ಕೊಟ್ಟ ಮಾತಿನಂತೆ ನಡೆದುಕೊಂಡಾಗ ಮಾತ್ರ ಜಿಲ್ಲೆ ಅಭಿವೃದ್ಧಿ: ಶಾಸಕ ಶಿವಲಿಂಗೇಗೌಡ
ಭರವಸೆ ನೀಡುವುದರಿಂದ ಅಭಿವೃದ್ಧಿಯಾಗುವುದಿಲ್ಲ, ಕೊಟ್ಟ ಮಾತಿನಂತೆ ನಡೆದುಕೊಂಡಾಗ ಮಾತ್ರ ಅಭಿವೃದ್ಧಿ ಎಂಬ ಬದ್ಧತೆಯನ್ನು ನನ್ನ ರಾಜಕೀಯ ಜೀವನದಲ್ಲಿ ಅಳವಡಿಸಿಕೊಂಡಿರುವುದರಿಂದ ಕಳೆದ 16 ವರ್ಷಗಳಲ್ಲಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಕ್ಷೇತ್ರದ ಚಿತ್ರಣವೇ ಬದಲಾಗಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.
ಅರಸೀಕೆರೆ (ಅ.30): ಭರವಸೆ ನೀಡುವುದರಿಂದ ಅಭಿವೃದ್ಧಿಯಾಗುವುದಿಲ್ಲ, ಕೊಟ್ಟ ಮಾತಿನಂತೆ ನಡೆದುಕೊಂಡಾಗ ಮಾತ್ರ ಅಭಿವೃದ್ಧಿ ಎಂಬ ಬದ್ಧತೆಯನ್ನು ನನ್ನ ರಾಜಕೀಯ ಜೀವನದಲ್ಲಿ ಅಳವಡಿಸಿಕೊಂಡಿರುವುದರಿಂದ ಕಳೆದ 16 ವರ್ಷಗಳಲ್ಲಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಕ್ಷೇತ್ರದ ಚಿತ್ರಣವೇ ಬದಲಾಗಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ತಾಲೂಕಿನ ಗಂಡಸಿ ಹೋಬಳಿ ಹುಲ್ಲೆಕೆರೆ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಸುಮಾರು 2 ಕೋಟಿ ರು. ವೆಚ್ಚದಲ್ಲಿ ಹುಲ್ಲೆಕೆರೆ ಕೆರೆ ಏರಿ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ಭಾನುವಾರ ನೆರವೇರಿಸಿ ಮಾತನಾಡಿದರು.
ದೇಶದ ಜೀವನಾಡಿಯಾಗಿರುವ ಹಳ್ಳಿಗಳ ಅಭಿವೃದ್ಧಿಗೆ ಮೊದಲ ಆದ್ಯತೆಯನ್ನು ನೀಡಿ ಉತ್ತಮ ಸೌಲಭ್ಯಗಳನ್ನು ನೀಡುವ ಮೂಲಕ ಹಳ್ಳಿಗಳನ್ನು ಉತ್ತಮ ಸ್ಥಿತಿಗೆ ತರುವ ಜವಾಬ್ದಾರಿ ನಮ್ಮೆಲ್ಲರದಾಗಿದ್ದು, ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿದೆ. ಕುಡಿಯುವ ನೀರು,ರಸ್ತೆ, ಚರಂಡಿ, ತಮ್ಮ ಗ್ರಾಮಗಳಲ್ಲಿಯೇ ಗ್ರಾಮಸ್ಥರು ಸಣ್ಣ ಪುಟ್ಟ ಸಭೆ ಸಮಾರಂಭಗಳನ್ನ ಮಾಡಿಕೊಳ್ಳಲು ಅನುಕೂಲವಾಗುವ ರೀತಿಯಲ್ಲಿ ಸಮುದಾಯ ಭವನಗಳ ನಿರ್ಮಾಣ, ಹೋಬಳಿವಾರು ನಿರ್ಮಾಣಗೊಂಡಿರುವ ವಸತಿ ಶಾಲೆಗಳು ಕ್ಷೇತ್ರದ ಅಭಿವೃದ್ಧಿ ಪಥವನ್ನು ತೋರುತ್ತಿದೆ ಎಂದರು.
ಈಗಾಗಲೇ ಎತ್ತಿನಹೊಳೆ ಕಾಮಗಾರಿ ಭರದಿಂದ ಸಾಗಿದ್ದು ಅದೇ ರೀತಿ ಅಪ್ಪರ್ ಭದ್ರ ಯೋಜನೆ ಮೂಲಕ ಬಾಣಾವರ ಹಾಗೂ ಕಣಕಟ್ಟೆ ಹೋಬಳಿ ಕೆರೆಗಳಿಗೆ ನೀರು ತುಂಬಿಸಿಕೊಳ್ಳುವುದರೊಂದಿಗೆ ಕ್ಷೇತ್ರ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಮುಂದಿನ ಐದಾರು ದಶಕಗಳ ಕಾಲ ಕಾಡದ ರೀತಿ ಶಾಶ್ವತ ಪರಿಹಾರ ಕಂಡುಕೊಂಡಂತಾಗಿದೆ ಎಂದು ಸಂತಸ ಹಂಚಿಕೊಂಡರು.
ಕಾಫಿನಾಡಲ್ಲಿ ಇಂದಿನಿಂದ ದತ್ತಮಾಲಾ ಅಭಿಯಾನ: ಶ್ರೀರಾಮಸೇನೆ ಕಾರ್ಯಕರ್ತರಿಂದ ಮಾಲಾಧಾರಣೆ
ಗಂಡಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಟ್ರೋ ಬಾಬು ಮಾತನಾಡಿ, ಕ್ಷೇತ್ರದ ಶಾಸಕರಾಗಿ ಶಿವಲಿಂಗೇಗೌಡರು ನಮಗೆ ದೊರೆತ ನಂತರ ಕಳೆದ 16 ವರ್ಷಗಳಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳು ಸಮಾರೋಪದಲ್ಲಿ ಆಗಿರುವುದರಿಂದ ಶಿವಲಿಂಗೇಗೌಡರು ಪಕ್ಷ ಮೀರಿದ ವ್ಯಕ್ತಿತ್ವವನ್ನು ಬೆಳೆಸಿಕೊಂಡಿರುವುದಲ್ಲದೆ ಮಾದರಿ ರಾಜಕಾರಣಿಯಾಗಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ತಾ.ಪಂ.ಮಾಜಿ ಸದಸ್ಯ ರೂಪೇಶ್, ಮುಖಂಡರಾದ ಮಲ್ಲಾಪುರ ಮಂಜುರಾಜು, ಯರಗನಾಳು ಮಲ್ಲೇಶ್, ಹಿರಿಯಾಳು ರಮೇಶ್, ಎಂಜಿನಿಯರ್ ಉಮೇಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು.