Mekedatu Project: ಪಾದಯಾತ್ರೆಗೆ ಭರ್ಜರಿ ಸಿದ್ಧತೆ: ಇಂದಿನಿಂದ ಆರಂಭ!
*ಪ್ರತಿನಿತ್ಯ ತಲಾ ಒಂದು ವಿಧಾನಸಭೆ, ಲೋಕಸಭಾ ಕ್ಷೇತ್ರದ ಮುಖಂಡರು
*ಇಂದಿನಿಂದ ಪಾದಯಾತ್ರೆ ಆರಂಭ: ಪಾದಯಾತ್ರೆಗೆ ಭರ್ಜರಿ ಸಿದ್ಧತೆ
ರಾಮನಗರ/ಕನಕಪುರ (ಜ. 9): ಮೇಕೆದಾಟು ಯೋಜನೆ (Mekedatu Project) ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಭಾನುವಾರಿಂದ ಜ.19ರವರೆಗೆ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆಯಲ್ಲಿ ಪ್ರತಿನಿತ್ಯ ತಲಾ ಒಂದು ಲೋಕಸಭಾ (Loksabha) ಹಾಗೂ ವಿಧಾನಸಭಾ (Vidhab Sabha) ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಪಾದಯಾತ್ರೆಯ ಮೊದಲ ದಿನ ಭಾನುವಾರದಂದು ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಯ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದರೆ, ಎರಡನೇ ದಿನ ಚಾಮರಾಜನಗರ ಜಿಲ್ಲೆ ಹಾಗೂ ಕನಕಪುರ ಕ್ಷೇತ್ರ, ಮೂರನೇ ದಿನದ ಪಾದಯಾತ್ರೆಯಲ್ಲಿ ಚಾಮರಾಜನಗರ ಲೋಕಸಭಾ ಹಾಗೂ ಮೈಸೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮುಖಂಡರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
4ನೇ ದಿನದ ಪಾದಯಾತ್ರೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ, 5ನೇ ದಿನ ಮಂಡ್ಯ ಹಾಗೂ ರಾಮನಗರ ಜಿಲ್ಲೆ, 6ನೇ ದಿನ ತುಮಕೂರು ಲೋಕಸಭಾ ಕ್ಷೇತ್ರ ಹಾಗೂ ಮಾಗಡಿ ವಿಧಾನ ಸಭಾ ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಹೆಜ್ಜೆ ಹಾಕುವರು.
ಇದನ್ನೂ ಓದಿ: Mekedatu Padayatra, ಮೇಕೆದಾಟು ಪಾದಯಾತ್ರೆ, ಡಿಕೆಶಿಗೆ ರಾಮನಗರ ಎಸ್‌ಪಿ ಖಡಕ್ ಎಚ್ಚರಿಕೆ
7ನೇ ದಿನ ಬೆಂಗಳೂರು ನಗರ ವ್ಯಾಪ್ತಿಯ ನೆಲಮಂಗಲ, ವಿಜಯನಗರ, ರಾಜರಾಜೇಶ್ವರಿ ನಗರ, ಬಸವನಗುಡಿ, ಯಶವಂತಪುರ, ಗೋವಿಂದರಾಜನಗರ, ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರ, 8ನೇ ದಿನ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಸೇರಿದಂತೆ ಬೆಂಗಳೂರಿನ ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಜಯನಗರ ಶಾಂತಿನಗರ, ಬೆಂಗಳೂರು ದಕ್ಷಿಣ ಹಾಗೂ ಸಿ.ವಿ.ರಾಮನ್ ನಗರ ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಭಾಗವಹಿಸುವರು.
9ನೇ ದಿನದ ಪಾದಯಾತ್ರೆಯಲ್ಲಿ ಹೊಸಕೋಟೆ, ಯಲಹಂಕ, ಹೆಬ್ಬಾಳ, ಗಾಂಧಿನಗರ, ರಾಜಾಜಿನಗರ, ಶಿವಾಜಿನಗರ, ಮಹಾಲಕ್ಷ್ಮಿ ಲೇಔಚ್, ದೇವನಹಳ್ಳಿ ಸೇರಿದಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 11ನೇ ದಿನ ಚಿಕ್ಕಪೇಟೆ, ಶಿವಾಜಿನಗರ, ದಾಸರಹಳ್ಳಿ, ಗಾಂಧಿನಗರ ವಿಧಾನಸಭಾ ಕ್ಷೇತ್ರ ಸೇರಿದಂತೆ ಬೀದರ್, ಶಿವಮೊಗ್ಗ, ಕಲ್ಬುರ್ಗಿ, ಬಳ್ಳಾರಿ ರಾಯಚೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ಮುಖಂಡರು, ಕಾರ್ಯಕರ್ತರ ಸಮ್ಮೀಲನದಲ್ಲಿ ಪಾದಯಾತ್ರೆ ಸಾಗಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾವೇಶಗೊಳ್ಳಲಿದೆ.
