ಈ ಬಾರಿಯ ಚಳಿಗಾಲದ ಅಧಿವೇಶನ ಮಾದರಿಯಾಗಬೇಕು: ಸ್ಪೀಕರ್ ಯು.ಟಿ.ಖಾದರ್

ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಮಾದರಿಯಾಗುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ನಡೆಸಲಾಗುವುದು ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದರು. 

This winter session should be a model Says UT Khader gvd

ಬೆಳಗಾವಿ (ನ.09): ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಮಾದರಿಯಾಗುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ನಡೆಸಲಾಗುವುದು ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದರು. ಸುವರ್ಣ ವಿಧಾನ ಸೌಧವನ್ನು ವಿಪ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಚಳಿಗಾಲದ ಅಧಿವೇಶನ ದಿನಾಂಕವನ್ನು ಸರ್ಕಾರ ನಿಗದಿಪಡಿಸಲಿದೆ. ಆದರೆ ಡಿಸೆಂಬರ್‌ನಲ್ಲಿ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಫೂರ್ವಭಾವಿಯಾಗಿ ಪರಿಶೀಲನೆ ನಡೆಸುವುದರ ಜತೆಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಲಹೆ, ಸೂಚನೆಗಳನ್ನು ನೀಡಲಾಗುವುದು ಎಂದರು.

ಈ ಬಾರಿಯ ಅಧಿವೇಶನ ಮಾದರಿಯಾಗಬೇಕು ಎಂಬ ಆಶಯ ನಮ್ಮದಾಗಿದೆ. ಈ ನಿಟ್ಟಿನಲ್ಲಿ ಸೌಲಭ್ಯಗಳು ಹಾಗೂ ವಿವಿಧ 10 ಸಮಿತಿಗಳ ರಚನೆ ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ವಿಧಾನ ಸಭೆ ಹಾಗೂ ವಿಧಾನ ಪರಿಷತ್‌ ಸದಸ್ಯರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ತಿಳಿಸಲಾಗಿದೆ. ಕಲಾಪಗಳ ವೀಕ್ಷಣೆಗೆ ಬರುವ ಜನಸಾಮಾನ್ಯರಿಗೆ ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಪ್ರವೇಶ ಪಾಸ್‌ ಸೇರಿದಂತೆ ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದರು. ಸರ್ಕಾರದಿಂದ ಬರುವ ಮಸೂದೆಗಳ ಬಗ್ಗೆ ಚರ್ಚೆಗೆ ಅವಕಾಶ ಕಲ್ಪಿಸಿ ಪಾಸ್ ಮಾಡಲಾಗುವುದು ಎಂದು ತಿಳಿಸಿದರು.

ಮತ್ತೊಮ್ಮೆ ಕೋಟ್ಯಧಿಪತಿಯಾದ ಮಾದಪ್ಪ: 28 ದಿನಗಳಲ್ಲಿ 2 ಕೋಟಿಗೂ ಅಧಿಕ ಹಣ ಸಂಗ್ರಹ

ವಿಧಾನ ಸಭೆ ಮೊಗಸಾಲೆಯಲ್ಲಿ ನೆಹರು ಪೋಟೊ ಅಳವಡಿಸುವ ಹಾಗೂ ಹಿಂದಿನ ಸರ್ಕಾರ ಅಳವಡಿಸಿರುವ ಸಾವರ್ಕರ್‌ ಫೋಟೋ ತೆಗೆಯುವ ಬಗ್ಗೆ ಚಿಂತನೆ ಇದೆಯಾ ಎಂಬ ಸುದ್ದಿಗಾರರ ಪ್ರಶ್ನೆಗೆ ಮೌನವಾದ ಸ್ಪೀಕರ್‌, ನಿಮ್ಮ ಅಭಿಪ್ರಾಯ ಏನು ಎಂದು ಸುದ್ದಿಗಾರರನ್ನೇ ಮರುಪ್ರಶ್ನಿಸಿ ಸುಮ್ಮನಾದರು. ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಕುರಿತು ಚರ್ಚೆ ನಡೆಸಲು ಸಮಯ ನಿಗದಿಪಡಿಸಲಾಗುವುದು. ಕೆಲವು ಸಚಿವರಿಗೆ ಹಾಗೂ ಶಾಸಕರಿಗೆ ಬೆಳಗಾವಿಯಲ್ಲಿನ ಅಧಿವೇಶನ ಎಂದರೆ ಪ್ರತಿಭಟನೆ ಅಧಿವೇಶನ ಎಂಬ ಭಾವನೆ ಮೂಡಿದೆ. ಈ ಹಿನ್ನೆಲೆಯಲ್ಲಿ ರೈತರ, ನೌಕರರು ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತು ಅಧಿವೇಶನ ಮುಂಚಿತವಾಗಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಚರ್ಚಿಸಿ ಪರಿಹರಿಸಲು ಕ್ರಮಕೈಗೊಳ್ಳಬೇಕು ಎಂದರು.

