ಇಡೀ ರಾಜ್ಯದ ಜವಾಬ್ದಾರಿ ನನ್ನ ಹೆಗಲ ಮೇಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ಮಾಡುವ ಕನಸನ್ನು ಹೊತ್ತುಕೊಂಡು ಕೆಲಸ ಮಾಡುತ್ತಿದ್ದೇನೆ. ಮಂತ್ರಿಯಾಗಿ ರಾಜ್ಯದ ಜವಾಬ್ದಾರಿಯೂ ಇರುವುದರಿಂದ ಯೋಜನೆಗಳನ್ನು ಜಾರಿಗೊಳಿಸಲು ಸ್ವಲ್ಪ ವಿಳಂಬವಾಗಬಹುದು. 

The responsibility of the entire state is on my shoulders Says minister laxmi hebbalkar gvd

ಬೆಳಗಾವಿ (ಸೆ.28): ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ಮಾಡುವ ಕನಸನ್ನು ಹೊತ್ತುಕೊಂಡು ಕೆಲಸ ಮಾಡುತ್ತಿದ್ದೇನೆ. ಮಂತ್ರಿಯಾಗಿ ರಾಜ್ಯದ ಜವಾಬ್ದಾರಿಯೂ ಇರುವುದರಿಂದ ಯೋಜನೆಗಳನ್ನು ಜಾರಿಗೊಳಿಸಲು ಸ್ವಲ್ಪ ವಿಳಂಬವಾಗಬಹುದು. ಆದರೆ, ನನ್ನ ಗುರಿಯಿಂದ ಎಂದಿಗೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕರಡಿಗುದ್ದಿ ಗ್ರಾಮಸ್ಥರು ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಶಾಸಕಿಯಾಗಿ ನಾನು ಮಾಡಿರುವ ಕೆಲಸ ನಿಮ್ಮ ಮುಂದಿದೆ. ಹಾಗಾಗಿಯೇ ನೀವೆಲ್ಲ ಅತ್ಯಧಿಕ ಬಹುಮತ ನೀಡಿ ಕಳೆದ ಚುನಾವಣೆಯಲ್ಲಿ ನನ್ನನ್ನು ಆಯ್ಕೆ ಮಾಡಿದ್ದೀರಿ. ನಿಮ್ಮಿಂದಾಗಿ ನಾನು ರಾಜ್ಯದ ಮಂತ್ರಿಯೂ ಆಗಿದ್ದೇನೆ ಎಂದರು. ಈಗ ಇಡೀ ರಾಜ್ಯದ ಜವಾಬ್ದಾರಿ ನನ್ನ ಹೆಗಲ ಮೇಲಿದೆ. ಅಂದ ಮಾತ್ರಕ್ಕೆ ಕ್ಷೇತ್ರವನ್ನು ಕಡೆಗಣಿಸುವ ಪ್ರಶ್ನೆ ಇಲ್ಲ. ಇಲ್ಲಿನ ಕೆಲಸಗಳು ನಿರಂತರವಾಗಿ ಮುಂದುವರಿಯಲಿವೆ. ನಾನು ಹಾಕಿಕೊಂಡ ಗುರಿಯಿಂದ ಹಿಂದೆ ಸರಿಯುವ ಜಾಯಮಾನ ನನ್ನದಲ್ಲ. ಅತ್ಯಂತ ವ್ಯವಸ್ಥಿತವಾಗಿಯೇ ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತೇನೆ ಎಂದು ಭರವಸೆ ನೀಡಿದರು.

ಬಿಜೆಪಿಗೂ ಜೆಡಿಎಸ್‌ ಮೈತ್ರಿ ಕಹಿ ಅನುಭವ ಆಗಲಿದೆ: ಸಚಿವ ದಿನೇಶ್‌ ಗುಂಡೂರಾವ್‌ ಲೇವಡಿ

ಈ ಸಮಯದಲ್ಲಿ ಗ್ರಾಮದ ಹಿರಿಯರು, ಜಡಿಸಿದ್ದೇಶ್ವರ ಸ್ವಾಮೀಜಿ, ಶಂಕರಗೌಡ ಪಾಟೀಲ, ಗಂಗಪ್ಪ ಮತ್ತಿಕೊಪ್ಪ, ಶಿವಾಜಿ ಕುರಿ, ಅಂಜನಾ ಅರಬಳ್ಳಿ, ಹಾಲಪ್ಪ ನೇಸರಗಿ, ರೂಪಾ ಸೊಗಲದ, ರೂಪಾ ಬೊರನ್ನವರ್, ಪಾರವ್ವ ಅರಬಳ್ಳಿ, ರೇಣುಕಾ ಕೆಂಪನ್ನವರ, ಶೀಲಾ ಪಾಟೀಲ, ಸೋಮಪ್ಪ ಮೂಕನವರ, ಬಾಬಾಗೌಡ ಪಾಟೀಲ, ಸರೋಜಿನಿ ಪಾಟೀಲ, ಅಶೋಕ ಮೂಕನವರ, ಸಿದ್ದಪ್ಪ ಚೌಗುಲಾ, ಶಂಕರ್ ಮುರಕಿಭಾವಿ, ಬಸವರಾಜ ರಾಚನ್ನವರ್, ಬಸವಣ್ಣೆಪ್ಪ ಅರಬಳ್ಳಿ, ಪ್ರಕಾಶ ಕಡ್ಯಾಗೋಳ, ಪಿಡಿಒ ಹರ್ಷವರ್ಧನ ಉಪಸ್ಥಿತರಿದ್ದರು.

