ಶಹಾಪುರ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಮೂವರು ಆಕಾಂಕ್ಷಿಗಳ ಫೈಟ್, ಟಿಕೆಟ್‌ಗಾಗಿ ಬೆಟ್ಟಿಂಗ್!

ಯಾದಗಿರಿಯಲ್ಲಿ ಚುನಾವಣಾ ಅಖಾಡ ರಂಗೇರಿದೆ.  ಜಿಲ್ಲೆಯ ಶಹಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ  ಮೂವರು ಆಕಾಂಕ್ಷಿಗಳಿಂದ ತೀವ್ರ ಪೈಪೋಟಿ ನಡೆದಿದೆ. ಮಾತ್ರವಲ್ಲ ಕ್ಷೇತ್ರದಲ್ಲಿ ಇದಕ್ಕಾಗಿ ಬೆಟ್ಟಿಂಗ್ ಕೂಡ ನಡೆದಿದೆ.

Three aspirants fight for BJP ticket of Shahapur Constituency in Yadagiri gow

ಯಾದಗಿರಿ(ಏ.4): ಯಾದಗಿರಿಯಲ್ಲಿ ಚುನಾವಣಾ ಅಖಾಡ ರಂಗೇರಿದೆ.  ಜಿಲ್ಲೆಯ ಶಹಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಮೂವರು ಆಕಾಂಕ್ಷಿಗಳಿಂದ ತೀವ್ರ ಪೈಪೋಟಿ ನಡೆದಿದೆ. ಮಾಜಿ ಶಾಸಕ ಗುರು ಪಾಟೀಲ ಶಿರವಾಳ, ಅಮೀನರೆಡ್ಡಿ ಯಾಳಗಿ, ಡಾ. ಚಂದ್ರಶೇಖರ ಸುಭೇದಾರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಬಿಜೆಪಿ ಟಿಕೆಟ್  ಗಿಟ್ಟಿಸಿಕೊಳ್ಳಲು ಆಕಾಂಕ್ಷಿಗಳು ನಾನಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ರಾಜ್ಯ ನಾಯಕರನ್ನ ಭೇಟಿಯಾಗಿ ಆಕಾಂಕ್ಷಿಗಳು ಒತ್ತಡ ಹೇರುತ್ತಿದ್ದಾರೆ.

ಶಹಾಪುರ ಕ್ಷೇತ್ರಕ್ಕೆ ಹಾಲಿ ಶಾಸಕ ಶರಣಬಸಪ್ಪ ದರ್ಶನಾಪೂರಗೆ ಕಾಂಗ್ರೆಸ್ ಟಿಕೆಟ್ ಈಗಾಗಲೇ ಘೋಷಣೆಯಾಗಿದೆ. ಈಗಾಗಲೇ ಅವರು ಕ್ಷೇತ್ರದಾದ್ಯಂತ  ಪ್ರಚಾರ ನಡೆಸುತ್ತಿದ್ದಾರೆ.   

ಆದ್ರೆ ಟಿಕೆಟ್ ಗಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುವ ಬಿಜೆಪಿಯ ಮೂವರು ಆಕಾಂಕ್ಷಿಗಳು ಕಾಯುತ್ತಿದ್ದಾರೆ. ಇದರ ಮಧ್ಯೆ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ತಾರೆ ಎಂದು ಕೆಲವರು ಬೆಟ್ಟಿಂಗ್ ಕಟ್ಟಿದ್ದಾರೆ. ಅಮೀನರೆಡ್ಡಿ ಯಾಳಗಿ ಹಾಗೂ ಗುರು ಪಾಟೀಲ್ ಶಿರವಾಳ ಅವರ ಪರವಾಗಿ ಬಿಜೆಪಿ ಟಿಕೆಟ್ ಗಾಗಿ ಬೆಟ್ಟಿಂಗ್ ಕಟ್ಟಿದ್ದು ಕ್ಷೇತ್ರದಾದ್ಯಂತ ಭಾರಿ ಚರ್ಚೆಯಾಗ್ತಿದೆ.

