ಸುಮಲತಾ ಅವರು ಮಂಡ್ಯದ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ ಎಂಬುದಾಗಿ ಹೇಳಿದ್ದು ಆಗ ಸತ್ಯ ಆಗಿತ್ತು. ಈಗ ಜೆಡಿಎಸ್‌ಗೆ ಬಿಟ್ಟು ಕೊಡುವ ಬಗ್ಗೆ ನಿರ್ಧಾರವಾಗಿದೆ. ಇದರಲ್ಲಿ ಸುಮಲತಾ ಅವರ ಪಾತ್ರ ಬಹಳ ದೊಡ್ಡದಿದೆ ಎಂದ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್

ಬೆಂಗಳೂರು(ಮಾ.24):  ಹಾಸನ, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ ಬಿಟ್ಟು ಕೊಡುವ ತೀರ್ಮಾನವಾಗಿದೆ ಎಂದು ಸ್ಪಷ್ಟವಾಗಿ ತಿಳಿಸಿರುವ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್, ಮಂಡ್ಯದ ಸಂಸದೆ ಸುಮಲತಾ ಅಂಬರೀಷ್ ಅವರ ರಾಜಕೀಯ ಭವಿಷ್ಯ ಉತ್ತಮವಾಗಿರಲಿದೆ ಎಂದು ಹೇಳಿದ್ದಾರೆ.

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸುಮಲತಾ ಅವರು ಮಂಡ್ಯದ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ ಎಂಬುದಾಗಿ ಹೇಳಿದ್ದು ಆಗ ಸತ್ಯ ಆಗಿತ್ತು. ಈಗ ಜೆಡಿಎಸ್‌ಗೆ ಬಿಟ್ಟು ಕೊಡುವ ಬಗ್ಗೆ ನಿರ್ಧಾರವಾಗಿದೆ. ಇದರಲ್ಲಿ ಸುಮಲತಾ ಅವರ ಪಾತ್ರ ಬಹಳ ದೊಡ್ಡದಿದೆ ಎಂದರು.

ಕೋಲಾರ ಕ್ಷೇತ್ರ ಅಧಿಕೃತವಾಗಿ ಜೆಡಿಎಸ್‌ಗೆ ಬಿಟ್ಟುಕೊಟ್ಟ ಬಿಜೆಪಿ; ದೊಡ್ಡಗೌಡ್ರಿಗೆ ಗುನ್ನಾ ಇಟ್ಟ ಪ್ರೀತಂಗೌಡರ ಶಿಷ್ಯ!

ಪ್ರಶ್ನೆಯೊಂದಕ್ಕೆ ಉತ್ತರಿಸಿದ ರಾಧಾ ಮೋಹನ್ ದಾಸ್ ಅಗರ್‌ವಾಲ್, ಅವರು, ಕೋಲಾರದ ಹಾಲಿ ಸಂಸದ ಮುನಿಸ್ವಾಮಿ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಅತ್ಯಂತ ಸಮರ್ಪಣಾ ಭಾವದ ವ್ಯಕ್ತಿ. ಅವರ ರಾಜಕೀಯ ಭವಿಷ್ಯದ ಬಗ್ಗೆಯೂ ಯೋಚನೆ ಮಾಡುತ್ತೇವೆ ಎಂದರು.

ಮತ್ತೊಂದು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆ ಪ್ರಚಾರ ಆರಂಭ ಆದ ಮೇಲೆ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಒಟ್ಟಾಗಿ ಕೆಲಸ ಮಾಡುತ್ತಾರೆ. ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರು ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಇದ್ದಾರೆ ಎಂದು ಹೇಳಿದರು.

ಪ್ರಧಾನಿ ಮೋದಿ ಅವರು ಕರ್ನಾಟಕವನ್ನು ಬಹಳ ಪ್ರೀತಿಸುತ್ತಾರೆ. ಈಗಾಗಲೇ ಎರಡು ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮತ್ತೆ ಮತ್ತೆ ಬರಬೇಕುಎಂಬ ಮನವಿ ಮಾಡುತ್ತೇವೆ. ಕೇವಲ ಎರಡು ದಿನದ ತಯಾರಿಯಲ್ಲಿ ಬಹಳ ಅದ್ಭುತವಾಗಿ ಮೋದಿ ಕಾರ್ಯಕ್ರಮ ನಡೆದಿದೆ. ಇನ್ನೂ ಆರು ಬಾರಿ ಮೋದಿ ರಾಜ್ಯಕ್ಕೆ ಬರುವ ನಿರೀಕ್ಷೆ ಇದೆ ಎಂದರು.

ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಇನ್ನೂ ಫೈನಲ್ ಆಗಿಲ್ಲ: ಸಂಸದೆ ಸುಮಲತಾ

ಎಚ್‌ಡಿಕೆ, ಪ್ರಜ್ವಲ್, ಮಲ್ಲೇಶ್ ಹೆಸರು ಇಂದು ಘೋಷಣೆ?

ಬೆಂಗಳೂರು: ಜೆಡಿಎಸ್‌ನ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಈ ಭಾನುವಾರ ಘೋಷಣೆಯಾಗುವ ಸಾಧ್ಯತೆಯಿದೆ. ಮಂಡ್ಯದಿಂದ ಎಚ್.ಡಿ.ಕುಮಾರಸ್ವಾಮಿ, ಕೋಲಾರದಿಂದ ಮಲ್ಲೇಶ್‌ ಬಾಬು ಹಾಗೂ ಹಾಸನದಿಂದ ಪ್ರಜ್ವಲ್ ರೇವಣ್ಣ ಹೆಸರು ಪ್ರಕಟವಾಗಬಹುದು. 

ಎಲ್ಲರಿಗಿಂತ ಮೊದಲೇ ತಿಳಿಯುವುದು ಇಲ್ಲೇ!

ಜೆಡಿಎಸ್‌ಗೆ ಬಿಜೆಪಿಯು ಮಂಡ್ಯ, ಹಾಸನ, ಕೋಲಾರ ಕ್ಷೇತ್ರ ಬಿಟ್ಟುಕೊಡಲಿದೆ ಎಂದು 'ಕನ್ನಡಪ್ರಭ' ಮಾ.14ರಂದೇ ವರದಿ ಮಾಡಿತ್ತು.