ಶಿಕ್ಷಕರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ: ಸರಕಾರಿ ಶಾಲೆಯಲ್ಲಿ ಕಲಿತ ವ್ಯಕ್ತಿ ಮುಂದೆ ಜೀವನದಲ್ಲಿ ಎಂತಹ ಪರೀಕ್ಷೆ ಎದುರಾದರೂ ಉತ್ತೀರ್ಣನಾಗುತ್ತಾನೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ (ದ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ತಾಲೂಕಾ ವಲಯ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿಯ ಗಾಂಧಿ ಭವನದಲ್ಲಿ ನಡೆದ 62 ನೇ ಶಿಕ್ಷಕರ ದಿನಾಚರಣೆ ಮತ್ತು ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಎಲ್ಲ ಮಕ್ಕಳನ್ನೂ ಸಮಾನದೃಷ್ಟಿಯಿಂದ ನೋಡುವ ಶಿಕ್ಷಕರು, ಮಕ್ಕಳಿಗೆ ಸಂಸ್ಕೃತಿಯನ್ನು ಕಲಿಸುತ್ತಾರೆ. ಮಕ್ಕಳ ಭವಿಷ್ಯಕ್ಕೆ ಪಾಲಕರಿಗಿಂತ ಹೆಚ್ಚು ಕಾಳಜಿ ವಹಿಸುತ್ತಾರೆ. ಅಂತಹ ಶಿಕ್ಷಕರಿಗೆ ನೆಮ್ಮದಿಯ ಜೀವನ ನೀಡಲು ನಮ್ಮ ಸರಕಾರ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು. ಬೆಳಗಾವಿಯಲ್ಲಿ ಶಿಕ್ಷಕರ ಭವನ ನಿರ್ಮಾಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ಜಾಗ ಒದಗಿಸುವುದಾಗಿ ಭರವಸೆ ನೀಡಿದ ಲಕ್ಷ್ಮೀ ಹೆಬ್ಬಾಳಕರ್, ಈ ದೇಶವನ್ನು ಕಟ್ಟುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಪ್ರಶಂಸಿಸಿದರು.

ವೃತ್ತಿಪರ ಕೋರ್ಸ್‌ಗಳಿಂದ 21 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲ: ಸಚಿವ ಎಂ.ಸಿ.ಸುಧಾಕರ್

ಶಿಕ್ಷಕರನ್ನು ಬ್ರಹ್ಮ, ವಿಷ್ಣು, ಮಹೇಶ್ವರ ಎಂದು ಕರೆಯುತ್ತೇವೆ. ಶಿಕ್ಷಕರಿಗೆ ದೇವರ ಸ್ಥಾನವನ್ನು ನೀಡಲಾಗಿದೆ. ಇಡೀ ದೇಶದ ಭವಿಷ್ಯ ಶಿಕ್ಷಕರ ಮೇಲೆ ಅವಲಂಬಿಸಿದೆ. ಸಮಾಜದ, ದೇಶದ ಭವಿಷ್ಯವನ್ನು ರೂಪಿಸುವವರು ಶಿಕ್ಷಕರು. ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳು ಎಂದ ಅವರು, ಶಿಕ್ಷಕರ ಸಮಸ್ಯೆಗಳು, ಅದರಲ್ಲೂ ಗ್ರಾಮೀಣ ಶಿಕ್ಷಕರ, ಮಹಿಳಾ ಶಿಕ್ಷಕರ ಸಮಸ್ಯೆಗಳನ್ನು ನಾನು ಅರಿತಿದ್ದೇನೆ. ಮಧು ಬಂಗಾರಪ್ಪನವರು ಬಹಳ ಒಳ್ಳೆಯ ಶಿಕ್ಷಣ ಸಚಿವರು. ಅತ್ಯಂತ ತಳಮಟ್ಟದ ಸಮಸ್ಯೆಗಳನ್ನೂ ಅರಿತಿದ್ದಾರೆ. ಖಂಡಿತ ಅವರಿಂದ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ನಾನು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

Latest Videos
Follow Us:
Download App:
  • android
  • ios