ಸರ್ಕಾರದಲ್ಲಿ ಯಾವುದೇ ಭಿನ್ನಮತ ಇಲ್ಲ: ಸಚಿವ ಶರಣ ಪ್ರಕಾಶ ಪಾಟೀಲ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವರ ಉಪಹಾರದ ಸಭೆಗೆ ನನಗೆ ಆಹ್ವಾನ ಇರಲಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. 

There is no dissent in the Government Says Minister Sharan Prakash Patil gvd

ಬೆಳಗಾವಿ (ನ.05): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವರ ಉಪಹಾರದ ಸಭೆಗೆ ನನಗೆ ಆಹ್ವಾನ ಇರಲಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಅಧಿಕೃತವಾಗಿ ನನಗೆ ಆಹ್ವಾನ ಇರಲಿಲ್ಲ. ಅಲ್ಲದೆ ನನಗೆ ಹುಷಾರಿರಲಿಲ್ಲ ಎಂದು ತಿಳಿಸಿದರು. ಹೈಕಮಾಂಡ್ ಅವಕಾಶ ಕೊಟ್ಟರೇ ನಾನೂ ಸಿಎಂ ಆಗುತ್ತೇನೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರಿಯಾಂಕ ಖರ್ಗೆ ಹೇಳಿಕೆಯನ್ನು ನೀವೇ ಅಪಾರ್ಥ ಮಾಡಿಕೊಂಡಿದ್ದೀರಿ. 

ಅವರಾಗಿಯೇ‌ ಮಾಧ್ಯಮಗಳ ಎದುರು ಬಂದು ಸಿಎಂ ಆಗುತ್ತೇನೆ ಎಂದಿಲ್ಲ. ಮಾಧ್ಯಮದವರು ಪದೇ ಪದೆ ಪ್ರಶ್ನಿಸಿದಾಗ ಅವಕಾಶ ಸಿಕ್ಕರೇ ಸಿಎಂ ಆಗುತ್ತೇನೆ ಎಂದಿದ್ದಾರಷ್ಟೆ. ಸರ್ಕಾರದಲ್ಲಿ ಯಾವುದೇ ಭಿನ್ನಮತ ಇಲ್ಲ. ಎಲ್ಲ ನಾಯಕರು ಒಗ್ಗಟ್ಟಾಗಿದ್ದೇವೆ. ಶಾಸಕರಲ್ಲಿ ಅಸಮಾಧಾನ, ಭಿನ್ನಮತ ಇಲ್ಲ. ಈ ರಾಜ್ಯದ ಅಭಿವೃದ್ಧಿಯೇ ನಮ್ಮ ಪಕ್ಷದ ಧ್ಯೇಯ, ಧೋರಣೆ ಎಂದರು. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ವಿಚಾರಕ್ಕೆ ಉತ್ತರಿಸಿದ ಅವರು, ಈ ಪ್ರಶ್ನೆಯನ್ನು ನನ್ನನ್ನ ಕೇಳಲೆಬಾರದು. ಸಾರ್ವಜನಿಕ ಹಿತಾಸಕ್ತಿ ಪ್ರಶ್ನೆಗಳಿಗೆ ಮಾತ್ರ ನಾನು ಉತ್ತರಿಸುವೆ. ಇಂಥ ಪ್ರಶ್ನೆಗಳಿಗೆ ಉತ್ತರಿಸುವ ವ್ಯಕ್ತಿತ್ವ ನನ್ನದಲ್ಲ ಎಂದರು.

