ಲೋಕಸಭೆ ಚುನಾವಣೆ 2024: ಮಂಡ್ಯ ಜೆಡಿಎಸ್‌ಗೆ ಸಿಕ್ಕರೆ ಇವರಿಗೆ ಟಿಕೆಟ್ ಫಿಕ್ಸ್‌?

ಚುನಾವಣೆ ಬಳಿಕ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗುವ ಬಗ್ಗೆ ಬಿಜೆಪಿ ವರಿಷ್ಠರು ಆಶ್ವಾಸನೆ ನೀಡಿದರೆ ಕುಮಾರಸ್ವಾಮಿ ಅವರೇ ಮಂಡ್ಯದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಇಲ್ಲದಿದ್ದರೆ ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು ಅಥವಾ ಡಿ.ಸಿ. ತಮ್ಮಣ್ಣರನ್ನು ಅಭ್ಯರ್ಥಿಯನ್ನಾಗಿಸಬಹುದು ಎನ್ನಲಾಗಿದೆ.

Ticket to DC Thammanna or CS Puttaraju If Mandya gets JDS grg

ಪ್ರಭುಸ್ವಾಮಿ ನಟೇಕರ್ 

ಬೆಂಗಳೂರು(ಮಾ.09):  ಲೋಕಸಭಾ ಚುನಾವಣೆ ಸಮರದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮಂಡ್ಯ ಕ್ಷೇತ್ರವು ಅಂತಿಮವಾಗಿ ದಳಪತಿಗಳ ಪಾಲಾಗುವುದು ಬಹುತೇಕ ಖಚಿತ ಎನ್ನಲಾಗಿದೆ. ಕಳೆದುಕೊಂಡಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ತನ್ನ ಪಾರುಪತ್ಯ ಸಾಧಿಸಲು ಜೆಡಿಎಸ್ ಹವಣಿಸುತ್ತಿದೆ. ಬಿಜೆಪಿ ಹೈಕಮಾಂಡ್ ಮನವೊಲಿಸಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಕ್ಷೇತ್ರವನ್ನು ತಮ್ಮ ಪಕ್ಷಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.

ಚುನಾವಣೆ ಬಳಿಕ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗುವ ಬಗ್ಗೆ ಬಿಜೆಪಿ ವರಿಷ್ಠರು ಆಶ್ವಾಸನೆ ನೀಡಿದರೆ ಕುಮಾರಸ್ವಾಮಿ ಅವರೇ ಮಂಡ್ಯದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಇಲ್ಲದಿದ್ದರೆ ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು ಅಥವಾ ಡಿ.ಸಿ. ತಮ್ಮಣ್ಣರನ್ನು ಅಭ್ಯರ್ಥಿಯನ್ನಾಗಿಸಬಹುದು ಎನ್ನಲಾಗಿದೆ.

ದೇವರ ಆಶೀರ್ವಾದವಿದ್ದರೆ ಮಂಡ್ಯದಲ್ಲಿ ಮನೆ ಕಟ್ಟುವೆ: ಸುಮಲತಾ ಅಂಬರೀಶ್

ಹಾಲಿ ಸಂಸದೆ ಸುಮಲತಾ ಅವರು ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯದಿಂದಲೇ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದರೂ ಅವರಿಗೆಟಿಕೆಟ್ ಲಭಿಸುವುದು ಅನುಮಾನ. ಮಂಡ್ಯ ಬಗ್ಗೆ ಬಿಜೆಪಿ ವರಿಷ್ಠರ ಜತೆ ಕುಮಾರ ಸ್ವಾಮಿ ಗಂಭೀರವಾಗಿ ಸಮಾಲೋಚನೆ ನಡೆಸಿ ಬಹುತೇಕ ಅಂತಿಮಗೊಳಿಸಿದ್ದಾರೆ. ಮುಂದಿನ ವಾರ ದೆಹಲಿಗೆ ತೆರಳುವ ಅವರು ಅಲ್ಲಿಯೇ ಅಂತಿಮ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದ್ದರೂ ರಾಜ್ಯದ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ. ಮುಂದಿನ ಪಟ್ಟಿಯಲ್ಲಿ ಪ್ರಕಟಿಸುವ ನಿರೀಕ್ಷೆ ಇದೆ. ಅಷ್ಟರ ವೇಳೆಗೆ ಮೈತ್ರಿ ಸ್ಥಾನಗಳನ್ನು ಅಂತಿಮಗೊಳಿಸಬೇಕಾಗಿದೆ. 

ಬಿಜೆಪಿ-ಜೆಡಿಎಸ್‌ ಮೈತ್ರಿ ಟಿಕೆಟ್ ನೂರಕ್ಕೆ ನೂರರಷ್ಟು ನನಗೇ ಸಿಗೋದು ಖಚಿತ: ಸಂಸದೆ ಸುಮಲತಾ

ಅಭ್ಯರ್ಥಿ ಬಗ್ಗೆ ಶೀಘ್ರದಲ್ಲಿಯೇ ಅಂತಿಮ?: 

ಮಂಡ್ಯ ಜೆಡಿಎಸ್‌ಗೆ ಸಿಗಲಿದೆ ಎಂಬುದು ಬಹುತೇಕ ಖಚಿತವಾಗಿರುವ ಕಾರಣ ಪಕ್ಷದಲ್ಲಿ ಪೈಪೋಟಿಯೂ ಆರಂಭವಾ ಗಿದೆ. ಮಾಜಿ ಶಾಸಕರಾದ ಪುಟ್ಟರಾಜು ಮತ್ತು ತಮ್ಮಣ್ಣ ನಡುವೆ ಟಿಕೆಟ್‌ ಗಾಗಿ ಪೈಪೋಟಿ ನಡೆಯುತ್ತಿದೆ. ಇವರಿಬ್ಬರಲ್ಲಿ ಒಬ್ಬರನ್ನು ಕುಮಾರಸ್ವಾಮಿ ಅವರು ಅಂತಿಮಗೊಳಿಸಲಿದ್ದಾರೆ. ಮಂಡ್ಯ ಜಿಲ್ಲೆಯ ಮುಖಂಡರ ಸಭೆಯಲ್ಲಿಯೂ ಈ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಈ ನಡುವೆ, ಇತ್ತೀಚೆಗೆ ನಡೆದ ಸಭೆಯಲ್ಲಿ ಕುಮಾರ ಸ್ವಾಮಿ ಚುನಾವಣೆಗೆ ಸ್ಪರ್ಧಿಸುವ ಒತ್ತಾಯವೂ ಕೇಳಿ ಬಂದಿವೆ. ಆದರೆ, ಚುನಾವಣೆ ಬಳಿಕ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನ ಲಭಿಸುವ ಬಗ್ಗೆ ಬಿಜೆಪಿ ವರಿಷ್ಠರು ಆಶ್ವಾಸನೆ ನೀಡಿದರೆ ಮಾತ್ರ ಕುಮಾರಸ್ವಾಮಿ ಸ್ಪರ್ಧಿಸುವ ಸಾಧ್ಯತೆ ಇದೆ.

Latest Videos
Follow Us:
Download App:
  • android
  • ios