ಮೈಸೂರಿನ ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ರೆ ತಪ್ಪಿಲ್ಲ: ಶಾಸಕ ಜಿ.ಟಿ.ದೇವೇಗೌಡ
ಮೈಸೂರಿನ ಕೆಆರ್‌ಎಸ್ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.
ಮೈಸೂರು (ಡಿ.29): ಮೈಸೂರಿನ ಕೆಆರ್‌ಎಸ್ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದರು ಆ ರಸ್ತೆಗೆ ಪ್ರಿನ್ಸೆಸ್ ರಸ್ತೆ ಎಂದು ನಾಮಕರಣ ಮಾಡಲಾಗಿದೆ ಎಂದಿದ್ದಾರೆ.
ಆ ರಸ್ತೆಗೆ ಹೆಸರು ನಾಮಕರಣ ಮಾಡಿಲ್ಲ ಎನ್ನುವುದಾದರೆ ಸಿದ್ದರಾಮಯ್ಯ ಅವರ ಹೆಸರು ಇಟ್ಟರೆ ತಪ್ಪೇನಿಲ್ಲ. ಆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದರು. ಸಂಸದರು ಆ ರಸ್ತೆಗೆ ಪ್ರಿನ್ಸೆಸ್ ರಸ್ತೆ ಎಂದು ಹೆಸರಿಡಲಾಗಿದೆ ಎನ್ನುತ್ತಾರೆ. ಆದರೆ, ಮತ್ತೆ ಕೆಲವರು ಆ ರಸ್ತೆಗೆ ಯಾವ ಹೆಸರನ್ನೂ ಇಟ್ಟಿಲ್ಲ ಎನ್ನುತ್ತಾರೆ. ಒಂದು ವೇಳೆ ಹೆಸರಿಟ್ಟಲ್ಲದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಟ್ಟರೆ ತಪ್ಪಿಲ್ಲ ಎಂದು ಹೇಳಿದರು.
ಅಕ್ರಮ ಹಣ ವರ್ಗಾವಣೆ ಪ್ರಕರಣ: ತೆಲಂಗಾಣ ಮಾಜಿ ಸಿಎಂ ಪುತ್ರ ರಾಮ್‌ರಾವ್‌ಗೆ ಇ.ಡಿ. ಸಮನ್ಸ್
ಜಿಟಿಡಿ ಸೇರಿದಂತೆ ಹಲವರ ಸಂತಾಪ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಶಾಸಕ ಜಿ.ಟಿ. ದೇವೇಗೌಡ, ರೈತ ಮುಖಂಡ ಕುರುಬೂರು ಶಾಂತಕುಮಾರ್, ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣಗೌಡ ಸಂತಾಪ ಸೂಚಿಸಿದ್ದಾರೆ. ಮಾಜಿ ಪ್ರಧಾನಿ ಹಾಗೂ ಭಾರತ ದೇಶ ಕಂಡ ಪ್ರಮುಖ ಆರ್ಥಿಕ ತಜ್ಞರಾದ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ ಹಾಗೂ ದೇಶಕ್ಕೆ ತುಂಬಲಾರದ ನಷ್ಟ ಉಂಟುಮಾಡಿದೆ. ಡಾ. ಮನಮೋಹನ್ ಸಿಂಗ್ ಅವರು ಅಂತಾರಾಷ್ಟ್ರೀಯ ಮೇಲ್ವಿಚಾರಣಾ ನಿಧಿ ಸಲಹೆಗಾರರಾಗಿ ಯಶಸ್ವಿಯಾಗಿ ಕಾರ್ಯನಿರ್ವಸಿ ಭಾರತ ದೇಶಕ್ಕೆ ಕೀರ್ತಿ ತಂದಿದ್ದರು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ.
ಭಾರತ ದೇಶದ ಸರ್ವತೋಮುಖ ಅಭಿವೃದ್ಧಿಗೆ ಕಾರಣಿಭೂತರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಮೌನ ಕ್ರಾಂತಿಯ ಮೂಲಕ ಆರ್ಥಿಕ ತಜ್ಞರಾಗಿ ಆಡಳಿತ ನಡೆಸಿರುವುದು ವಿಶ್ವಕ್ಕೆ ಮಾದರಿ. ಅವರ ಬದುಕು, ಸೇವೆ ಮತ್ತು ಆಡಳಿತ ಇವುಗಳು ಇಂದಿನ ಪ್ರಜಾಪ್ರಭುತ್ವ ಸರ್ಕಾರಗಳಿಗೆ ಮಾದರಿಯಾಗಿದೆ. ಇಂದಿನ ಸರ್ಕಾರಗಳು ಅವರ ಮಾರ್ಗದರ್ಶನ, ಜಾರಿಗೆ ತಂದಿರುವ ಯೋಜನೆ, ಕಾರ್ಯಕ್ರಮಗಳನ್ನು ಮುಂದುವರೆಸುವ ಮೂಲಕ ಅವರ ಹೆಸರು ಅಜರಾಮರವಾಗಿ, ಶಾಶ್ವತವಾಗಿ ಉಳಿಯುವಂತೆ ಮಾಡಲಿ ಎಂದು ಅವರು ಆಶಿಸಿದ್ದಾರೆ.
ಮನಮೋಹನ್ ಸಿಂಗ್ ಅಂತ್ಯಸಂಸ್ಕಾರದ ಸ್ಥಳ ಮತ್ತು ಸ್ಮಾರಕ ನಿರ್ಮಾಣ ವಿಷಯ: ಕಾಂಗ್ರೆಸ್-ಬಿಜೆಪಿ ಜಟಾಪಟಿ
ಡಾ. ಮನಮೋಹನ್ ಸಿಂಗ್ ಅವರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ. ಅವರ ಕುಟುಂಬ ವರ್ಗದವರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ದೇಶದ ಪ್ರಧಾನಿಯಾಗಿ ಸುದೀರ್ಘ ಅವಧಿ ಕಾರ್ಯನಿರ್ವಹಿಸಿ. ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಪ್ರಖ್ಯಾತಿಯಾಗಿದ್ದ ಡಾ. ಮನಮೋಹನ್ ಸಿಂಗ್ ಅವರ ಸಾವಿಗೆ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಕುಟುಂಬ ವರ್ಗಕ್ಕೆ ಸಾವಿನ ದುಃಖ ಭರಿಸುವ ಶಕ್ತಿ ಬರಲಿ ಎಂದು ಕೋರುವುದಾಗಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.