ವಲಸಿಗ ಸಚಿವರ ಜೊತೆ ಚರ್ಚೆ ಇದೆ. ಕಾಂಗ್ರೆಸ್ಸಿಗೆ ಬರುವ ಬಗ್ಗೆ ಚರ್ಚೆ ಇದೆ. ಗೊತ್ತಿಲ್ಲ ಅಂತಿಮವಾಗಿ, ಚುನಾವಣೆ ಘೋಷಣೆ ಆದ ಮೇಲೆ ಗೊತ್ತಾಗುತ್ತೆ. ಸೋಮಶೇಖರ್, ಬೈರತಿ ಸೇರಿದಂತೆ ಹಲವರು ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆ ಇದೆ ಅಂತ  ಚೆಲುವರಾಯಸ್ವಾಮಿ ಹೇಳಿದ್ದಾರೆ. 

ಬೆಂಗಳೂರು (ಮಾ.28): ಕಳೆದ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಒಳ ಮೈತಿ ಎಂಬ ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ಕಳೆದ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಒಳಮೈತ್ರಿ ಆಗಿತ್ತು. ಯೋಗೇಶ್ವರ್ ಸತ್ಯ ಹೇಳಿದ್ದಾರೆ. ರಾಜ್ಯದಲ್ಲಿ ಪೂರ್ತಿ ಒಳ ಒಪ್ಪಂದ ಆಗಿತ್ತು. ಯೋಗೇಶ್ವರ್ ಪಾಪ ಏನಕ್ಕೆ ಹೇಳಿದ್ರು ಅಂತ ಗೊತ್ತಿಲ್ಲ. ಬಿಜೆಪಿಯಲ್ಲಿ ಉಸಿರುಗಟ್ಟಿದ ವಾತಾವರಣ ಅವರಿಗೆ ಇದೆ. ನಮ್ಮ ಸಿದ್ದಾಂತ ಒಪ್ಪಿ ಬಂದ್ರೆ ಸ್ವಾಗತ. ವಲಸಿಗ ಸಚಿವರ ಜೊತೆ ಚರ್ಚೆ ಇದೆ. ಕಾಂಗ್ರೆಸ್ಸಿಗೆ ಬರುವ ಬಗ್ಗೆ ಚರ್ಚೆ ಇದೆ. ಗೊತ್ತಿಲ್ಲ ಅಂತಿಮವಾಗಿ, ಚುನಾವಣೆ ಘೋಷಣೆ ಆದ ಮೇಲೆ ಗೊತ್ತಾಗುತ್ತೆ. ಸೋಮಶೇಖರ್, ಬೈರತಿ ಸೇರಿದಂತೆ ಹಲವರು ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆ ಇದೆ ಅಂತ ಚೆಲುವರಾಯಸ್ವಾಮಿ ಒಪ್ಪಿಕೊಂಡಿದ್ದಾರೆ. 

ಕೆಆರ್ ನಗರದಲ್ಲಿ ಡಮ್ಮಿ ಅಭ್ಯರ್ಥಿ ಹಾಕಿದ್ರು. ಐದು ವರ್ಷ ಪಕ್ಷಕ್ಕೆ ದುಡಿದವನ ಬಿಟ್ಟು ಬೇರೆಯವರಿಗೆ ಕೊಟ್ರು. ಯೋಗೇಶ್ವರ್ ಈಗ ಸೂಕ್ತವಾಗಿ ಹೇಳಿದ್ದಾರೆ. ಕಳೆದ ಬಾರಿ ಅತಂತ್ರದ ಬಗ್ಗೆ ಕುಮಾರಸ್ವಾಮಿ ಹತ್ರ ಕೇಳಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಸಿಎಂ ಬೊಮ್ಮಾಯಿ ಆಪ್ತ ಕುನ್ನೂರು ಕಾಂಗ್ರೆಸ್‌ಗೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಲಗೈ ಬಂಟನಂತಿದ್ದ ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ನಾಯಕ, ಮಾಜಿ ಸಂಸದ ಹಾಗೂ ಮಾಜಿ ಶಾಸಕ ಮಂಜುನಾಥ್‌ ಕುನ್ನೂರು ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರಿರುವುದು ಬಿಜೆಪಿಯ ಶೋಚನೀಯ ಸ್ಥಿತಿಗೆ ಸಾಕ್ಷಿ. ಆಪ್ತರನ್ನೇ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗದ ಬೊಮ್ಮಾಯಿ ಜನರ ವಿಶ್ವಾಸ ಗಳಿಸಲು ಸಾಧ್ಯವೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದ್ದಾರೆ.