ಪಾದಯಾತ್ರೆ ಸಿದ್ಧತೆಗಳು ಪೂರ್ಣ:
ಕಾಂಗ್ರೆಸ್ ಪಕ್ಷದ ವತಿಯಿಂದ ಮೇಕೆದಾಟು ಯೋಜನೆ ಶೀಘ್ರ ಆರಂಭಿಕ್ಕಾಗಿ ನಡೆಯುತ್ತಿರುವ ಪಾದಯಾತ್ರೆಗೆ ಕನಕಪುರ ತಾಲೂಕಿನ ಸಂಗಮ ಬಳಿಯಿಂದ ತಾಲೂಕಿನ ಗಡಿಭಾಗ ಚಿಕ್ಕೇನಹಳ್ಳಿಯವರಿಗೆ ಸಕಲ ಸಿದ್ಧತ ಮಾಡಿಕೊಳ್ಳಲಾಗಿದೆ.ರಾಜ್ಯದ ಮೂಲೆ ಮೂಲೆಗಳಿಂದ ಪಾದಯಾತ್ರೆಗೆ ಆಗಮಿಸುವ ಪಕ್ಷದ ಮುಖಂಡರು ಹಾಗೂ ಕಾರ್ಯ ಕಾರ್ಯಕರ್ತರಿಗೆ ತಿಂಡಿ, ಊಟದ ವ್ಯವಸ್ಥೆ ಜೊತೆಗೆ ದಾರಿಯುದ್ದಕ್ಕೂ ನೀರು, ಪಾನಕ, ಮಜ್ಜಿಗೆ ನೀಡಲು ಸ್ಥಳೀಯ ಗ್ರಾಮದ ಮುಖಂಡರು ಹಾಗೂ ಯೂತ್ ಕಾಂಗ್ರೆಸ್ ಪದಾಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಪಾದಯಾತ್ರೆ ಸಾಗುವ ರಸ್ತೆಯ ಅಕ್ಕ-ಪಕ್ಕಬೆಳಿದಿದ್ದ ಗಿಡ-ಗಂಟೆಗಳನ್ನು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸಿ ಯಾವುದೇ ತೊಂದರೆ ಆಗದಂತೆ ನೋಡಿ ಕೊಳ್ಳಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ: Mekedatu Project: ರೂಲ್ಸ್ ಮೀರಿ ಸಭೆ ಮಾಡಿದ್ರೆ ನಿರ್ದಾಕ್ಷಿಣ್ಯ ಕ್ರಮ: ಆರಗ
ಪಾದಯಾತ್ರೆಯಲ್ಲಿ ಭಾಗವಹಿಸುವ ಜನರ ಅನುಕೂಲಕ್ಕಾಗಿ ರಸ್ತೆಯ ಬದಿಯಲ್ಲಿ ಶೌಚಾಲಯ ಗಳನ್ನು ನಿರ್ಮಿಸಿದ್ದು ಪಾದಯಾತ್ರೆ ಗಳಿಗೆ ಅನುಕೂಲ ಮಾಡಿಕೊಡಲಾಗಿದೆ. ರಾತ್ರಿ ವಾಸ್ತವ್ಯಕ್ಕೆ ತಾಲೂಕಿನಲ್ಲಿರುವ ಸಮುದಾಯ ಭವನಗಳು ಹಾಗೂ ನಗರದ ಆರ್‌ಇಎಸ್ ಸಂಸ್ಥೆಯ ಆವರಣದಲ್ಲಿ ಸಕಲ ಸೌಕರ್ಯ ಗಳೊಂದಿಗೆ ವ್ಯವಸ್ಥೆ ಮಾಡಲಾಗಿದೆ.
ಉದ್ಘಾಟನೆಗೆ ಶಿವಣ್ಣ?
ಕಾಂಗ್ರೆಸ್ ಆಯೋಜಿಸಿರುವ ಮೇಕೆದಾಟು ಪಾದಯಾತ್ರೆ ಉದ್ಘಾಟನೆಯಲ್ಲಿ ಭಾನುವಾರ ಖ್ಯಾತ ನಟ ಶಿವರಾಜ್ ಕುಮಾರ್ ಪಾಲ್ಗೊಳ್ಳುವ ಸಾಧ್ಯತೆ ಇದೆ. ಅವರಿಗೆ ಆಹ್ವಾನ ನೀಡಿರುವುದನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಚಿತಪಡಿಸಿದ್ದಾರೆ. ಇದೇ ವೇಳೆ, ಶಿವರಾಜ್ ಕುಮಾರ್ ಅವರನ್ನು ಉದ್ಘಾಟನೆಗೆ ಕರೆ ತರುವುದಾಗಿ ಅವರ ಭಾವ (ಪತ್ನಿ ಗೀತಾ ಅವರ ಸೋದರ), ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪ ಅವರು ಪಕ್ಷದ ನಾಯಕರಿಗೆ ಭರವಸೆ ಇತ್ತಿದ್ದಾರೆ ಎಂದು ತಿಳಿದು ಬಂದಿದೆ.