ರಾಯಚೂರು ಜಿಲ್ಲೆಯ ಮೂರು ಶಾಸಕರಿಗೆ ಒಲಿದು ಬಂದ ನಿಗಮ ಅಧ್ಯಕ್ಷ ಪಟ್ಟ: ಸಿದ್ದು ಬಂಪರ್ ಗಿಫ್ಟ್!
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳು ಕಳೆಯುತ್ತಿದೆ. ಆದರೆ ವಿವಿಧ ಕಾರಣಗಳಿಂದ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಪ್ರಕ್ರಿಯೆಯನ್ನು ಮುಂದೂಡುತ್ತಾ ಬಂದಿದ್ದ ಕಾಂಗ್ರೆಸ್ ಹೈಕಮಾಂಡ್ ಈಗ ನಿಗಮಾ ಮಂಡಳಿ ಅಧ್ಯಕ್ಷರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ವರದಿ: ಜಗನ್ನಾಥ ಪೂಜಾರ್, ಜಿಲ್ಲಾ ವರದಿಗಾರರು, ಏಷ್ಯಾನೆಟ್ ಸುವರ್ಣನ್ಯೂಸ್
ರಾಯಚೂರು (ಜ.26): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳು ಕಳೆಯುತ್ತಿದೆ. ಆದರೆ ವಿವಿಧ ಕಾರಣಗಳಿಂದ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಪ್ರಕ್ರಿಯೆಯನ್ನು ಮುಂದೂಡುತ್ತಾ ಬಂದಿದ್ದ ಕಾಂಗ್ರೆಸ್ ಹೈಕಮಾಂಡ್ ಈಗ ನಿಗಮಾ ಮಂಡಳಿ ಅಧ್ಯಕ್ಷರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಯಚೂರು ಜಿಲ್ಲೆಯ 7 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಆ ನಾಲ್ಕು ಶಾಸಕರಲ್ಲಿ ಈಗ ಮೂವರಿಗೆ ಸಿಎಂ ಸಿದ್ದರಾಮಯ್ಯ ನಿಗಮ ಮಂಡಳಿ ಅಧ್ಯಕ್ಷ ನೀಡಿ ಬಿಸಿಲುನಾಡು ಕೈ ನಾಯಕರಿಗೆ ಖುಷ್ ಮಾಡಿದ್ದಾರೆ.
ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಗೆ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿಗೆ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ ಮಂಡಳಿ ನೀಡಿದೆ. ಅದರಲ್ಲೂ ಮಸ್ಕಿ ಶಾಸಕ ಆರ್. ಬಸನಗೌಡ ತುರುವಿಹಾಳರಿಗೆ ಖಾದಿ ಮತ್ತು ಗ್ರಾಮೋದ್ಯೋಗ ನಿಗಮ ಮಂಡಳಿ ಅಧ್ಯಕ್ಷ ನೀಡಿ ಇಡೀ ಮಸ್ಕಿ ಕ್ಷೇತ್ರದ ತುಂಬಾ ಅಚ್ಚರಿ ಮೂಡಿಸಿದೆ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪಾಲಿಗೆ ಮಸ್ಕಿ ವಿಧಾನಸಭಾ ಕ್ಷೇತ್ರ ಅತ್ಯಂತ ಮುಖ್ಯವಾಗಿದೆ.
ಮುಧೋಳ ಕ್ಷೇತ್ರದ ಜನತೆಯ ಋುಣ ಮರೆಯಲಾರೆ: ಮಾಜಿ ಡಿಸಿಎಂ ಗೋವಿಂದ ಕಾರಜೋಳ
ಕಾಂಗ್ರೆಸ್ ನಿಂದ ಗೆದ್ದ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿ ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿ ಸೇರಿದ್ರು. ಆ ವೇಳೆ ಬಿಜೆಪಿಯಿಂದ ಸೋತ ಅಭ್ಯರ್ಥಿಯಾದ ಬಸನಗೌಡ ತುರ್ವಿಹಾಳಗೆ ಕಾಂಗ್ರೆಸ್ ಸ್ವಾಗತಿಸಿ ಉಪ ಚುನಾವಣೆ ಟಿಕೆಟ್ ನೀಡಿತ್ತು. ಮಸ್ಕಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸಂಘಟನೆ ಸಾಬೀತುಪಡಿಸಿತ್ತು. ಆ ಬಳಿಕ 2023ರ ವಿಧಾನಸಭಾ ಚುನಾವಣೆಯಲ್ಲಿ ಸಹ ಕಾಂಗ್ರೆಸ್ ಆರ್. ಬಸನಗೌಡ ತುರ್ವಿಹಾಳಗೆ ಟಿಕೆಟ್ ನೀಡಿದ್ರು. ಹೈಕಮಾಂಡ್ ಆಶಯದಂತೆ ಮತ್ತೆ ಮಸ್ಕಿಯಲ್ಲಿ ಕಾಂಗ್ರೆಸ್ ನಿಂದ ಆರ್. ಬಸನಗೌಡ ತುರ್ವಿಹಾಳ ಗೆಲುವು ಸಾಧಿಸಿದರು.
ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಈಗ ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಜವಾಬ್ದಾರಿ ಹೆಚ್ಚು ಮಾಡಿದೆ. ವಿಧಾನಸಭಾ ಚುನಾವಣೆ ವೇಳೆ ಮಸ್ಕಿಗೆ ಬಂದ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದರೆ ಶಾಸಕರಿಗೆ ಸೂಕ್ತ ಸ್ಥಾನಮಾನ ನೀಡುವ ಭರವಸೆಯನ್ನು ನೀಡಿದ್ರು. ಅದರಂತೆ ಈಗ ಎರಡನೇ ಬಾರಿ ಗೆದ್ದ ಆರ್. ಬಸನಗೌಡ ತುರ್ವಿಹಾಳಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡುವ ಮೂಲಕ ಕೊಟ್ಟ ಮಾತನ್ನು ಕಾಂಗ್ರೆಸ್ ಪಕ್ಷ ಉಳಿಸಿಕೊಂಡಿದೆ.
ಕಾಂಗ್ರೆಸ್ ಅಭಿವೃದ್ಧಿ ರಾಜಕಾರಣದ ವಿರೋಧಿ ಅಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ
ಬಸನಗೌಡ ತುರ್ವಿಹಾಳ ಮನದಾಳದ ಮಾತು: ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ನನ್ನ ಮೇಲೆ ವಿಶ್ವಾಸವನ್ನು ಇಟ್ಟು ನನಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಿದ್ದಾರೆ. ಆ ಸ್ಥಾನವನ್ನ ಉಳಿಸಿಕೊಂಡು ಪಕ್ಷಕ್ಕಾಗಿ ಸೇವೆ ಸಲ್ಲಿಸುತ್ತೇನೆ.