ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ನೀಡುತ್ತಿರುವ ಮೊಟ್ಟೆಯನ್ನು ಎರಡು ದಿನಕ್ಕೆ ಹೆಚ್ಚಿಸಲು ಹಾಗೂ ಇದನ್ನು 9 ಮತ್ತು 10ನೇ ತರಗತಿ ಮಕ್ಕಳಿಗೂ ವಿಸ್ತರಿಸಲು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. 

ಬೆಂಗಳೂರು (ಜೂ.23): ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ನೀಡುತ್ತಿರುವ ಮೊಟ್ಟೆಯನ್ನು ಎರಡು ದಿನಕ್ಕೆ ಹೆಚ್ಚಿಸಲು ಹಾಗೂ ಇದನ್ನು 9 ಮತ್ತು 10ನೇ ತರಗತಿ ಮಕ್ಕಳಿಗೂ ವಿಸ್ತರಿಸಲು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ಪೋಷಣ್‌ ಯೋಜನೆಯಡಿ ಬಿಸಿಯೂಟದ ಜೊತೆಗೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 8ನೇ ತರಗತಿ ಮಕ್ಕಳಿಗೆ ಪ್ರಸ್ತುತ ವಾರದಲ್ಲಿ ಒಂದು ದಿನ ಮಾತ್ರ ಬೇಯಿಸಿದ ಮೊಟ್ಟೆ ನೀಡಲಾಗುತ್ತಿದೆ. 

ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆ ಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲಾಗುತ್ತಿದೆ. ಇದನ್ನು 9 ಮತ್ತು 10ನೇ ತರಗತಿ ಮಕ್ಕಳಿಗೂ ವಿಸ್ತರಿಸಿ ವಾರದಲ್ಲಿ ಎರಡು ದಿನ ಮೊಟ್ಟೆನೀಡಲು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು. ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಹಿಂದಿನ ಸರ್ಕಾರದಲ್ಲೂ ಮೊದಲು ವಾರದಲ್ಲಿ ಒಂದು ದಿನ ಮಾತ್ರ ಮೊಟ್ಟೆವಿತರಣೆಗೆ ಆದೇಶಿಸಲಾಗಿತ್ತು. ನಂತರ ಹೆಚ್ಚುವರಿ ಅನುದಾನವಿದ್ದರಿಂದ ಕೆಲ ತಿಂಗಳು ವಾರದಲ್ಲಿ ಎರಡು ಮೊಟ್ಟೆನೀಡಲಾಗಿದೆ. ನಾವೂ ಕೂಡ ಮುಂದಿನ ಬಜೆಟ್‌ನಲ್ಲಿ ಅನುದಾನ ಲಭ್ಯತೆ ನೋಡಿಕೊಂಡು ಎರಡು ಮೊಟ್ಟೆನೀಡಲು ಕ್ರಮ ವಹಿಸುತ್ತೇವೆ ಎಂದರು.

ಗ್ಯಾರಂಟಿ ಸ್ಕೀಮ್ ಜಾರಿಗೆ ಕಾಂಗ್ರೆಸ್‌ನಿಂದ ವಿದ್ಯುತ್‌ ದರ ಏರಿಕೆ, ತಕ್ಷಣ ಇಳಿಸಿ: ಎಚ್‌ಡಿಕೆ

ಕುಡಿವ ನೀರು ಪೂರೈಸಲು ತುರ್ತು ಕ್ರಮ​ಗಳ ಕೈಗೊ​ಳ್ಳಿ: ಶಿವಮೊಗ್ಗ ಜಿಲ್ಲೆಯಲ್ಲಿ ನಿರೀಕ್ಷೆಯಂತೆ ಇಂದಿನವರೆಗೆ ವಾಡಿಕೆ ಪ್ರಮಾಣದ ಮಳೆ ಬಾರದ ಹಿನ್ನೆಲೆ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ. ಈ ಭಾಗಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಅಗತ್ಯವಿರುವ ಎಲ್ಲ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿ​ಸಿದ ಅಧಿ​ಕಾ​ರಿ​ಗ​ಳಿ​ಗೆ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚಿ​ಸಿ​ದರು. 

ಜಿಲ್ಲಾ ಪಂಚಾಯಿತಿಯ ಅಬ್ದುಲ್‌ ನಜೀರ್‌ ಸಾಬ್‌ ಸಭಾಂಗಣದಲ್ಲಿ ಬರ, ಪ್ರಕೃತಿ ವಿಕೋಪ, ಕೃಷಿ ಚಟುವಟಿಕೆ, ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವ​ರು, ವಿವಿಧ ಕ್ಷೇತ್ರಗಳ ಸ್ಥಿತಿಗಳ ಮಾಹಿತಿ ಪಡೆದು ಮಾತನಾಡಿದರು. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಇನ್ನೂ 20 ದಿನಗಳಿಂದ 1 ತಿಂಗಳವರೆಗೆ ಕುಡಿಯುವ ನೀರಿನ ಪೂರೈಕೆ ಸಾಧ್ಯವಾಗಲಿದೆ. ಈ ಅವಧಿಯಲ್ಲಿ ಮಳೆ ಬಾರದಿದ್ದರೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳಲಿದೆ. ಈಗಾಗಲೇ ಜಿಲ್ಲೆಯ 80-90 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವುದನ್ನು ಗುರುತಿಸಲಾಗಿದೆ. ಪ್ರಸ್ತುತ 25 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಒದಗಿಸಲಾಗುತ್ತಿದೆ ಎಂದರು.

ಕೇಂದ್ರಕ್ಕೆ ಬಿಜೆಪಿ ನಾಯಕರು ರಾಜ್ಯದ ಪಾಲು ಕೇಳಲಿ: ಸಚಿವ ಮಧು ಬಂಗಾರಪ್ಪ

ಪ್ರತಿ ಬಾರಿಯೂ ಮಳೆ ಬಾರದಿದ್ದರೆ ಉಂಟಾಗುವ ನೀರಿನ ಸಮಸ್ಯೆಗೆ ಶಾಶ್ವತವಾದ ಪರಿಹಾರವನ್ನು ಕಂಡುಕೊಳ್ಳುವ ತುರ್ತು ಅನಿವಾರ್ಯತೆ ಇದೆ. ಜಿಲ್ಲೆಯ ಸೊರಬ ಹೊರತುಪಡಿಸಿ, ಬಹುತೇಕ ಎಲ್ಲ ಗ್ರಾಮಗಳಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಅನುಷ್ಠಾನಗೊಂಡಿವೆ. ಈವರೆಗೆ ಈ ಯೋಜನೆಯ ಮಂಜೂರಾತಿಗೊಂಡು ಅಪೂರ್ಣಗೊಂಡಿದ್ದಲ್ಲಿ ಅವುಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು. ಈ ಯೋಜನೆಯ ವ್ಯವಸ್ಥಿತ ಅನುಷ್ಠಾನದಿಂದಾಗಿ ಹಣಕಾಸಿನ ಅಪವ್ಯಯ ಹಾಗೂ ಸಮಸ್ಯೆಯಿಂದ ಮುಕ್ತಿ ಕಂಡುಕೊಳ್ಳಬಹುದು. ಈ ವಿಷಯದ ಕುರಿತು ಮಾನ್ಯ ಮುಖ್ಯಮಂತ್ರಿ ಅವ​ರೊಂದಿಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.