ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ವಿರೋಧ ನಡುವೆಯೂ ಸಾಲಮನ್ನಾ ಮಾಡಿದ್ದೆ, ಈ ಬಾರಿ ಬಹುಮತ ಕೊಡಿ: ಎಚ್‌ಡಿಕೆ
ಬಡತನ, ಉದ್ಯೋಗ. ಶಿಕ್ಷಣ ಸೇರಿದಂತೆ ಜನರ ಎಲ್ಲಾ ಸಮಸ್ಯೆ ನಿವಾರಣೆ ಮಾಡಲು ಜೆಡಿಎಸ್‌ಗೆ ಬಹುಮತ ಸಿಕ್ಕಿದರೆ ಮಾತ್ರ ಸಾಧ್ಯ. ಹಾಗಾಗಿ ಮೂಡಿಗೆರೆ ಕ್ಷೇತ್ರದ ಜೆಡಿಎಸ್‌ನ ಅಧಿಕೃತ ಅಭ್ಯರ್ಥಿ ಎಂ.ಪಿ.ಕುಮಾರಸ್ವಾಮಿ ಅವರನ್ನು ಗೆಲ್ಲಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಮೂಡಿಗೆರೆ (ಏ.20) : ಬಡತನ, ಉದ್ಯೋಗ. ಶಿಕ್ಷಣ ಸೇರಿದಂತೆ ಜನರ ಎಲ್ಲಾ ಸಮಸ್ಯೆ ನಿವಾರಣೆ ಮಾಡಲು ಜೆಡಿಎಸ್‌ಗೆ ಬಹುಮತ ಸಿಕ್ಕಿದರೆ ಮಾತ್ರ ಸಾಧ್ಯ. ಹಾಗಾಗಿ ಮೂಡಿಗೆರೆ ಕ್ಷೇತ್ರದ ಜೆಡಿಎಸ್‌ನ ಅಧಿಕೃತ ಅಭ್ಯರ್ಥಿ ಎಂ.ಪಿ.ಕುಮಾರಸ್ವಾಮಿ ಅವರನ್ನು ಗೆಲ್ಲಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದರು.
ಬುಧವಾರ ಪಟ್ಟಣದ ಅಡ್ಯಂತಾಯ ರಂಗಮಂದಿರಲ್ಲಿ ಏರ್ಪಡಿಸಿದ್ದ ಜೆಡಿಎಸ್ ಸಮಾವೇಶ(JDS convention)ದಲ್ಲಿ ಅಭ್ಯರ್ಥಿ ಎಂ.ಪಿ.ಕುಮಾರಸ್ವಾಮಿ ಪರ ಮತಯಾಚಿಸಿ ಮಾತನಾಡಿದರು. ಸಮಿಶ್ರ ಸರಕಾರದಲ್ಲಿ ಕಾಂಗ್ರೆಸ್‌ನ ವಿರೋಧದ ನಡುವೆಯೂ 25 ಸಾವಿರ ಕೋಟಿ ರೈತರ ಸಾಲ ಮನ್ನಾ(Salamanna) ಮಾಡಿದ್ದೆ. ನಮ್ಮ ಪಕ್ಷಕ್ಕೆ ಬಹುಮತ ಬಂದರೆ ಸ್ತ್ರೀಶಕ್ತಿ ಸಂಘದ ಸಾಲ ಸಂಪೂರ್ಣ ಮನ್ನ ಮಾಡಲಾಗುವುದು. ಅರಣ್ಯ ಕಾಯಿದೆ ಹೆಸರಿನಲ್ಲಿ ಅತಿಕ್ರಮಣವಾಗಿ ಒಕ್ಕಲೆಬ್ಬಿಸುವ ಪ್ರಯತ್ನಕ್ಕೆ ಕಡಿವಾಣ ಹಾಕದಿದ್ದರೆ ಮುಂದೆ ತಾನು ಮತ ಕೇಳುವುದಕ್ಕೆ ಬರುವುದಿಲ್ಲ. ಜನರ ಸಮಸ್ಯೆ ನಿವಾರಣೆಗಾಗಿ ಪಂಚರತ್ನ ಯೋಜನೆಗೆ 2.5ಲಕ್ಷ ಕೋಟಿ ಹಣ ಸರಕಾರ ಬಂಡವಾಳ ಕ್ರೂಡೀಕರಿಸಬೇಕಿದೆ. ಈ ಯೋಜನೆ ಜಾರಿಗೊಳಿಸಲು ಜೆಡಿಎಸ್‌ಗೆ ಬಹುಮತ ನೀಡಬೇಕೆಂದು ಮನವಿ ಮಾಡಿದರು.
