ಬಿಜೆಪಿ ಟಿಕೆಟ್ ವಿಚಾರದಲ್ಲಿ ಗೊಂದಲ ಇಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಜಿಲ್ಲೆಯಲ್ಲಿ ಬಿಜೆಪಿ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ನಡೆದಿರುವ ಎಲ್ಲ ಬೆಳವಣಿಗೆಯನ್ನು ಗಮನಿಸುತ್ತಿದ್ದೇವೆ.
ಬೆಳಗಾವಿ (ಏ.01): ಜಿಲ್ಲೆಯಲ್ಲಿ ಬಿಜೆಪಿ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ನಡೆದಿರುವ ಎಲ್ಲ ಬೆಳವಣಿಗೆಯನ್ನು ಗಮನಿಸುತ್ತಿದ್ದೇವೆ. ಎಲ್ಲವನ್ನೂ ಸರಿ ಮಾಡಲಾಗುವುದು. ಅಥಣಿ ಟಿಕೆಟ್ ವಿಚಾರವಾಗಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮತ್ತು ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಬ್ಬರಿಗೂ ಬಹಿರಂಗವಾಗಿ ಮಾತನಾಡದಂತೆ ತಾಕೀತು ನೀಡಲಾಗಿದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ರೀತಿ ನಮ್ಮದು ಪರಿವಾರದ ಪಾರ್ಟಿಯಲ್ಲ. ನಮ್ಮದು ಡೆಮಾಕ್ರಟಿಕ್ ಪಾರ್ಟಿ. ಅದರ ಅಡಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗುತ್ತದೆ.
ಕಾಂಗ್ರೆಸ್ ಪಾರ್ಟಿ ಸುಳ್ಳು ಆಶ್ವಾಸನೆ ಕೊಡುವುದರಲ್ಲಿ ಎಕ್ಸ್‌ಪರ್ಚ್ ಆಗಿದೆ. ಗ್ಯಾಸ್ ಸಿಲಿಂಡರ್‌ಗೆ ಹಣ ಕೊಡುತ್ತೇವೆ. ಹೆಣ್ಣು ಮಕ್ಕಳಿಗೆ ದುಡ್ಡು ಕೊಡುತ್ತೇವೆ ಎಂದು ಹೇಳುತ್ತಾರೆ. ಇವರ ಕಾಲದಲಿ ಬೆಲೆ ಏರಿಕೆ ಎಷ್ಟಿತ್ತು ಎಂದು ಪ್ರಶ್ನಿಸಿದರು. ಒಂದು ಕುಟುಂಬಕ್ಕೆ ವರ್ಷಕ್ಕೆ .78 ಸಾವಿರ ಕೊಡುತ್ತೇವೆಂದು ಹೇಳುತ್ತಿದ್ದಾರೆ. ಗ್ಯಾರಂಟಿ ಕಾರ್ಡ್ ಕೊಡುತ್ತೇವೆ ಎನ್ನುತ್ತಾರೆ. ಆದರೆ, ಅವರು ಏನು ಹೇಳುತ್ತಾರೋ ಅದನ್ನು ಮಾಡುವುದೇ ಇಲ್ಲ. ರಾಜಸ್ಥಾನದಲ್ಲಿ ಕೊಟ್ಟ ಭರವಸೆಗಳನ್ನು ಇನ್ನೂ ಈಡೇರಿಸಿಲ್ಲ. ಕಳೆದ ಬಾರಿ ಕರ್ನಾಟಕದಲ್ಲಿ ಕೊಟ್ಟಭರವಸೆಯನ್ನೂ ಈಡೇರಿಸಿಲ್ಲ. ಮೋದಿ ನೇತೃತ್ವದ ಡಬಲ್ ಎಂಜಿನ್ ಸರ್ಕಾರ ಅಭಿವೃದ್ಧಿ ಮಾಡುತ್ತಿದೆ ಎಂದರು.
ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿಯಿಂದ ಸ್ಪರ್ಧೆ ಇದ್ದೇ ಇದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್‌ನವರು ಭ್ರಮನಿರಸಗೊಂಡಿದ್ದಾರೆ. ಸಿದ್ದರಾಮಯ್ಯ ಇಡೀ ರಾಜ್ಯದಲ್ಲಿ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸುತ್ತಿದಾರೆ. ಅವರಿಗೆ ಇನ್ನೂ ಕ್ಷೇತ್ರವೇ ಸಿಕ್ಕಿಲ್ಲ. ವರುಣಾದಲ್ಲಿ ಸ್ಪರ್ಧೆ ಮಾಡುತ್ತೇನೆ ಎನ್ನುತ್ತಾರೆ. ಅಪ್ಪನಿಗಾಗಿ ಮಗ ದೊಡ್ಡ ತ್ಯಾಗ ಮಾಡಿದ ರೀತಿ ಬಿಂಬಿಸಿಕೊಳ್ಳುತ್ತಿದ್ದಾರೆ. ವರುಣಾದಲ್ಲಿ ಸೋಲುತ್ತೇನೆ ಎಂಬ ಭಯಕ್ಕೆ ಮತ್ತೊಂದು ಕ್ಷೇತ್ರದಿಂದ ಸ್ಪರ್ಧೆ ಮಾಡಲು ಹೊರಟಿದ್ದಾರೆ. ಕೋಲಾರ ಸೇರಿದಂತೆ ಬೇರೆ ಬೇರೆ ಕಡೆ ಕ್ಷೇತ್ರ ಹುಡುಕುತ್ತಿದ್ದಾರೆ. ಸಿದ್ದರಾಮಯ್ಯನವರು 224 ಕ್ಷೇತ್ರ ಸ್ಪರ್ಧೆ ಮಾಡಲಿ. ದೇಶದಲ್ಲೇ ಕಾಂಗ್ರೆಸ್ ಪಾರ್ಟಿ ಇಸ್ ರಿಜೆಕ್ಟ್ ಪಾರ್ಟಿ ಎಂದು ವ್ಯಂಗ್ಯವಾಡಿದರು.
ಮುಂಬರುವ ರಾಜಸ್ಥಾನ, ಛತ್ತೀಸಗಡ ರಾಜ್ಯದಲ್ಲೂ ಕಾಂಗ್ರೆಸ್ ಸೋಲುತ್ತದೆ. ಈ ಬಾರಿ ರಾಜ್ಯದಲ್ಲಿ ಮೋದಿಯವರ ಕೆಲಸ ನೋಡಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
ಬಿಜೆಪಿ ಸರ್ಕಾರ ಪತನಗೊಳಿಸಿ ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ: ಸತೀಶ್ ಜಾರಕಿಹೊಳಿ
ಆಕಾಂಕ್ಷಿಗಳ ಬಗ್ಗೆ ಅಭಿಪ್ರಾಯ ಸಂಗ್ರಹ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಬೆಳಗಾವಿಯ ಮಹಾನಗರ, ಬೆಳಗಾವಿ ಗ್ರಾಮಾಂತರ ಜಿಲ್ಲೆಯ 10 ಕ್ಷೇತ್ರದ ಪದಾಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಸಂಸದೆ ಮಂಗಲ ಅಂಗಡಿ, ಮಹಾನಗರದ ಅಧ್ಯಕ್ಷ , ಶಾಸಕ ಅನಿಲ ಬೆನಕೆ, ಗ್ರಾಮೀಣ ಅಧ್ಯಕ್ಷ ಸಂಜಯ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು. ಸಭೆಯಲ್ಲಿ ಬೆಳಗಾವಿ ಲೋಕಸಭೆ ವ್ಯಾಪ್ತಿಯ 10 ಮತಕ್ಷೇತ್ರದ ಪದಾಧಿಕಾರಿಗಳು ಭಾಗಿಯಾಗಿದ್ದರು. ಅಭ್ಯರ್ಥಿಗಳ ಆಯ್ಕೆಗೆ ವಿನೂತನ ಪ್ರಯೋಗಕ್ಕೆ ಬಿಜೆಪಿ ಮುಂದಾಗಿದ್ದು, ಪಕ್ಷದ ಪದಾಧಿಕಾರಿಗಳಿಂದ ಮತದಾನ ಮೂಲಕ ಅಭಿಪ್ರಾಯ ಸಂಗ್ರಹಿಸಲಾಯಿತು. ಬೆಳಗಾವಿ ಮಹಾನಗರ, ಗ್ರಾಮಾಂತರ ಜಿಲ್ಲೆ ಮತಕ್ಷೇತ್ರದ ಆಕಾಂಕ್ಷಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಯಿತು. ಗೌಪ್ಯ ಮತದಾನದ ಮೂಲಕ ಆಕಾಂಕ್ಷಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗಿದ್ದು, ಮತ ಚೀಟಿಯಲ್ಲಿ ಜಿಲ್ಲೆ, ಮತಕ್ಷೇತ್ರ ಹಾಗೂ ಅಭ್ಯರ್ಥಿಗಳ ಹೆಸರು ಸೂಚಿಸಲು ಅವಕಾಶ ನೀಡಲಾಗಿತ್ತು. ಬೆಳಗಾವಿ ಉತ್ತರ ಮತಕ್ಷೇತ್ರ ಹಾಗೂ ಬೆಳಗಾವಿ ದಕ್ಷಿಣ ಕ್ಷೇತ್ರದ ಆಕಾಂಕ್ಷಿಗಳ ಕುರಿತು ಅಭಿಪ್ರಾಯ ಸಂಗ್ರಹಿಸಲಾಯಿತು.