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಮಂಜುನಾಥ್‌ ಕುನ್ನೂರು ಸೇರಿದಂತೆ ಶಿಗ್ಗಾಂವಿ ಬಿಜೆಪಿ ನಾಯಕರು, ಚಿಂತಾಮಣಿ, ಕೆ.ಆರ್‌.ಪೇಟೆ ಹಾಗೂ ಶಿವಮೊಗ್ಗ ಕ್ಷೇತ್ರದ ವಿವಿಧ ಪಕ್ಷಗಳ ನಾಯಕರು ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡರು.

ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ಮಂಜುನಾಥ್‌ ಕುನ್ನೂರು ಅವರು ಲೋಕಸಭೆ ಮಾಜಿ ಸದಸ್ಯರು, ಮೂರು ಬಾರಿ ಶಾಸಕರಾಗಿದ್ದರು. ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಬೇಷರತ್‌ ಸೇರುತ್ತಿದ್ದಾರೆ. ಬಿಜೆಪಿ ನಾಯಕರೇ ಮುಖ್ಯಮಂತ್ರಿ ಕ್ಷೇತ್ರದಲ್ಲಿ ಬದಲಾವಣೆ ಬಯಸಿದ್ದಾರೆ ಎಂಬುದಕ್ಕೆ ಇದು ಸಾಕ್ಷಿ. ಈ ಸೇರ್ಪಡೆ ಶಿಗ್ಗಾಂವಿ ಕ್ಷೇತ್ರದಲ್ಲಿ ಮುಂಬರುವ ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯಡಿಯೂರಪ್ಪ ಮನೆಗೆ ಕಲ್ಲು ತೂರಾಟಕ್ಕೆ ಸರ್ಕಾರದ ವೈಫಲ್ಯವೇ ಕಾರಣ: 

ಸಿದ್ದರಾಮಯ್ಯ ಮಾತನಾಡಿ, ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದೆ. ಜನದ್ರೋಹಿ ಬಿಜೆಪಿಯಲ್ಲಿ ಸೋಲಿಸಲು ಜನರೇ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಬೇರೆ ಪಕ್ಷದಲ್ಲಿರುವವರು ಕಾಂಗ್ರೆಸ್‌ಗೆ ಬಲ ತುಂಬಲು ಬರುತ್ತಿದ್ದಾರೆ. ಇಂದು ಕಾಂಗ್ರೆಸ್‌ ಸೇರುತ್ತಿರುವವರನ್ನು ಸ್ವಾಗತ ಮಾಡುತ್ತಿದ್ದೇನೆ. ನಾಳೆಯಿಂದಲೇ ನೀವೆಲ್ಲಾ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ಮನೆ-ಮನೆಗೂ ತಲುಪಿಸಿ ಕಾಂಗ್ರೆಸ್‌ ಗೆಲುವಿಗೆ ಕೆಲಸ ಮಾಡಬೇಕು ಎಂದು ಹೇಳಿದರು.

ಹಾಸನ ಟಿಕೆಟ್ ವಿಚಾರವಾಗಿ ಗೊಂದಲ ಇರೋದು ನಿಜ, ಒಪ್ಪಿಕೊಂಡ ಕುಮಾರಸ್ವಾಮಿ

ಮೋದಿ, ಅಮಿತ್‌ ಶಾರಷ್ಟು ದುಷ್ಟರು ಬೇರೆ ಇಲ್ಲ: ಕುನ್ನೂರು
40 ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿದ್ದವನು ನಾನು. ಪಂಚಮಸಾಲಿ ಮೀಸಲಾತಿಯ ಹೋರಾಟದಲ್ಲಿ ತೊಡಗಿದ್ದೆ. ಇದೀಗ ಮುಸ್ಲಿಂ ಮೀಸಲಾತಿ ಕಸಿದು ನಮಗೆ ನೀಡಲು ಹೊರಟಿದ್ದಾರೆ. ಈ ಕಾರಣಕ್ಕೆ ಬಿಜೆಪಿ ಬಿಟ್ಟಿದ್ದೇನೆ. ನರೇಂದ್ರ ಮೋದಿ, ಅಮಿತ್‌ ಶಾ ಅವರಷ್ಟುದುಷ್ಟರು ಬೇರೆ ಇಲ್ಲ ಎಂದು ಇದೇ ವೇಳೆ ಅವರು ಹೇಳಿಕೆ ನೀಡಿದ್ದಾರೆ.