ಯತ್ನಾಳ ನಾನು ಜಗಳವಾಡಿಲ್ಲ, ಚೆನ್ನಾಗಿದ್ದೇವೆ: ಸಂಸದ ರಮೇಶ ಜಿಗಜಿಣಗಿ

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಮೇಳ ಆಯೋಜಿಸಲು ಸೂಚನೆ: ದ್ಯಾರ್ಥಿಗಳು ಕೋರ್ಸ್ ಹಾಗೂ ತರಬೇತಿ ಪೂರ್ಣಗೊಳಿಸಿದ ಬಳಿಕ ಉದ್ಯೋಗ ಸಿಗುವಂತೆ ಉದ್ಯೋಗ ಮೇಳಗಳನ್ನು ಆಯೋಜಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಬೆಳಗಾವಿ ಜಿಲ್ಲೆಯ ಕೌಶಲ್ಯಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೌಶಲ್ಯಾಭಿವೃದ್ದಿ ತರಬೇತಿ ನೀಡುವುದರ ಜೊತೆಗೆ ಉದ್ಯೋಗ ಸಿಗುವಂತೆ ಕ್ಯಾಂಪಸ್ ಸಂದರ್ಶನಗಳನ್ನು ಸಹ ನಡೆಸಬೇಕು. ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು.ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗಳನ್ನು ಗ್ರಾಮೀಣ ಮಟ್ಟದಲ್ಲಿ ಹೆಚ್ಚಾಗಿ ತಲುಪಿಸುವ ಅಗತ್ಯವಿದೆ. ಗ್ರಾಮ ಪಂಚಾಯತಿಗಳಲ್ಲಿ ಗುರಿ ನಿಗದಿಪಡಿಸಿ ಯೋಜನಾ ಅನುಷ್ಟಾನಕ್ಕೆ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಸೂಚಿಸಬೇಕು. 

ಐಟಿಐ, ಜಿಟಿಟಿಸಿ ಗಳಲ್ಲಿ ಹೆಚ್ಚಿನ ವೃತ್ತಿಪರ ಕೋರ್ಸುಗಳ ಪ್ರಾರಂಭಕ್ಕೆ ಒತ್ತು ನೀಡಬೇಕು. ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಗುಣಮಟ್ಟದ ವೃತ್ತಿ ತರಬೇತಿ ನೀಡಬೇಕು ಎಂದು ಹೇಳಿದರು. ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಿಗೆ ಹೋಲಿಸಿದರೆ ಐಟಿಐ ಕೋರ್ಸ್ ಗಳಿಗೆ ಉದ್ಯೋಗಾವಕಾಶ ಬಹಳಷ್ಟಿವೆ. ವೃತ್ತಿ ತರಬೇತಿ ಕೋರ್ಸ್ ಗಳಿಗೆ ಹೆಚ್ಚಿನ ಸಂಖ್ಯೆಲ್ಲಿ ವಿಧ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ. ಜಿಟಿಟಿಸಿ ಗಳಲ್ಲಿ ವಿವಿಧ ಕೋರ್ಸ್ ಗಳನ್ನು ಈಗಾಗಲೇ ಪ್ರಾರಂಭ ಮಾಡಲಾಗಿದೆ. ಡಿಪ್ಲೋಮಾ ಇನ್ ರೊಬೋಟಿಕ್ಸ್ ಅತೀ ಮಹತ್ವದ ಕೋರ್ಸ್ ಸೇರಿದಂತೆ ಸುಮಾರು 28 ವಿವಿಧ ಕೋರ್ಸುಗಳು ಪ್ರಾರಂಭಿಸಲಾಗಿದೆ ಎಂದು ಜಿಟಿಟಿಸಿ ಪ್ರಾಂಶುಪಾಲ ಪ್ರೊ.ಮೊಗೇರ ಅವರು ತಿಳಿಸಿದರು.

ಬರದ ವಿಷಯದಲ್ಲಿ ಕೇಂದ್ರ ಸರ್ಕಾರ ರಾಜಕಾರಣ ಮಾಡಿಲ್ಲ: ನಳಿನ್‌ ಕುಮಾರ ಕಟೀಲ್

ವರ್ಷಕ್ಕೆ ಸುಮಾರು 1 ಸಾವಿರ ವಿದ್ಯಾರ್ಥಿಗಳಿಗೆ ಮೇಲ್ಪಟ್ಟು ತರಬೇತಿ ನೀಡಲಾಗುತ್ತಿದೆ. ರೊಬೋಟಿಕ್ಸ್ ಕೋರ್ಸ್ ಪೂರ್ಣಗೊಳಿಸಿದ ಅನೇಕ ವಿಧ್ಯಾರ್ಥಿಗಳು ಸ್ವಯಂ ಉದ್ಯೋಗ ಕೈಗೊಂಡು, ವಿವಿಧ ಕಂಪನಿಗಳಲ್ಲಿ ಉದ್ಯೋಗ ದೊರೆತಿವೆ. ಎಸ್.ಸಿ.ಪಿ- ಟಿ.ಎಸ್.ಪಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಟೂಲ್ಸ್ ಕಿಟ್, ಸ್ಟೈಫಂಡ್ ಕೂಡ ನೀಡಲಾಗುತ್ತಿದೆ. ಎಂದು ಜಿಟಿಟಿಸಿ ಪ್ರಾಂಶುಪಾಲರು ವಿವರಿಸಿದರು.

Latest Videos
Follow Us:
Download App:
  • android
  • ios