನ ಅಭಿವೃದ್ಧಿ ಕೆಲಸಕ್ಕೆ ಮನ್ನಣಿ ನೀಡಲಿಲ್ಲ, ಸರಕಾರದ 5 ಗ್ಯಾರಂಟಿ ಯೋಜನೆಗೆ ಮನ್ನಣಿ ನೀಡಿದರು. ನನ್ನ ಮೇಲೆ ಇಟ್ಟಪ್ರೀತಿ, ವಿಶ್ವಾಸಕ್ಕೆ ಮುಧೋಳ ಮತಕ್ಷೇತ್ರದ ಜನತೆಗೆ ಚಿರಋುಣಿಯಾಗಿದ್ದೇನೆ ಎಂದರು.