ನನ್ನ ರಕ್ತದ ಕಣ ಕಣದಲ್ಲೂ ಕೇಸರಿ ಇದೆ: ಕೆ.ಎಸ್.ಈಶ್ವರಪ್ಪ
ನನ್ನ ರಕ್ತದ ಕಣಕಣದಲ್ಲಿಯೂ ಮೋದಿಜಿ, ಬಿಜೆಪಿಯ ಹಿಂದುತ್ವ, ಕೇಸರಿ ಇದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಇಲ್ಲಿನ ಗುಳುಗುಳಿ ಶಂಕರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಶಂಕೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ ನಂತರ ಅಭಿಮಾನಿಗಳ ಭೇಟಿಯಾಗಿ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ರಿಪ್ಪನ್‍ಪೇಟೆ (ಮಾ.25): ನನ್ನ ರಕ್ತದ ಕಣಕಣದಲ್ಲಿಯೂ ಮೋದಿಜಿ, ಬಿಜೆಪಿಯ ಹಿಂದುತ್ವ, ಕೇಸರಿ ಇದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಇಲ್ಲಿನ ಗುಳುಗುಳಿ ಶಂಕರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಶಂಕೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ ನಂತರ ಅಭಿಮಾನಿಗಳ ಭೇಟಿಯಾಗಿ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಕ್ಕಾಗಿ ಬಿಜೆಪಿ ತೊರೆದು ಹೋದ ವ್ಯಕ್ತಿ. ಆದರೆ ನನಗೆ ಪಕ್ಷವೇ ಹೆತ್ತ ತಾಯಿ. ನಾನು ಪಕ್ಷ ತೊರೆಯುವುದಿಲ್ಲ ಎಂದು ಹೇಳಿದರು.
ಅಯನೂರು ಮಂಜುನಾಥ ಮತ್ತು ಆರ್.ಕೆ.ಸಿದ್ದರಾಮಣ್ಣನವರ ಚಿಲ್ಲರೆ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ. ನಾನು ಪಕ್ಷದಲ್ಲಿ ಹಿರಿಯ ರಾಜಕಾರಣಿಯಾಗಿದ್ದು ಕೆಳಹಂತದ ಎಲ್ಲ ಕಾರ್ಯಕರ್ತರ ಸಂಪರ್ಕ ಇದೆ. ಈಗಾಗಲೇ ಆಂತರಿಕವಾಗಿ ಹಲವರು ನನಗೆ ಬೆಂಬಲಿಸುತ್ತಿದ್ದು ಚುನಾವಣಾ ಪ್ರಕ್ರಿಯೆ ನಂತರದಲ್ಲಿ ಬಹಿರಂಗವಾಗಿ ಬಿಜೆಪಿಯಿಂದ ಬಂಡೆದ್ದು ನನ್ನೊಂದಿಗೆ ಸೇರ್ಪಡೆಗೊಳ್ಳಲಿದ್ದಾರೆಂದರು.
10 ವರ್ಷದ ಅಭಿವೃದ್ಧಿಯಿಂದ ಮತ್ತೆ ಬರಲಿದೆ ಮೋದಿ ಸರ್ಕಾರ: ತೇಜಸ್ವಿ ಸೂರ್ಯ
ಶೀಘ್ರದಲ್ಲಿಯೇ ಕಾರ್ಯಕರ್ತರ ನೇರ ಸಂಪರ್ಕಕ್ಕೆ ಅನುಕೂಲವಾಗುವಂತೆ ಚುನಾವಣಾ ಪ್ರಚಾರ ಕಚೇರಿ ರಿಪ್ಪನ್‍ಪೇಟೆಯಲ್ಲಿ ಪ್ರಾರಂಭಿಸಲಾಗುವುದೆಂದು ತಿಳಿಸಿದರು. ಈ ಸಂದರ್ಭದಲ್ಲಿ ಹಿರಿಯ ಬಿಜೆಪಿ ಜಿಲ್ಲಾ ಮುಖಂಡರಾದ ಆರ್.ಟಿ. ಗೋಪಾಲ, ನರಸಿಂಹ, ತರಕಾರಿ ಯೋಗೇಂದ್ರ ಗೌಡ, ಎಲ್. ನಿರೂಪ್‌ಕುಮಾರ್. ಪವನ್ ಶೆಟ್ಟಿ, ಕೆ. ಗಣೇಶ್‍ಪ್ರಸಾದ್ ಇನ್ನಿತರ ಮುಖಂಡರಿದ್ದರು.
ಕಾಂಗ್ರೆಸ್ ಸಂಸ್ಕೃತಿ ರಾಜ್ಯ ಬಿಜೆಪಿಗೂ ಬಂದಿದೆ: ಕಾಂಗ್ರೆಸ್ ಪಕ್ಷದ ಸಂಸ್ಕೃತಿ ರಾಜ್ಯದಲ್ಲಿ ಬಿಜೆಪಿಗೂ ಬಂದಿದೆ. ಯಾರ‍್ಯಾರೋ ಪಕ್ಷದ ಟಿಕೆಟ್ ತೆಗೆದುಕೊಂಡು ಬರುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿ, ಮೋದಿಯವರು ಕುಟುಂಬ ರಾಜಕಾರಣದ ವಿರುದ್ಧ ಇದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಹಾಗೂ ಜಗದೀಶ್ ಶೆಟ್ಟರ್ ಅವರಿಗೆ ಚುನಾವಣೆಗೆ ಸ್ಪರ್ಧಿಸಬೇಡಿ ಅಂದರು. ಅದಕ್ಕೊಪ್ಪಿ ಸ್ಪರ್ಧೆಯಿಂದ ಹಿಂದೆ ಸರಿದೆ.
ಆದರೆ, ಯಡಿಯೂರಪ್ಪ ಕುಟುಂಬದಲ್ಲಿ ಒಬ್ಬ ಸಂಸದ ಇದ್ದಾಗ್ಯೂ ಅವರ ಮತ್ತೊಬ್ಬ ಮಗನಿಗೆ ಶಾಸಕ ಸ್ಥಾನ ಕೊಡಿಸಿದರು. ಇದಾದ ಬಳಿಕ ರಾಜ್ಯಾಧ್ಯಕ್ಷ ಸ್ಥಾನ ಕೊಡಿಸಿದರು ಎಂದರು. ಈ ಹಿಂದೆ ಪಕ್ಷ ಏನೇ ತೀರ್ಮಾನ ಮಾಡುವುದಾದರೂ ಕೋರ್ ಕಮಿಟಿ ಸಭೆ ಮಾಡುತ್ತಿದ್ದೆವು. ರಾಜ್ಯ ಸಮಿತಿ ಕೊಟ್ಟ ಪಟ್ಟಿಗೆ ಕೇಂದ್ರ ಸಮಿತಿ ಸಹಿ ಮಾಡುತ್ತಿತ್ತು. ಈಗ ಆ ಸಂಸ್ಕೃತಿ ಇಲ್ಲದಂತೆ ಯಡಿಯೂರಪ್ಪ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬನ್ನೇರುಘಟ್ಟದಲ್ಲಿ ವಿಶ್ವ ಕರಡಿ ದಿನಾಚರಣೆ: ವಿಶೇಷ ಆಹಾರ ನೀಡಿ ಸಂಭ್ರಮಿಸಿದ ಪ್ರವಾಸಿಗರು!
ಟಿಕೆಟ್ ತೀರ್ಮಾನ ಆಗುವ ಮುನ್ನವೇ ಯಡಿಯೂರಪ್ಪ ಚಿಕ್ಕಮಗಳೂರಿಗೆ ಹೋದಾಗ ಶೋಭಾರನ್ನು ನಿಲ್ಲಿಸುತ್ತೇವೆ, ಗೆಲ್ಲಿಸಬೇಕು ಅಂದರು. ಚಿಕ್ಕಮಗಳೂರಿನಲ್ಲಿ ಕಾರ್ಯಕರ್ತರು ಗೋಬ್ಯಾಕ್ ಶೋಭಾ ಎಂದಿದ್ದಕ್ಕೆ ಬೇರೆ ಕ್ಷೇತ್ರದಲ್ಲಿ ಅವರಿಗೆ ಟಿಕೆಟ್ ಕೊಡಿಸಿದರು. ಆದರೆ ಪ್ರತಾಪ್ ಸಿಂಹ, ಸಿ.ಟಿ.ರವಿಗೆ ಯಾಕೆ ಬೇರೆ ಕ್ಷೇತ್ರ ಕೊಡಿಸಲಿಲ್ಲ?. ಕೋರ್ ಕಮಿಟಿಯ 114 ಮಂದಿಯಲ್ಲಿ 84 ಮಂದಿ ಪ್ರತಾಪ್‌ಗೆ ಟಿಕೆಟ್ ನೀಡಬೇಕು ಎಂದರೂ ತಪ್ಪಿಸಲಾಯಿತು ಎಂದು ಆರೋಪಿಸಿದರು.