Asianet Suvarna News Asianet Suvarna News

ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರೋ ಸಚಿವರ ಆರೋಗ್ಯ ಸ್ಥಿತಿ ಚಿಂತಾಜನಕ

ಕೊರೋನಾ ಸೋಂಕಿಗೆ ತುತ್ತಾಗಿರುವ ಸಚಿವರೊಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್‌ ಮೂಲಕ ತಿಳಿಸಿದೆ.

TN Minister Doraikkannu Health critical for Covid-19 rbj
Author
Bengaluru, First Published Oct 31, 2020, 5:29 PM IST

ಚೆನ್ನೈ, (ಅ.31): ಕೊರೋನಾ ವೈರಸ್‌ ತಗುಲಿರುವುದರಿಂದ ಗೆ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಕೃಷಿ ಸಚಿವ ಆರ್ ದೊರೈಕಣ್ಣಾ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಜೀವ ರಕ್ಷಕ ಅಳವಡಿಸಲಾಗಿದೆ ಎಂದು ಕಾವೇರಿ ಆಸ್ಪತ್ರೆ ಶನಿವಾರ ತಿಳಿಸಿದೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 72 ವರ್ಷದ ದೊರೈಕಣ್ಣಾ ಅವರು ಅಕ್ಟೋಬರ್ 13ರಂದು ಕೋವಿಡ್-19 ಪರೀಕ್ಷೆ ಮಾಡಿಸಿದ್ದರು. ವರದಿ ಪಾಸಿಟಿವ್ ಬಂದಿದ್ದರಿಂದ ಚಿಕಿತ್ಸೆಗಾಗಿ ನಗರದ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು.

ಕೊರೋನಾದಿಂದ ಚೇತರಿಸಿಕೊಳ್ಳುತ್ತಿದ್ದ ಮಾಜಿ ಸಿಎಂ ನಿಧನ

ಗರಿಷ್ಠ ಜೀವ ರಕ್ಷಕದ ಹೊರತಾಗಿಯೂ ಸಚಿವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯು ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಅರವಿಂದನ್ ಸೆಲ್ವರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow Us:
Download App:
  • android
  • ios