Asianet Suvarna News Asianet Suvarna News

ಮೂವರು ಬಿಜೆಪಿ ಹಾಲಿ ಸಂಸದರು, ಹಲವು ಶಾಸಕರು ಸಂಪರ್ಕದಲ್ಲಿದ್ದಾರೆ: ಡಿಕೆಶಿ ಬಾಂಬ್‌

ಕಾಂಗ್ರೆಸ್ ಪಕ್ಷಕ್ಕೆ ಸೇರಲು ಬಹಳ ನಾಯಕರು ಮುಂದಾಗಿದ್ದಾರೆ. ನಿನ್ನೆ ಕೂಡ ಬಿಜೆಪಿ ಹಾಗೂ ಜೆಡಿಎಸ್‌ನಿಂದ ಮಾಜಿ ಶಾಸಕರು ಕಾಂಗ್ರೆಸ್ ಸೇರಿದ್ದಾರೆ. ಇನ್ನು ಮೂವರು ಹಾಲಿ ಸಂಸದರು, ಅನೇಕ ಹಾಲಿ ಶಾಸಕರು ಪಕ್ಷಕ್ಕೆ ಸೇರಲು ಮುಂದಾಗಿದ್ದು, ನಾನು ಅವರ ಹೆಸರು ಬಹಿರಂಗಪಡಿಸಲು ಬಯಸುವುದಿಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌ 

Three BJP MPs and many MLAs are in Touch Says DCM DK Shivakumar grg
Author
First Published Mar 14, 2024, 10:50 PM IST

ಕಲಬುರಗಿ(ಮಾ.14):  ಬಿಜೆಪಿಯ ಮೂವರು ಹಾಲಿ ಸಂಸದರು, ಹಲವು ಶಾಸಕರು ಕಾಂಗ್ರೆಸ್‌ ಸೇರಲು ಬಯಸಿದ್ದಾರೆ. ಆದರೆ, ಈಗಲೇ ಅವರ ಹೆಸರು ಬಹಿರಂಗ ಪಡಿಸಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. 

ಕಲಬುರಗಿ ಸುದ್ದಿಗೋಷ್ಠಿಯಲ್ಲಿ ಬೇರೆ ಪಕ್ಷದ ನಾಯಕರಿಗೆ ಕಾಂಗ್ರೆಸ್‌ ಆಹ್ವಾನ ನೀಡಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸೇರಲು ಬಹಳ ನಾಯಕರು ಮುಂದಾಗಿದ್ದಾರೆ. ನಿನ್ನೆ ಕೂಡ ಬಿಜೆಪಿ ಹಾಗೂ ಜೆಡಿಎಸ್‌ನಿಂದ ಮಾಜಿ ಶಾಸಕರು ಕಾಂಗ್ರೆಸ್ ಸೇರಿದ್ದಾರೆ. ಇನ್ನು ಮೂವರು ಹಾಲಿ ಸಂಸದರು, ಅನೇಕ ಹಾಲಿ ಶಾಸಕರು ಪಕ್ಷಕ್ಕೆ ಸೇರಲು ಮುಂದಾಗಿದ್ದು, ನಾನು ಅವರ ಹೆಸರು ಬಹಿರಂಗಪಡಿಸಲು ಬಯಸುವುದಿಲ್ಲ ಎಂದರು.

ಮುಂದಿನ 4 ತಿಂಗಳಿನಲ್ಲಿ ಕಲ್ಯಾಣ ಸಾರಿಗೆಗೆ 485 ಹೊಸ ಬಸ್: ಸಚಿವ ರಾಮಲಿಂಗಾರೆಡ್ಡಿ

ಡಾ. ಮಂಜುನಾಥ್‌ ಬಗ್ಗೆ ಗೌರವವಿದೆ:

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಡಾ. ಮಂಜುನಾಥ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಪ್ರತಿಕ್ರಿಯಿಸಿ, ಡಾಕ್ಟರ್‌ ಬಗ್ಗೆ ಅಪಾರ ಗೌರವವಿದೆ. ಅವರ ಸ್ಪರ್ಧೆಯನ್ನು ಸ್ವಾಗತಿಸುತ್ತೆನೆ. ಜೊತೆಗೆ ಕುಮಾರಸ್ವಾಮಿ, ದೇವೇಗೌಡರ ಮೇಲೂ ಗೌರವವಿದೆ. ದೇವೇಗೌಡರ ವಿರುದ್ಧ ನಾನು ನಿಂತಿದ್ದೆ, ಒಬ್ಬ ಹೆಣ್ಣು ಮಗಳನ್ನು ನಿಲ್ಲಿಸಿ ಗೆಲ್ಲಿಸಿದ್ದೇನೆ. ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧೆ ಮಾಡಿ ಗೆದ್ದಿದ್ದೇನೆ, ಅವರ ಧರ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರ ವಿರುದ್ಧ ನನ್ನ ಸಹೋದರನನ್ನು ನಿಲ್ಲಿಸಿ ಗೆಲ್ಲಿಸಿದ್ದೇವೆ. ತಾತ, ಮೊಮ್ಮಗನ ಚುನಾವಣೆಗಳನ್ನೆಲ್ಲ ನೋಡಿದ್ದೇವೆ ಎಂದರು.

20ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುತ್ತೇವೆ:

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎಷ್ಟು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎಂಬ ಪ್ರಶ್ನೆಗೆ, ನಾವು 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುತ್ತೇವೆ. ಬಿಜೆಪಿ ಪಕ್ಷದಿಂದ 10ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡುತ್ತಿದ್ದಾರೆ. ಕಾರಣ ಆ ಕ್ಷೇತ್ರಗಳಲ್ಲಿ ಆಡಳಿತ ವಿರೋಧಿ ಅಲೆ ಇದೆ ಎಂದು ತಿಳಿಸಿದರು.

Follow Us:
Download App:
  • android
  • ios