ಬಿಜೆಪಿಯಲ್ಲಿ ಎರಡು ಗುಂಪಿದೆ, ಅವರ ನಡುವೆ ಸಮನ್ವಯ ಅಸಾಧ್ಯ: ಸಿಎಂ ಸಿದ್ದರಾಮಯ್ಯ
ಬಿಜೆಪಿ ನಾಯಕರು ಎರಡು ಗುಂಪುಗಳಲ್ಲಿ ಹಂಚಿಹೋಗಿದ್ದಾರೆ. ಅವರ ನಡುವೆ ಸಮನ್ವಯ ಅಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಬೆಳಗಾವಿ (ಡಿ.11): ಬಿಜೆಪಿ ನಾಯಕರು ಎರಡು ಗುಂಪುಗಳಲ್ಲಿ ಹಂಚಿಹೋಗಿದ್ದಾರೆ. ಅವರ ನಡುವೆ ಸಮನ್ವಯ ಅಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ವಿಧಾನಮಂಡಲದ ಅಧಿವೇಶನದ ವೇಳೆ ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ. ಯಾವುದನ್ನೂ ವಿಳಂಬ ಅಥವಾ ಕಾಲಹರಣ ಮಾಡುವುದಿಲ್ಲ. ಇವತ್ತಿನವರೆಗೂ ಬರಗಾಲದ ಮೇಲೆ ಚರ್ಚೆಯಾಯಿತು. ಅದಕ್ಕೆ ಉತ್ತರ ನೀಡುತ್ತೇವೆ ಎಂದರು.
ಬಿಜೆಪಿ ನಾಯಕರ ಮಧ್ಯೆ ಸಮನ್ವಯದ ಕೊರತೆಯಿಂದ ಕಲಾಪದ ಸಮಯ ವ್ಯರ್ಥವಾಗುತ್ತಿದೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿಯೊಳಗೆ ಎಂದಿಗೂ ಸಮನ್ವಯ ಇಲ್ಲವೇ ಇಲ್ಲ. ಅವರು ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದವರು. ನಂತರ ಜನ ಅವರನ್ನು ತಿರಸ್ಕರಿಸಿದ್ದಾರೆ. ನಂತರ ಸಮನ್ವಯ ಬರಲು ಸಾಧ್ಯವೇ ಇಲ್ಲ. ಅವರಲ್ಲಿ ಎರಡು ಗುಂಪುಗಳಿದ್ದು, ಬಿಜೆಪಿ ನಾಯಕರು ಎರಡು ಗುಂಪುಗಳಲ್ಲಿ ಹಂಚಿ ಹೋಗಿದ್ದಾರೆ ಎಂದರು.
ಕೊಬ್ಬರಿಗೆ ಬೆಂಬಲ ಬೆಲೆಗಾಗಿ ಅರಸೀಕೆರೆಯಿಂದ ತುಮಕೂರಿಗೆ ಪಾದಯಾತ್ರೆ: ಎಚ್‌ಡಿಕೆ
ಪಂಚಮಸಾಲಿ ಸ್ವಾಮೀಜಿಗಳ ಧರಣಿ ಕುರಿತು ಪ್ರತಿಕ್ರಿಯಿಸಿ, ಪಂಚಮಸಾಲಿ ನಾಯಕರು ಹಾಗೂ ಸ್ವಾಮೀಜಿಯವರೊಂದಿಗೆ ಮಾತನಾಡುತ್ತೇನೆ. ಡಿ.13 ರಂದು ವಿಧಾನಸಭೆ ಅಧಿವೇಶನ ಮುಗಿದ ನಂತರ ಅವರೊಂದಿಗೆ ಚರ್ಚೆ ಮಾಡುವುದಾಗಿ ತಿಳಿಸಿದ್ದೇನೆ ಎಂದರು. ಸರ್ಕಾರ ಪತನವಾಗಲಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿ ಮತ್ತು ಜೆಡಿಎಸ್ ನವರು ನೀರಿನಿಂದ ತೆಗೆದ ಮೀನಿನಂತೆ ವಿಲಿ, ವಿಲಿ ಒದ್ದಾಡುತ್ತಿದ್ದಾರೆ. ಭ್ರಮಾಲೋಕದಲ್ಲಿ ತೇಲುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಈ ವಾರ ಉತ್ತರ ಕರ್ನಾಟಕದ ಸಮಸ್ಯಗಳ ಕುರಿತ ಚರ್ಚೆ ಆಗಬೇಕು: ಈ ವಾರ ಉತ್ತರ ಕರ್ನಾಟಕದ ಸಮಸ್ಯಗಳ ಕುರಿತಿ ಚರ್ಚೆ ಆಗಬೇಕು. ಕಳೆದ ವಾರದಲ್ಲಿ ಗೊಂದಲ ಸೃಷ್ಟಿಸಿ ಕಾಲಹರಣ ಮಾಡಿದ್ದರು. ಕಲಾಪ ಸರಿಯಾಗಿ ಬಳಸಿಕೊಳ್ಳಲು ಆಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಸದನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕು. ಈ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು.
ನಿವೃತ್ತ ಅಧಿಕಾರಿ ನೇತೃತ್ವದಲ್ಲಿ ಅರ್ಜುನ ಸಾವಿನ ತನಿಖೆ: ಸಚಿವ ಈಶ್ವರ ಖಂಡ್ರೆ
ಉತ್ತರ ಕರ್ನಾಟಕ ಅಷ್ಟೇ ಅಲ್ಲದೇ ಸಮಗ್ರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಆಗಲಿ ಎಂದು ತಿಳಿಸಿದರು. ಸರ್ಕಾರ ಎಲ್ಲವನ್ನು ಸರಿಪಡಿಸಿಕೊಂಡು ಕೆಲಸ ಮಾಡಬೇಕಾಗಿದೆ. ಆದರೆ, ವಿಪಕ್ಷಗಳು ಯಾವ ವಿಷಯವನ್ನು ಸರಿಯಾಗಿ ಚರ್ಚೆ ನಡೆಸುತ್ತಿಲ್ಲ, ಇದು ದುರಂತ ಎಂದು ತಿಳಿಸಿದರು. ವಿಧಾನ ಪರಿಷತ್‌ನಲ್ಲಿ ವಿಪಕ್ಷ ನಾಯಕನ್ನು ಆಯ್ಕೆ ಮಾಡಲು ಆಗಿಲ್ಲ. ಸರ್ಕಾರಕ್ಕೆ 6 ತಿಂಗಳು ಕಳೆದರೂ ಸಹ ಅವರಿಂದ ಆಯ್ಕೆ ಮಾಡಲಾಗುತ್ತಿಲ್ಲ ಎಂದು ಲೇವಡಿ ಮಾಡಿದರು.