ಸಚಿವರಾದ ಲಕ್ಷ್ಮೇ ಹೆಬ್ಬಾಳ್ಕರ್‌ ಹಾಗೂ ಸತೀಶ ಜಾರಕಿಹೊಳಿ ಅವರ ನಡುವೆ ಯಾವುದೇ ಕೋಲ್ಡ್ ವಾರ್ ಇಲ್ಲ. ಇದೊಂದು ಊಹಾಪೋಹ ಎಂದು ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು

ಬೆಳಗಾವಿ ಆ.6) :  ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಹಾಗೂ ಸತೀಶ ಜಾರಕಿಹೊಳಿ ಅವರ ನಡುವೆ ಯಾವುದೇ ಕೋಲ್ಡ್ ವಾರ್ ಇಲ್ಲ. ಇದೊಂದು ಊಹಾಪೋಹ ಎಂದು ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರೂ ಸಚಿವರ ಸಮನ್ವಯತೆಯಲ್ಲಿ ಎಲ್ಲ ಕೆಲಸ, ಕಾರ್ಯಗಳು ನಡೆದಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅವರವರ ಜಿಲ್ಲೆಯ ಉಸ್ತುವಾರಿಯನ್ನು ಸಮರ್ಥವಾಗಿ ಸಚಿವದ್ವಯರು ನಿಭಾಯಿಸುತ್ತಿದ್ದಾರೆ. ಅಲ್ಲದೆ, ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಸಚಿವ ಸತೀಶ ಜಾರಕಿಹೊಳಿ ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿರುವುದರ ಬಗ್ಗೆ ತೃಪ್ತಿ ಇದೆ ಎಂದು ಹೇಳಿದರು. ಇನ್ನು, ಗೃಹಲಕ್ಷ್ಮೇ ಯೋಜನೆಗೆ ಬೆಳಗಾವಿಯಿಂದಲೇ ಚಾಲನೆ ನೀಡಲು ನಿರ್ಧರಿಸಲಾಗಿದ್ದು, ಈ ಕುರಿತು ತಾತ್ಕಾಲಿಕ ಯೋಜನೆ ರೂಪಿಸಲಾಗಿದೆ ಎಂದರು.

ಮತ್ತೆ ಮುನ್ನಲೆಗೆ ಬಂದ ಜಾರಕಿಹೊಳಿ ಸಿಡಿ ಪ್ರಕರಣ: ಡಿಕೆಶಿ ಬ್ಲಾಕ್‌ಮೇಲ್ ಮಾಡಿದ್ರೆ ಸಿಬಿಐಗೆ ವಹಿಸಲಿ - ಚನ್ನರಾಜ್ ಸವಾಲು!

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರೊಂದಿಗೆ ಚರ್ಚೆ ಮಾಡಿ, ಬಳಿಕ ಇಲಾಖಾವಾರು ಹಾಗೂ ಶಾಸಕರ ಜೊತೆಗೆ ಸಭೆ ನಡೆಸಲಾಗುವುದು ಎಂದು ಚನ್ನರಾಜ ಹಟ್ಟಿಹೊಳಿ ಮಾಹಿತಿ ನೀಡಿದರು.