ಆಪರೇಷನ್ ಹಸ್ತ ಯಶಸ್ವಿಯಾಗುವುದಿಲ್ಲ: ಮಾಜಿ ಸಿಎಂ ಬೊಮ್ಮಾಯಿ
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲದಿದ್ದಲ್ಲಿ ರಾಜ್ಯ ಸರ್ಕಾರದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ನುಡಿದಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಆಪರೇಷನ್ ಹಸ್ತಕ್ಕೆ ಕೈಹಾಕಿದೆ. ಆದರೆ, ಅದರಲ್ಲಿ ಅದು ಯಶಸ್ವಿಯಾಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹುಬ್ಬಳ್ಳಿ (ಆ.26): ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲದಿದ್ದಲ್ಲಿ ರಾಜ್ಯ ಸರ್ಕಾರದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ನುಡಿದಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಆಪರೇಷನ್ ಹಸ್ತಕ್ಕೆ ಕೈಹಾಕಿದೆ. ಆದರೆ, ಅದರಲ್ಲಿ ಅದು ಯಶಸ್ವಿಯಾಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯ ಸಮೀಕ್ಷೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನ ಬರಲ್ಲ ಎಂದು ಹೇಳಿವೆ. ಇದು ಕಾಂಗ್ರೆಸ್‌ನಲ್ಲಿ ಭೀತಿಯನ್ನುಂಟು ಮಾಡಿದೆ. ಹೇಗಾದರೂ ಮಾಡಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಪಡೆಯಲೇಬೇಕೆಂಬ ಇರಾದೆಯನ್ನು ಹೊಂದಿದೆ. ಇಲ್ಲದಿದ್ದಲ್ಲಿ ರಾಜ್ಯ ಸರ್ಕಾರದ ಭವಿಷ್ಯದ ಮೇಲೆ ಪರಿಣಾಮವಾಗಲಿದೆ. ಇದು ಕಾಂಗ್ರೆಸ್ ಮುಖಂಡರಿಗೂ ಗೊತ್ತಿದೆ. ಈ ಹಿನ್ನೆಲೆಯಲ್ಲಿ ಅದು ಆಪರೇಷನ್ ಹಸ್ತಕ್ಕೆ ಕೈ ಹಾಕಿದೆ. ಆದರೆ ಇದರಲ್ಲಿ ಅದು ಯಶಸ್ವಿಯಾಗಲ್ಲ ಎಂದರು.
ರಾಜ್ಯ ಸರ್ಕಾರ ತಕ್ಷಣವೇ ಬರಗಾಲ ಘೋಷಿಸಿ: ಬಿಎಸ್‌ವೈ, ಬೊಮ್ಮಾಯಿ ಆಗ್ರಹ
ನೀರು ಬಿಟ್ಟಬಳಿಕ ಸಭೆ ಏಕೆ?: ಕಾವೇರಿ ನೀರಿಗಾಗಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿ ವಜಾಗಾಗಿ ತಕರಾರು ಅರ್ಜಿ ಸಲ್ಲಿಸದೇ ರಾಜ್ಯ ನೀರಿಗಾಗಿ ಸಂಕಷ್ಟಪಡುತ್ತಿರುವ ಕಾಲದಲ್ಲೂ ತಮಿಳುನಾಡಿಗೆ ನೀರು ಹರಿಸಿದ್ದಕ್ಕೆ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ತಮಿಳುನಾಡಿಗೆ ನೀರು ಬಿಡುವ ಮೊದಲೇ ಸರ್ವ ಪಕ್ಷಗಳ ಸಭೆ ಕರೆದು ಸಂಕಷ್ಟದ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ, ನ್ಯಾಯಾಧಿಕರಣ ಹಾಗೂ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡದೇ ನೀರು ಬಿಟ್ಟನಂತರ ಸರ್ವ ಪಕ್ಷದ ಸಭೆ ಕರೆದಿರುವುದಕ್ಕೂ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ಅವರು ಆಕ್ಷೇಪ ವ್ಯಕ್ತಪಡಿಸಿದರು
ರಾಜ್ಯದ ಜಲ ವಿವಾದಗಳ ಕುರಿತು ಬುಧವಾರ ನಡೆದ ಸರ್ವ ಪಕ್ಷ ಸಭೆಯಲ್ಲಿ ಮಾತನಾಡಿದ ಈ ನಾಯಕರು, ತಮಿಳುನಾಡಿಗೆ ನೀರು ಬಿಟ್ಟು ಈಗ ಸರ್ವಪಕ್ಷ ಸಭೆ ಕರೆದಿರುವ ಸರ್ಕಾರದ ನಡೆ ಸರಿಯಲ್ಲ. ಮೊದಲೇ ಕರೆಯಬೇಕಿತ್ತು. ತಡವಾಗಿ ಸರ್ಕಾರ ಎಚ್ಚೆತ್ತುಕೊಂಡಿದೆ. ತಮಿಳುನಾಡಿಗೆ ನಾವು ಹೆಚ್ಚು ನೀರು ಬಿಟ್ಟಿಲ್ಲ ಎಂದು ಸಮರ್ಥಿಸಿಕೊಳ್ಳುವ ಸರ್ಕಾರ ರಾಜ್ಯದ ರೈತರಿಗೆ ಎಷ್ಟುನೀರು ಹರಿಸಿದೆ ಎಂಬುದನ್ನೂ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು.
ಶ್ರೀಮಂತರ ಜೇಬು ತುಂಬಿಸುವವರು ದೇಶದಲ್ಲಿ ಅಧಿಕಾರದಲ್ಲಿದ್ದಾರೆ: ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಪ್ರತಿಪಕ್ಷಗಳು ನೆಲ, ಜಲ, ಭಾಷೆ ವಿಚಾರದಲ್ಲಿ ಪ್ರಶ್ನೆ ಮಾಡಿದರೆ ರಾಜಕೀಯ ಎಂದು ಭಾವಿಸಬಾರದು. ನೀರು ಬಿಡುವ ಮೊದಲೇ ಸಭೆ ಕರೆದಿದ್ದರೆ ಅದಕ್ಕೊಂದು ಅರ್ಥ ಬರುತ್ತಿತ್ತು ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ, ನೀರು ಬೇಕಾದರೆ ರೈತರೇ ನ್ಯಾಯಾಲಯಕ್ಕೆ ಹೋಗಲಿ ಎನ್ನುವುದಾದರೆ ಸರ್ಕಾರ ಏಕೆ ಬೇಕು. ಇನ್ನಾದರೂ ಸರ್ಕಾರ ಹೊಣೆಗಾರಿಕೆಯಿಂದ ವರ್ತಿಸಬೇಕು ಎಂದು ಹೇಳಿದ್ದಾಗಿ ತಿಳಿದು ಬಂದಿದೆ.