ರಾಜ್ಯದ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಿಂದ ಹಿಡಿದು ಬೀದರ್‌ ಜಿಲ್ಲೆಯ ಔರಾದ್‌ವರೆಗೆ ಎಲ್ಲಾ ನೀರಾವರಿ ಯೋಜನೆಗಳನ್ನು ಯಾವುದೇ ತಾರತಮ್ಯ ಮಾಡದೆ ಅನುದಾನದ ಮಿತಿಯಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ವಿಧಾನಸಭೆ (ಮಾ.29): ರಾಜ್ಯದ (Karnataka) ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಿಂದ ಹಿಡಿದು ಬೀದರ್‌ ಜಿಲ್ಲೆಯ ಔರಾದ್‌ವರೆಗೆ ಎಲ್ಲಾ ನೀರಾವರಿ ಯೋಜನೆಗಳನ್ನು (Irrigation Project) ಯಾವುದೇ ತಾರತಮ್ಯ ಮಾಡದೆ ಅನುದಾನದ ಮಿತಿಯಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ (Govinda Karajola) ತಿಳಿಸಿದ್ದಾರೆ. ಸೋಮವಾರ ಇಲಾಖಾವಾರು ಅನುದಾನ ಬೇಡಿಕೆಗಳ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ ಬಿಜೆಪಿ (BJP) ಸರ್ಕಾರವು ಮೊದಲ ಆದ್ಯತೆ ನೀಡಿದೆ. ಹಲವು ವರ್ಷಗಳಿಂದ ಯೋಜನೆ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ.

ಯೋಜನೆ ಸಂಬಂಧ ನೀಡಬೇಕಾದ ಪರಿಹಾರ ಸೇರಿದಂತೆ ಇತರೆ ಸಮಸ್ಯೆಗಳ ಕುರಿತು ಕಂದಾಯ ಸಚಿವರ ಜತೆಗೆ ಏ.4ರಂದು ಸಭೆ ನಿಗದಿ ಮಾಡುವ ಯೋಚನೆ ಇದೆ. ಕಂದಾಯ ಸಚಿವರಿಗೆ ಪತ್ರ ಬರೆದು ದಿನಾಂಕವನ್ನು ಅಂತಿಮಗೊಳಿಸಲಾಗುವುದು. ಅಲ್ಲದೇ, ಕೃಷ್ಣಾ ಮೇಲ್ದಂಡೆಯನ್ನು ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಸಂಬಂಧ ಆ ಭಾಗದ ಸದಸ್ಯರ ಜತೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು. ಮೇಕೆದಾಟು, ಮಹಾದಾಯಿ, ಎತ್ತಿನಹೊಳೆ ಸೇರಿದಂತೆ ರಾಜ್ಯದಲ್ಲಿನ ಎಲ್ಲಾ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದೇ ಸರ್ಕಾರದ ಗುರಿಯಾಗಿದೆ. ಯಾವುದೇ ನೀರಾವರಿ ಯೋಜನೆಗಳಿಗೂ ತಾರತಮ್ಯ ಮಾಡುವುದಿಲ್ಲ ಎಂದು ಹೇಳಿದರು.

Karnataka Politics: ಕಾಂಗ್ರೆಸ್‌ನವರು ವಚನ ಭ್ರಷ್ಟರು: ಸಚಿವ ಹಾಲಪ್ಪ ಆಚಾರ್‌

ಸಮಗ್ರ ಕರ್ನಾಟಕ ಅಭಿವೃದ್ಧಿಯ ಉದ್ದೇಶವನ್ನು ಹೊಂದು ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದ ಅವರು, ಬಾಕಿ ಬಿಲ್‌ ಮೊತ್ತವನ್ನು ಕಡಿಮೆ ಮಾಡುವಲ್ಲಿ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ. ಏಳು ಸಾವಿರ ಕೋಟಿ ರು.ಗೆ ತರುವ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದರು. ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದಲ್ಲಿ ಮುಳುಗಡೆಯಾಗುವ ಹಳ್ಳಿಗರಿಗೆ ಪರಿಹಾರ ನೀಡುವಲ್ಲಿ ಬಬಲೇಶ್ವರ ತಾಲೂಕಿನವರಿಗೆ ಮಾರ್ಗಸೂಚಿ ದರ ನಿಗದಿ ಮಾಡಲು ಸಾಧ್ಯವಾಗಿಲ್ಲ. ಬೀಳಗಿ, ಮುಧೋಳ ಸೇರಿದಂತೆ ಇತರೆ ಪ್ರದೇಶಗಳ ಜನರಿಗೆ ಪರಿಹಾರ ಮಾರ್ಗಸೂಚಿ ದರ ನಿಗದಿಯಾಗಿದೆ. ಆದರೆ, ಬಬಲೇಶ್ವರ ತಾಲೂಕಿಗೆ ಮಾರ್ಗಸೂಚಿ ದರ ನಿಗದಿಯಾಗದ ಕಾರಣ 14 ಹಳ್ಳಿಗಳಿಗೆ ಸಮಸ್ಯೆಯಾಗಿದೆ. ಈ ಸಂಬಂಧ ಕಂದಾಯ ಸಚಿವರ ಜತೆ ಚರ್ಚಿಸಲಾಗುವುದು ಎಂದು ಇದೇ ವೇಳೆ ಹೇಳಿದರು.

ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮುಚ್ಚುವ ಪ್ರಶ್ನೇಯೇ ಇಲ್ಲ: ವಿಜಯಪುರದಲ್ಲಿ ಕಳೆದ 2 ದಶಕಗಳಿಂದ ನಾಡು ಹೆಮ್ಮೆ ಪಡುವಂತಹ ಕೆಲಸ ಮಾಡುತ್ತಿರುವ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯವನ್ನು ಈಗ ಏಕಾಏಕಿಯಾಗಿ ಕೊನೆಗಾಣಿಸುವ ಸಂಚು ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ಅಕ್ಕಮಹಾದೇವಿ ಮಹಿಳಾ ವಿ.ವಿ. ಮುಚ್ಚುವ ಪ್ರಶ್ನೇಯೇ ಇಲ್ಲ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ ಹೇಳಿಕೆ ನೀಡಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗುವಂತೆ ಆ ಭಾಗದ ಹೆಣ್ಣುಮಕ್ಕಳು ಹೆಚ್ಚು, ಹೆಚ್ಚು ವಿದ್ಯಾವಂತರಾಗುವಂತೆ ಶೈಕ್ಷಣಿಕ ವ್ಯವಸ್ಥೆಯನ್ನು ಉನ್ನತೀಕರಿಸಲು ತನ್ಮೂಲಕ ಸುಸಂಸ್ಕೃತ, ಸುಶಿಕ್ಷಿತ ಸಮಾಜವನ್ನು ನಿರ್ಮಿಸಿ ಸ್ವಾವಲಂಬಿ ಮಹಿಳೆಯರನ್ನು ಉತ್ತೇಜಿಸುವ ಉದಾತ್ತ ಉದ್ದೇಶದಿಂದ ಪ್ರಾರಂಭವಾದ ವಿಜಯಪುರದ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. 

Irrigation Project: 'ಕೊಪ್ಪಳ ಏತ ನೀರಾವರಿ ಯೋಜನೆ ಸಿದ್ದರಾಮಯ್ಯ ಕೊಡುಗೆ'

ವಿಶ್ವ ವಿದ್ಯಾಲಯದ ಅಭಿವೃದ್ಧಿಗೆ ಆ ಭಾಗದ ಜನಪ್ರತಿನಿಧಿಯಾಗಿ ಮತ್ತು ಜನಸಮುದಾಯದ ಆಶೋತ್ತರಗಳನ್ನು ಈಡೇರಿಸುವ ಮತ್ತು ಜನರ ಅಪೇಕ್ಷೆ, ನಿರೀಕ್ಷೆಗಳಿಗೆ ತಕ್ಕಂತೆ ಕಾರ್ಯ ನಿರ್ವಹಿಸುವ ಅಳಿಲುಸೇವೆಯ ಮೂಲಕ ವಿಶ್ವ ವಿದ್ಯಾಲಯದ ಅಭಿವೃದ್ಧಿಗೆ ಕೊಡುಗೆ ನೀಡುವ ಸೌಭಾಗ್ಯವು ನನ್ನದಾಗಿದೆ ಎಂದಿದ್ದಾರೆ. ಈ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಕೇವಲ ಒಂದೇ ಜಿಲ್ಲೆ ಅಲ್ಲ. ಹದಿಮೂರು ಜಿಲ್ಲೆಗಳು ಈ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿವೆ. ಈ ಮಹಿಳಾ ವಿಶ್ವ ವಿದ್ಯಾಲಯವನ್ನು ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ ಎಂದು ಪುನರ್ ನಾಮಕರಣ ಮಾಡಿ ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದ ಅಕ್ಕಮಹಾದೇವಿಯವರಿಗೆ ಗೌರವ ಸಲ್ಲಿಸಿದ ಕೀರ್ತಿ ಭಾರತೀಯ ಜನತಾ ಪಕ್ಷದ ಸರ್ಕಾರಕ್ಕೆ ಸಲ್ಲುತ್ತದೆ.