ಈ ಸಲ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ: ಜಗದೀಶ್ ಶೆಟ್ಟರ್ ಅಭಿಮತ
ಮೇ 10ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಸಲ ಬಿಜೆಪಿ ಸ್ಪಷ್ಟಬಹುಮತ ಪಡೆದು ಮತ್ತೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿ (ಮಾ.30): ಮೇ 10ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಸಲ ಬಿಜೆಪಿ ಸ್ಪಷ್ಟಬಹುಮತ ಪಡೆದು ಮತ್ತೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿ, ಮೇ ಮೊದಲ ವಾರದಲ್ಲಿ ಚುನಾವಣೆ ನಡೆಯಬಹುದು ಎಂಬ ನಿರೀಕ್ಷೆಯಿತ್ತು. ಮೇ 10ಕ್ಕೆ ನಡೆಯಲಿದೆ. ಚುನಾವಣೆಗೆ ಬಿಜೆಪಿ ಸಕಲ ಸನ್ನದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಈಗಾಗಲೇ ರಾಜ್ಯದಲ್ಲಿ ಪ್ರವಾಸ ನಡೆಸಿ ಪ್ರಚಾರ ಮಾಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ಜನರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಈ ಸಲ ಖಚಿತವಾಗಿಯೂ ಸ್ಪಷ್ಟಬಹುಮತದೊಂದಿಗೆ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ ಎಂದರು. ಇನ್ಮೇಲೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿವಿಚಾರವಾಗಿ ಗಂಭೀರವಾಗಿ ಚರ್ಚೆ ನಡೆಯಲಿದೆ. ಯಾರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು. ಬಿಜೆಪಿಗೆ ಈ ಸಲ 60ರಿಂದ 70 ಸ್ಥಾನ ಬರುತ್ತವೆ ಎಂದು ಡಿ.ಕೆ. ಶಿವಕುಮಾರ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಅವರು, ವಿರೋಧ ಪಕ್ಷದಲ್ಲಿರುವವರು ಹಾಗೆ ಹೇಳಬೇಕು. ಡಿಕೆಶಿ ಹಾಗೂ ಸಿದ್ದರಾಮಯ್ಯ ಇಬ್ಬರು ತಿರುಕನ ಕನಸು ಕಾಣುತ್ತಿದ್ದಾರೆ.
ಎಚ್ಡಿಕೆಯಿಂದ ಒಕ್ಕಲಿಗ ನಾಯಕರ ತುಳಿಯುವ ಕೆಲಸ: ಎಲ್.ಆರ್.ಶಿವರಾಮೇಗೌಡ
ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತೇನೆ ಎಂದರು. ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಮನೆ ಗೆದ್ದು ಮಾರು ಗೆಲ್ಲು ಎಂಬ ಗಾದೆ ಇದೆ. ಆದರೆ, ಅವರಿಗೆ ಒಂದು ಕ್ಷೇತ್ರದಲ್ಲಿ ಗೆಲ್ಲುವುದಕ್ಕೆ ಆಗುವುದಿಲ್ಲ. ಅವರಿಗೆ ಸ್ಪರ್ಧಿಸಲು ಕ್ಷೇತ್ರವೇ ಸಿಗುತ್ತಿಲ್ಲ. ಇನ್ನು ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪಾರ್ಟಿಯನ್ನು ಅಧಿಕಾರಕ್ಕೆ ತರುತ್ತಾರಂತೆ ಎಂದು ವ್ಯಂಗ್ಯವಾಡಿದರು. ನಾನು ಗೆಲ್ಲುತ್ತೇನೆ ಎಂಬ ಕಾನ್ಫಿಡೆಂಟ್ ನನಗಿದೆ. ಆದರೆ ಸಿದ್ದರಾಮಯ್ಯ ಹಾಗೆ ಹೇಳಲಿ ನೋಡೋಣ. ಅವರಿಗೆ ಕ್ಷೇತ್ರವೇ ಇಲ್ಲ ಅಲ್ಲ. ಅದ್ಹೇಗೆ ಗೆಲ್ಲುತ್ತೇನೆ ಎಂದು ಹೇಳುತ್ತಾರೆ ಎಂದು ಪ್ರಶ್ನಿಸಿದರು.
ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಸಿಎಂ ಖಚಿತ: ಶಾಸಕ ಸಿ.ಎಸ್.ಪುಟ್ಟರಾಜು
ಕಾಂಗ್ರೆಸ್ ಕಳೆದ ಬಾರಿ ಗೆದ್ದಿರುವ ಸ್ಥಾನಕ್ಕಿಂತ ಕಡಿಮೆ ಸ್ಥಾನ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದರು. ಪಾರದರ್ಶಕ ಚುನಾವಣೆ ನಡೆಯಬೇಕಿದೆ. ಈ ನಿಟ್ಟಿನಲ್ಲಿ ಚುನಾವಣೆ ಆಯೋಗ ಕ್ರಮ ಕೈಗೊಳ್ಳುತ್ತದೆ ಎಂದರು. ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಸಾಮಾನ್ಯ. ಇದೊಂದು ರಾಜಕೀಯ ವ್ಯವಸ್ಥೆ ಅಷ್ಟೇ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.