ಮಂಡ್ಯದಿಂದ ಸ್ಪರ್ಧೆ ಮಾಡಲು ನಾನೇನು ಟೂರಿಂಗ್ ಟಾಕೀಸಾ? ಹೆಚ್.ಡಿ. ಕುಮಾರಸ್ವಾಮಿ ಟಾಂಗ್
ಚಿತ್ರದುರ್ಗ(Chitradurga)ದಲ್ಲಿ ರೈತರೊಬ್ಬರು ಈ ಬಾರಿ ಜೆಡಿಎಸ್ ಬರಬೇಕೆಂದು 20 ಸಾವಿರ ಹಣ ನೀಡಲು ಮುಂದಾಗಿದ್ದರು. ಇದೇ ರೀತಿಯಲ್ಲಿ ರಾಜ್ಯದಲ್ಲಿ ಈ ಬಾರಿ ಜೆಡಿಎಸ್‌ಗೆ ಜನರು ಉತ್ತಮವಾದ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಮೇ.18ಕ್ಕೆ ತನ್ನ ತಂದೆ ಎಚ್.ಡಿ.ದೇವೇಗೌಡ ಅವರ 92ನೇ ಜನ್ಮ ದಿನಾಚರಣೆ ಇದೆ. ಅದಕ್ಕೆ ಉಡುಗೊರೆಯಾಗಿ ಈ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಪಿ.ಕುಮಾರಸ್ವಾಮಿ ಅವರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸಿಕೊಡಬೇಕೆಂದು ಮನವಿ ಮಾಡಿದರು.
ಜೆಡಿಎಸ್ ಅಭ್ಯರ್ಥಿ ಎಂ.ಪಿ.ಕುಮಾರಸ್ವಾಮಿ(MP Kumaraswamy) ಮಾತನಾಡಿ, ಬಿಜೆಪಿ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣವಿದೆ. ಉತ್ತಮ ಕೆಲಸ ಮಾಡಿದರೂ ತನ್ನನ್ನು ಕತ್ತು ಹಿಡಿದು ನೂಕಿದ್ದಾರೆ. ಜಗದೀಶ್ ಶೆಟ್ಟರ್(Jagadish shettar) ನಂತಹ ಹಿರಿಯ ನಾಯಕರನ್ನೇ ಬಿಡಲಿಲ್ಲ. ಬಿಜೆಪಿಯವರ ಕೋಮುವಾದ ಧೋರಣೆಯಿಂದ ಬೇಸತ್ತು ಹೋಗಿದ್ದೇನೆ. ಇದು ಜಾತ್ಯತೀತ ರಾಷ್ಟ್ರ. ಎಲ್ಲರೂ ಸಾಮರಸ್ಯ ದಿಂದ ಬದುಕಬೇಕು. ಆದರೆ ಬಿಜೆಪಿಯವರು ಮಾತ್ರ ಬದುಕುವ ಬಗ್ಗೆ ಚಿಂತನೆ ನಡೆಸುತ್ತಾರೆ. ಅತಿವೃಷ್ಟಿಗೆ ಅನುದಾನ ಕೇಳಿದರೆ ಕೊಡಲಿಲ್ಲ. ಅದೇ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿದ್ದರೆ ಕೇಳಿದ ಕೂಡಲೇ ಯೋಚನೆ ಮಾಡದೇ ಅನುದಾನ ನೀಡುತ್ತಿದ್ದರು. ಈ ರಾಜ್ಯದಲ್ಲಿ ದೀನ ದಲಿತರ, ಮಹಿಳೆಯರ, ಬಡವರ, ರೈತರ ಕಲ್ಯಾಣಕ್ಕಾಗಿ ಶ್ರಮಿಸುವ ಏಕೈಕ ಮುಖ್ಯಮಂತ್ರಿ ಇದ್ದರೆ ಅದು ಎಚ್.ಡಿ.ಕುಮಾರಸ್ವಾಮಿ ಮಾತ್ರ. ಅವರಿಗೆ ಬಲ ಕೊಡುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.
ಆರಂಭದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ಪಿ.ಕುಮಾರಸ್ವಾಮಿ ಅವರು ಸಾವಿರಾರು ಮಂದಿ ಕಾರ್ಯಕರ್ತರೊಂದಿಗೆ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಬೃಹತ್ ಮೆರವಣಿಗೆ ನಡೆಸಿ, 2 ನೇ ನಾಮಪತ್ರ ಸಲ್ಲಿಸಿ, ನಂತರ ಅಡ್ಯಂತಾಯ ರಂಗ ಮಂದಿರಕ್ಕೆ ಬರುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದರು.
ದುರಹಂಕಾರ ಇನ್ನು ಕಡಿಮೆಯಾಗಿಲ್ಲ, ಸಂಸದೆ ಸುಮಲತಾ ವಿರುದ್ಧ ಹೆಚ್‌ಡಿಕೆ ಕೆಂಡಾಮಂಡಲ!
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್, ಕ್ಷೇತ್ರ ಸಮಿತಿ ಸದಸ್ಯ ಡಿ.ಜೆ.ಸುರೇಶ್, ಮುಖಂಡರಾದ ಕಳಸ ಮಂಜಪಯ್ಯ, ಅರೆಕುಡಿಗೆ ಶಿವಣ್ಣ ಮತ್ತಿತರರಿದ್ದರು.
ಬಿ.ಬಿ.ನಿಂಗಯ್ಯ ಅವರು ಅಭ್ಯರ್ಥಿಯಾಗುವ ಬಗ್ಗೆ ಕ್ಷೇತ್ರದ ಅನೇಕ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು. ಅದನ್ನು ಸರಿಪಡಿಸಿಕೊಂಡು ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯಲು ಕಾಲಾವಕಾಶ ನೀಡಲಾಗಿತ್ತು. ಆದರೆ ಅವರು ನಿರೀಕ್ಷೆಯಂತೆ ಕೆಲಸ ಮಾಡಿರಲಿಲ್ಲ. ಹಾಗಾಗಿ ಎಲ್ಲಾ ಮುಖಂಡರೊಂದಿಗೆ ಚರ್ಚಿಸಿ ಕಠಿಣ ನಿರ್ಧಾರ ಕೈಗೊಳ್ಳುವ ಅನಿವಾರ್ಯತೆ ಬಂದಿದ್ದರಿಂದ ಎಂ.ಪಿ.ಕುಮಾರಸ್ವಾಮಿ ಅವರಿಗೆ ಜೆಡಿಎಸ್‌ನಿಂದ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.
ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಗಳು.
ತನ್ನ ಗಮನಕ್ಕೆ ಬಾರದೇ, ತನ್ನ ವಿಶ್ವಾಸ ಪಡೆಯದೇ ಎಂ.ಪಿ.ಕುಮಾರಸ್ವಾಮಿ ಅವರಿಗೆ ಜೆಡಿಎಸ್‌ನಿಂದ ಟಿಕೇಟ್ ನೀಡಿದ್ದ ಹಿನ್ನಲೆಯಲ್ಲಿ ಮಾಜಿ ಸಚಿವ ಬಿ.ಬಿ.ನಿಂಗಯ್ಯ ಅವರು ಬುಧವಾರ ನಡೆದ ಜೆಡಿಎಸ್ ಸಮಾವೇಶಕ್ಕೆ ಭಾಗವಹಿಸದಿರುವುದು ಕಂಡು ಬಂದಿತು.