ವಿಜಯ ಮಲ್ಯನಂತೆ ನಾನು ಓಡಿ ಹೋಗಲ್ಲ, ಕುತಂತ್ರದಿಂದ ನನ್ನನ್ನು ಜೈಲಿಗಟ್ಟಿದರು:

ಬಿಜೆಪಿ ಹಾಲಿ ಶಾಸಕ ಎಸ್.ಎ.ರವೀಂದ್ರನಾಥ್ ರಾಜಕೀಯಕ್ಕೆ ನಿವೃತ್ತಿ ಘೋಷಣೆ!
ದಾವಣಗೆರೆ: ಚುನಾವಣಾ ರಾಜಕೀಯಕ್ಕೆ ಬಿಜೆಪಿ ಹಾಲಿ ಶಾಸಕ ಎಸ್.ಎ.ರವೀಂದ್ರನಾಥ್  ನಿವೃತ್ತಿ ಘೋಷಿಸಿದ್ದಾರೆ. ಸಹಜವಾಗಿಯೇ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕನಾಗಿರುವ ಇವರು, ಅನಾರೋಗ್ಯ, ವಯಸ್ಸಾದ ಕಾರಣ ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ನನಗೆ ಚುನಾವಣೆ ಮಾಡೋಕೆ ಆಗೋದಿಲ್ಲ ಅಂತ ವರಿಷ್ಠರ ಗಮನಕ್ಕೆ ತಂದಿದ್ದೇನೆ. ಬೆಂಗಳೂರಿನಲ್ಲಿ ನಡೆದ ಕೋರ್ ಕಮಿಟಿ ಮೀಟಿಂಗ್ ನಲ್ಲೂ ಟಿಕೆಟ್ ಬೇಡ  ಹೇಳಿದ್ದೇನೆ ಎಂದು ದಾವಣಗೆರೆಯಲ್ಲಿ ಶಾಸಕ ಎಸ್.ಎ.ರವೀಂದ್ರನಾಥ್ ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿ ಡಿಫೆರೆಂಟ್ ಪಾಲಿಟಿಕ್ಸ್: ಬಿಜೆಪಿ ಸೈಲೆಂಟ್‌ - ಕಾಂಗ್ರೆಸ್‌ ವೈಲೆಂಟ್‌

ಸಿಎಂ ಬೊಮ್ಮಾಯಿದಾವಣಗೆರೆ ಉತ್ತರಕ್ಕೆ ಎಸ್.ಎ.ರವೀಂದ್ರನಾಥ್ ಅಭ್ಯರ್ಥಿ ಎಂದಿದ್ದರು.  ನನಗೆ ಟಿಕೆಟ್ ಬೇಡ, ಹೊಸಬರಿಗೆ ಅವಕಾಶ ಕೊಡಿ ಎಂದು ರವೀಂದ್ರನಾಥ್ ಹೇಳಿದ್ದಾರೆ. ಅಭಿಮಾನಿಗಳು ಒತ್ತಾಯ ಮಾಡಿದರೆ ನಾನು ಚೆನ್ನಾಗಿರಬಾರದು ಎಂದು ಅವರು ಅಂದುಕೊಂಡಿದ್ದಾರೆ. ಯಡಿಯೂರಪ್ಪ ನವರು ಸ್ವಯಂ ನಿವೃತ್ತಿ ಘೋಷಣೆ ಮಾಡಿಕೊಂಡಿದ್ದಾರೆ. ಅವರಾದ ನಂತರ ಹಿರಿಯ ಅಂದ್ರೆ ನಾನೇ ಇರೋದು.ನಾನು ಕೂಡ ನಿವೃತ್ತಿ ಘೋಷಣೆ ಮಾಡಿಕೊಂಡಿದ್ದೇ‌ನೆ. ಮುಂದೆ ಪಕ್ಷ ಯಾರಿಗೆ ಟಿಕೇಟ್ ನೀಡುತ್ತೋ ಅವರನ್ನು ಗೆಲ್ಲಿಸುವ ಪ್ರಯತ್ನ ಮಾಡುತ್ತೇವೆ. ಬೆಂಬಲಿಗರು ಬಂದಿದ್ದಾರೆ ಅವರಿಗೂ ಕೂಡ ಈಗಾಗಲೇ ಹೇಳಿದ್ದೇನೆ ಎಂದು ಶಾಸಕ ಎಸ್ ಎ ರವೀಂದ್ರನಾಥ್ ಸ್ಪಷ್ಟಪಡಿಸಿದ್ದಾರೆ.

Latest Videos
Follow Us:
Download App:
  • android
  • ios