ಬಿಜೆಪಿಯಲ್ಲಿ ಶಿಸ್ತಿಲ್ಲ, ಯತ್ನಾಳ್ ವಿರುದ್ಧ ಕ್ರಮವಿಲ್ಲವೇಕೆ: ಶಾಸಕ ಶಿವರಾಮ ಹೆಬ್ಬಾರ್
ಬಿಜೆಪಿ ಶಿಸ್ತಿನ ಪಕ್ಷ ಎಂಬುದನ್ನು ಈಗ ಕಳೆದುಕೊಂಡಿದ್ದು, ಶಿಸ್ತು ಶಬ್ದದ ಹಿಂದೆ ‘ಅ’ ಹಾಕಿಕೊಳ್ಳುವ ಕಾಲ ಬಂದಿದೆ ಎಂದು ಪಕ್ಷದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.
ಶಿರಸಿ (ಸೆ.03): ಬಿಜೆಪಿ ಶಿಸ್ತಿನ ಪಕ್ಷ ಎಂಬುದನ್ನು ಈಗ ಕಳೆದುಕೊಂಡಿದ್ದು, ಶಿಸ್ತು ಶಬ್ದದ ಹಿಂದೆ ‘ಅ’ ಹಾಕಿಕೊಳ್ಳುವ ಕಾಲ ಬಂದಿದೆ ಎಂದು ಪಕ್ಷದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ‘ಬಿಜೆಪಿಯಲ್ಲಿ ಶಿಸ್ತು ಕಳೆದುಹೋಗಿದ್ದು, ಪಕ್ಷದ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಅವರು ಮಾಜಿ ಸಿಎಂ ಯಡಿಯೂರಪ್ಪ ಮತ್ತು ಅವರ ಮಕ್ಕಳ ಬಗ್ಗೆ ವಿಧಾನಸೌಧದ ಒಳಗೆ ಮತ್ತು ಹೊರಗೆ ಏನೆಲ್ಲ ಮಾತನಾಡಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ಅವರ ವಿರುದ್ಧ ಏನು ಕ್ರಮ ಕೈಗೊಂಡಿದ್ದಾರೆ?’ ಎಂದು ಪ್ರಶ್ನಿಸಿದರು. ರಾಮಕೃಷ್ಣ ಹೆಗಡೆ ನಂತರ ಉತ್ತರ ಕನ್ನಡ ಜಿಲ್ಲೆಗೆ ಮತ್ತೆ ಮುಖ್ಯಮಂತ್ರಿ ಸ್ಥಾನ ಬರುತ್ತದೆ ಎಂದರೆ ಸಂತೋಷ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಸಿಎಂ ಆಗುವ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದರು.
ಬಡರೋಗಿಗಳಿಗೆ ತೊಂದರೆ ಕೊಡಬೇಡಿ: ಡೆಂಘೀ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆ ಸಂಜೆ ಶಾಸಕ ಶಿವರಾಮ ಹೆಬ್ಬಾರ ಅವರು ಗುರುವಾರ ಸಂಜೆ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಚಿಕಿತ್ಸಾ ಕ್ರಮ ಕೈಗೊಳ್ಳುವಂತೆ ವೈದ್ಯರಿಗೆ ಸೂಚಿಸಿದರು. ಈ ವೇಳೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲ ಬಡವರೇ ಹೊರತು ಶ್ರೀಮಂತರಲ್ಲ. ರೋಗಿಗಳು ಯಾವುದೇ ಕಾಯಿಲೆ ಎಂದು ಬಂದರೂ ಎಲ್ಲದಕ್ಕೂ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸುವುದಾದರೆ ನಿಮ್ಮ ಅವಶ್ಯಕತೆ ಏನಿದೆ ಎಂದು ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ಮನಸ್ಸಿನಿಂದ ಬಡ ರೋಗಿಗಳ ಚಿಕಿತ್ಸೆ ಮಾಡುವುದಾದರೆ ಉಳಿಯಿರಿ.
ಸೆ.22ಕ್ಕೆ ಎಸ್‌ಐ ಪರೀಕ್ಷೆ: ಕುರ್ತಾ, ಪೈಜಾಮಾ, ಜೀನ್ಸ್ ನಿಷಿದ್ಧ: 402 ಹುದ್ದೆಗಳಿಗೆ 66000 ಅಭ್ಯರ್ಥಿಗಳು
ಇಲ್ಲದಿದ್ದರೆ ಇಲ್ಲಿಂದ ಹೊರಟು ಹೋಗಿ. ಸುಮ್ಮನೆ ಇಲ್ಲಿದ್ದುಕೊಂಡು ಬಡವರಿಗೆ ತೊಂದರೆ ನೀಡಿದರೆ ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ವೈದ್ಯರಿಂದ ಏನನ್ನೂ ನಿರೀಕ್ಷೆ ಮಾಡುವುದಿಲ್ಲ. ಕೇವಲ ಬಡವರಿಗೆ ಉತ್ತಮ ಚಿಕಿತ್ಸೆ ನೀಡಿದರೆ ಸಾಕು. ಭಗವಂತ ನಿಮಗೆಲ್ಲ ಒಳ್ಳೆಯ ಉದ್ಯೋಗ ನೀಡಿ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾನೆ. ರೋಗಿಗಳ ಸೇವೆ ಮಾಡುವುದಾಗಿಯೇ ಡಾಕ್ಟರ್ ಆಗಿ ಬಂದಿದ್ದೀರಿ. ನಿಮಗೇನಾದರೂ ತೊಂದರೆ ಇದ್ದರೆ ಹೇಳಿ ಪರಿಹರಿಸೋಣ. ಅದು ಬಿಟ್ಟು ಬಡ ರೋಗಿಗಳಿಗೆ ತೊಂದರೆ ನೀಡಬಾರದು ಎಂದರು. ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ಟಿ.ವೈ. ದಾಸನಕೊಪ್ಪ, ಆಡಳಿತ ವೈದ್ಯಾಧಿಕಾರಿ ಮತ್ತು ಮುಂತಾದವರು ಉಪಸ್ಥಿತರಿದ್ದರು.