ಸುವರ್ಣಸೌಧ ನಿರ್ವಹಣೆಗೆ ಕುರಿತು ಅಸಮಾಧಾನ: ಏನ್ರೀ ನಿಮ್ಮ ಮನೆಯಾಗಿದ್ದರೆ ಹೀಗೆ ಇಟ್ಟುಕೊಳ್ಳುತ್ತಿದ್ದಿರಾ? ಎಂದು ಸಭಾಧ್ಯಕ್ಷ ಖಾದರ್‌ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರೆ, ಇತ್ತ ಸಭಾಪತಿ ಬಸವರಾಜ ಹೊರಟ್ಟಿ ಅವರು ಬೆಳಗಾವಿ ಸುವರ್ಣ ವಿಧಾನಸೌಧ ನಥಿಂಗ್ ಬಟ್ ಬಿಗ್ ಗೋಡೌನ್ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ ನಲ್ಲಿ ವಿಧಾನಮಂಡಳ ಚಳಿಗಾಲ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಧಿವೇಶನದ ಪೂರ್ವಸಿದ್ಧತೆಯನ್ನು ಮಂಗಳವಾರ ಪರಿಶೀಲಿಸಿದರು. ಸುವರ್ಣ ವಿಧಾನಸೌಧವನ್ನು ಬೆಂಗಳೂರಿನ ವಿಧಾನಸೌಧದ ಮಾದರಿಯಲ್ಲಿ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಯು.ಟಿ.ಖಾದರ್‌ ನಿರ್ದೇಶನ ನೀಡಿದರು.

ಸಿದ್ಧರಾಮಯ್ಯಗೆ ವೇದಿಕೆಗಳಲ್ಲಿ ಮಾತ್ರ ರೈತರ ಬಗ್ಗೆ ಕನಿಕರ: ಡಿ.ವಿ.ಸದಾನಂದ ಗೌಡ ಆರೋಪ

ಕೆಲವು ಕಡೆಗಳಲ್ಲಿ ಬಣ್ಣ ಮಾಸಿರುವುದು ಹಾಗೂ ಕಲೆಗಳಿರುವುದನ್ನು ಕಂಡು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು , ಕಾಂಟ್ರಾಕ್ಟ್ ವಿರುದ್ಧ ಕಿಡಿಕಾರಿದರು. ಅಲ್ಲದೇ ಏನ್ರೀ ನಿಮ್ಮ ಮನೆಯಾಗಿದ್ರೆ ಹೀಗೆ ಇಟ್ಟಕೊತ್ತಿದ್ದರಾ? ಸುವರ್ಣ ವಿಧಾನ ಸೌಧ ನಿರ್ವಹಣೆಗೆ ವರ್ಷಕ್ಕೆ ₹ 6 ಕೋಟಿ ಖರ್ಚು ಮಾಡುತ್ತೇವೆ. 120 ಕ್ಕೂ ಅಧಿಕ ಕಾರ್ಮಿಕರು ಸ್ವಚ್ಛತೆಗಾಗಿ ಇದ್ದಾರೆ. ಏನ್ ಮಾಡ್ತಿದ್ದೀರಿ ಎಂದು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಎಸ್‌.ಎಸ್‌.ಸೊಬರದಗೆ ತರಾಟೆಗೆ ತೆಗೆದುಕೊಂಡರು. ಇದೇ ವೇಳೆ ಧನಿಗೂಡಿಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರು, ಬೆಳಗಾವಿ ಸುವರ್ಣ ವಿಧಾನ ಸೌಧ ನಥಿಂಗ್ ಬಟ್ ಬಿಗ್ ಗೋಡಾವನ್ ಆಗಿದೆ. ಇಲ್ಲಿ ನಾವು ಸಚಿವರ ಕಚೇರಿ ಎಲ್ಲಿದೆ ಎಂದು ಹುಡುಕಬೇಕಾಗುತ್ತದೆ. ಹುಡುಕದಿದ್ದರೆ ಸಚಿವರ ಕಚೇರಿಗಳೇ ಸಿಗುವುದಿಲ್ಲ. ಅದೇ ಬೆಂಗಳೂರಿನಲ್ಲಿ ನಮಗೆ ಯಾವ ಸಚಿವರ ಕಡೆ ಹೋಗಬೇಕು ಅಂದರೆ ನೇರವಾಗಿ ಹೋಗುತ್ತಿನಿ ಎಂದರು.

Latest Videos
Follow Us:
Download App:
  • android
  • ios