ಕೋಲ್ಕತ್ತಾ, (ನ.27): ಪಶ್ಚಿಮ ಬಂಗಾಳದಲ್ಲಿ ಮುಂದಿನ ಬಾರಿ ಬಿಜೆಪಿ ಅಧಿಕಾರ ರಚಿಸುವುದು ಖಚಿತ ಎಂದು ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಅಮಿತ್ ಶಾ ಅವರು ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಮುಂದಿನ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದ್ದಾರೆ. 

ಇದರ ಮಧ್ಯೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಸಂಪುಟದ ಸಚಿವರೊಬ್ಬರು ರಾಜೀನಾಮೆ ನೀಡಿದ್ದು, ದೀದಿಗೆ ಬಿಗ್ ಶಾಕ್ ಆದಂತಾಗಿದೆ.

ದಿಲ್ಲಿಯಿಂದ ಅಮಿತ್ ಶಾ ಫೋನ್ ಕಾಲ್: ಸಿಎಂ ಬಿಎಸ್‌ವೈ ಫುಲ್ ಶಾಕ್...!

ತೃಣಮೂಲ ಪಕ್ಷದ ಜತೆ ಮುನಿಸಿಕೊಂಡಿದ್ದ ಟಿಎಂಸಿ ಹಿರಿಯ ನಾಯಕ ಸುವೇಂದು ಅಧಿಕಾರಿ ತಮ್ಮ ಸಾರಿಗೆ ಖಾತೆ ಸಚಿವ ಸ್ಥಾನಕ್ಕೆ ಇಂದು (ಶುಕ್ರವಾರ) ರಾಜೀನಾಮೆ ನೀಡಿದ್ದಾರೆ.

ಮಮತಾ ಬ್ಯಾನರ್ಜಿ ಹಾಗೂ ರಾಜ್ಯಪಾಲ ಜಗ್​ದೀಪ್​ ಧನ್​ಖಾರ್ ಅವರಿಗೆ ಫ್ಯಾಕ್ಸ್ ಮೂಲಕ ತಮ್ಮ ರಾಜೀನಾಮೆ ಪತ್ರವನ್ನ ಕಳುಹಿಸಿರುವ ಅಧಿಕಾರಿ, ಪತ್ರದಲ್ಲಿ ' ನಾನು ಸಾರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಕೂಡಲೇ ನನ್ನ ರಾಜೀನಾಮೆಯನ್ನು ಸ್ವೀಕರ ಮಾಡಬೇಕೆಂದು ವಿನಂತಿ ಮಾಡಿಕೊಂಡಿದ್ದೇನೆ ಎಂದು ಸ್ವತಃ ಸುವೇಂದು ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಮತ್ತೊಂದೆಡೆ ಬಿಜೆಪಿಗೆ ತೊಡೆತಟ್ಟಿರುವ ಮಮತಾ, ಕೇಸರಿ ಪಕ್ಷ ನನ್ನನ್ನು ಬಂಧಿಸಿದರೂ ಮುಂಬರುವ ಚುನಾವಣೆಯಲ್ಲಿ ಜೈಲಿನಿಂದಲೇ ತಾವು ಟಿಎಂಸಿಯನ್ನು ಗೆಲ್ಲಿಸುವುದಾಗಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.