ಕೇಂದ್ರ ಸರ್ಕಾರ ಒಂಭತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ವತಿಯಿಂದ ಏಳು ತಂಡಗಳಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದ್ದಾರೆ.
ಬೆಂಗಳೂರು (ಜೂ.18): ಕೇಂದ್ರ ಸರ್ಕಾರ ಒಂಭತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ವತಿಯಿಂದ ಏಳು ತಂಡಗಳಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದ್ದಾರೆ.
ಶನಿವಾರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ತಿಂಗಳು 22ರಂದು ಪ್ರವಾಸ ಆರಂಭವಾಗಲಿದ್ದು, 26ರ ವೇಳೆಗೆ ಮುಕ್ತಾಯವಾಗಲಿದೆ. 26ರಿಂದ ಜು.5ರವರೆಗೆ ಮನೆಮನೆಗೆ ತೆರಳಿ ‘ಮನೆ ಮನೆಗೆ ಮೋದಿ’ ಕರಪತ್ರ ವಿತರಿಸಲಾಗುವುದು. ಮೋದಿ ಸರ್ಕಾರದ ಸಾಧನೆಗಳನ್ನು 50 ಲಕ್ಷ ಮನೆಗಳಿಗೆ ತಲುಪಿಸುತ್ತೇವೆ ಎಂದು ಹೇಳಿದರು.
ಹಿಂದೂ ಧರ್ಮ ಕಡೆಗಣಿಸುತ್ತಿರುವ ಕಾಂಗ್ರೆಸ್ ಸರ್ಕಾರ: ಶಾಸಕ ಆರಗ ಜ್ಞಾನೇಂದ್ರ
7 ತಂಡಗಳು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ತಂಡದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ, ಮಾಧುಸ್ವಾಮಿ, ಕೇಂದ್ರ ಸಚಿವ ನಾರಾಯಣಸ್ವಾಮಿ, ಸಂಸದರಾದ ಪ್ರತಾಪ ಸಿಂಹ, ಪಿ.ಸಿ.ಮೋಹನ್, ತೇಜಸ್ವಿಸೂರ್ಯ, ಜಿ.ಎಸ್.ಬಸವರಾಜು, ಮುಖಂಡರಾದ ಮುದ್ದಹನುಮೇಗೌಡ, ಎಂ.ಪಿ.ರೇಣುಕಾಚಾರ್ಯ, ಮಾಧುಸ್ವಾಮಿ ಇರಲಿದ್ದಾರೆ. ಈ ತಂಡವು ದಾವಣಗೆರೆ, ಚಿತ್ರದುರ್ಗ, ಮಧುಗಿರಿ, ತುಮಕೂರು, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಸಂಘಟನಾತ್ಮಕ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ ಎಂದು ವಿವರಿಸಿದರು.
ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ನೇತೃತ್ವದ ತಂಡದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಮಾಜಿ ಸಚಿವ ಶ್ರೀರಾಮುಲು, ಮುಖಂಡರಾದ ಎಂ.ಪಿ.ದೇವೇಂದ್ರಪ್ಪ, ರಾಜೂಗೌಡ, ಪಿ.ವಿ.ನಾಯಕ್, ಕರಡಿ ಸಂಗಣ್ಣ, ಎಂ.ಪಿ.ಪ್ರಕಾಶ್, ಎಂ.ಪಿ.ಸುಮಾ ವಿಜಯ್ ಇರಲಿದ್ದಾರೆ. ಈ ತಂಡವು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲಾ ಪ್ರವಾಸ ಕೈಗೊಳ್ಳಲಿದೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ತಂಡದಲ್ಲಿ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಬೈರತಿ ಬಸವರಾಜು, ಸಂಸದ ರಮೇಶ್ ಜಿಗಜಿಣಗಿ, ಮಂಗಳಾ ಅಂಗಡಿ, ಬಸನಗೌಡ ಪಾಟೀಲ್ ಯತ್ನಾಳ್, ಗದ್ದಿಗೌಡರ, ವೀರಣ್ಣ ