ಪಂಚರಾಜ್ಯಗಳ ಶಾಸಕರ ರಕ್ಷಿಸಿ ಇಡುವಂತಹ ಸ್ಥಿತಿ ಬರಲ್ಲ: ಡಿಕೆಶಿ
ಪಂಚರಾಜ್ಯಗಳ ಚುನಾವಣೆಯಲ್ಲಿ ನನ್ನ ಪ್ರಕಾರ ರಾಜಸ್ಥಾನ, ತೆಲಂಗಾಣ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಹೀಗಾಗಿ ಅತಂತ್ರ ವಿಧಾನಸಭೆ ಸೃಷ್ಟಿಯಾಗುವ, ಶಾಸಕರನ್ನು ರಕ್ಷಿಸಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗುವುದಿಲ್ಲ.
ಬೆಂಗಳೂರು (ಡಿ.02): ‘ಪಂಚರಾಜ್ಯಗಳ ಚುನಾವಣೆಯಲ್ಲಿ ನನ್ನ ಪ್ರಕಾರ ರಾಜಸ್ಥಾನ, ತೆಲಂಗಾಣ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಹೀಗಾಗಿ ಅತಂತ್ರ ವಿಧಾನಸಭೆ ಸೃಷ್ಟಿಯಾಗುವ, ಶಾಸಕರನ್ನು ರಕ್ಷಿಸಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗುವುದಿಲ್ಲ. ಒಂದು ವೇಳೆ ಅಂತಹ ಪರಿಸ್ಥಿತಿ ಉಂಟಾದರೆ ಪಕ್ಷ ಸೂಚಿಸಿದ ಕೆಲಸ ಮಾಡುತ್ತೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅತಂತ್ರ ವಿಧಾನಸಭೆ ಉಂಟಾಗುವ ರಾಜ್ಯಗಳಲ್ಲಿನ ಕಾಂಗ್ರೆಸ್ ಶಾಸಕರನ್ನು ರಕ್ಷಿಸಲು ಹೈಕಮಾಂಡ್ ಸೂಚಿಸಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
‘ರಾಜಸ್ಥಾನ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಒಂದು ವೇಳೆ ಅಂತಹ ಅನಿವಾರ್ಯತೆ ಸೃಷ್ಟಿಯಾದರೆ ಪಕ್ಷ ಹೇಳಿದ ಕೆಲಸ ಮಾಡಬೇಕಾಗುತ್ತದೆ. ನಮ್ಮ ಮುಂದೆ ಬೇರೆ ಆಯ್ಕೆಗಳಿಲ್ಲ’ ಎಂದು ಹೇಳಿದರು. ‘ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸ ನನಗಿದೆ. ಶಾಸಕರು ಎಲ್ಲೂ ಹೋಗುವುದಿಲ್ಲ. ಅವರನ್ನು ರಕ್ಷಣೆ ಮಾಡುವ ಅಗತ್ಯವಿಲ್ಲ. ಆ ಬಗ್ಗೆ ನನಗೆ ಇದುವರೆಗೂ ಯಾವುದೇ ಜವಾಬ್ದಾರಿ ನೀಡಿಲ್ಲ. ತೆಲಂಗಾಣ ಸೇರಿದಂತೆ ಕೆಲವು ಕಡೆ ನಮ್ಮ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ನಮ್ಮ ಪಕ್ಷದವರು ಸ್ಥಳೀಯ ಮಟ್ಟದಲ್ಲೇ ಇದನ್ನು ನಿಭಾಯಿಸುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಗದೀಶ್ ಶೆಟ್ಟರ್ ಡಿಎನ್‌ಎ ಸಂಘ ಪರಿವಾರದ್ದೇ ಹೊರತು ಕಾಂಗ್ರೆಸ್‌ನದ್ದಲ್ಲ: ಸಿ.ಟಿ.ರವಿ
ಚುನಾವಣೋತ್ತರ ಸಮೀಕ್ಷೆ ನಂಬಲ್ಲ: ರಾಜಸ್ಥಾನದಲ್ಲಿ ಗೆಲವು ಕಷ್ಟ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನನಗೆ ನನ್ನದೇ ಆದ ಅಭಿಪ್ರಾಯವಿದೆ. ಮತಯಂತ್ರದಲ್ಲಿರುವ ಮತದ ಮಾಹಿತಿ ನಿಮಗೂ ಗೊತ್ತಿಲ್ಲ, ನಮಗೂ ಗೊತ್ತಿಲ್ಲ. 48 ತಾಸುಗಳ ನಂತರ ಎಲ್ಲವೂ ಹೊರಬೀಳಲಿದೆ. ಸುಮಾರು 10 ಸಾವಿರ ಮತದಾರರನ್ನು ಸಂಪರ್ಕಿಸಿ ಸಮೀಕ್ಷೆ ಮಾಡಲಾಗಿದೆ. ನಾವು ನಮ್ಮ ರಾಜ್ಯದಲ್ಲಿ ಪ್ರತಿ ಕ್ಷೇತ್ರದಲ್ಲಿ ಟಿಕೆಟ್ ನೀಡುವಾಗ 1 ಲಕ್ಷದಷ್ಟು ಜನರನ್ನು ಸಮೀಕ್ಷೆ ಮಾಡಿದ್ದೆವು. ತೆಲಂಗಾಣದಲ್ಲಿ ನಾನು 20 ಕ್ಷೇತ್ರ ಓಡಾಡಿದ್ದೇನೆ. ಬೇರೆ ಕ್ಷೇತ್ರಗಳಲ್ಲೂ ವರದಿ ಬಹಳ ಉತ್ತಮವಾಗಿದೆ. ಹೀಗಾಗಿ ವೈಯಕ್ತಿಕವಾಗಿ ನಾನು ಚುನಾವಣೋತ್ತರ ಸಮೀಕ್ಷೆ ನಂಬಲ್ಲ’ ಎಂದರು.
24 ತಾಸಲ್ಲಿ ದುಷ್ಕರ್ಮಿಗಳ ಪತ್ತೆ: ಬೆಂಗಳೂರಿನ ಶಾಲೆಗಳಿಗೆ ಬಂದಿರುವುದು ಹುಸಿ ಬಾಂಬ್ ಬೆದರಿಕೆಯಾದರೂ ಸುಮ್ಮನಿರಲು ಆಗುವುದಿಲ್ಲ. ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಕೈಗೊಂಡಿದೆ. 24 ಗಂಟೆಯಲ್ಲಿ ಹುಸಿ ಬಾಂಬ್ ಬೆದರಿಕೆ ಒಡ್ಡಿದ ದುಷ್ಕರ್ಮಿಗಳನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿಯ ನೀವ್ ಅಕಾಡೆಮಿಗೂ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿರುವ ಸುದ್ದಿ ತಿಳಿದು ಶಾಲೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿರುವ ಸುದ್ದಿ ತಿಳಿದ ಗಾಬರಿಯಾಯಿತು. ನನಗೆ ಪರಿಚಯವಿರುವ ಕೆಲವು ಶಾಲೆಗಳಿಂದ ಇ- ಮೇಲ್ ಸಂದೇಶದ ಮಾಹಿತಿ ಗೊತ್ತಾಯಿತು.
ಯಾವುದನ್ನೂ ಉಚಿತವಾಗಿ ಕೊಡಬಾರದು ಎಂದಿರುವ ನಾರಾಯಣಮೂರ್ತಿಗೆ ಬಡವರ ಕಷ್ಟ ಗೊತ್ತಿಲ್ಲ: ಸಚಿವ ಮಹದೇವಪ್ಪ
ನಮ್ಮ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು. ಕೆಲವೊಮ್ಮೆ 10 ಹುಸಿ ಬೆದರಿಕೆಗಳ ಪೈಕಿ ಒಂದು ಟಾರ್ಗೆಟ್ ಮಾಡುವ ಸಾಧ್ಯತೆ ಇರುತ್ತದೆ. ಇಂತಹ ಹುಸಿ ಬೆದರಿಕೆಗಳನ್ನು ನಾವು ನಿರ್ಲಕ್ಷಿಸುವುದಿಲ್ಲ. ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಕೈಗೊಳ್ಳುತ್ತೇವೆ ಎಂದರು. ಹುಸಿ ಬೆದರಿಕೆ ಎಂದು ಸರ್ಕಾರ ಸುಮ್ಮನಿರುವುದಿಲ್ಲ. ಸೂಕ್ತ ತನಿಖೆ ನಡೆಸಿ ಇಂತಹ ಕೃತ್ಯ ಎಸಗಿದ್ದು ಯಾರು ಎಂದು 24 ಗಂಟೆಯೊಳಗೆ ಪತ್ತೆ ಮಾಡಲಾಗುವುದು. ಕೆಲವರು ಕಿಡಿಗೇಡಿಗಳು ಈ ರೀತಿ ಚೇಷ್ಟೆ ಮಾಡುತ್ತಾರೆ, ಹಬ್ಬ ಅದರ ಪಾಡಿಗೆ ಅದು ನಡೆಯುತ್ತದೆ. ಸೈಬರ್ ಕ್ರೈಂ ವಿಭಾಗದವರು ಸಕ್ರಿಯವಾಗಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯೂ ಹೀಗೆ ಆಗಿತ್ತು ಎಂದರು.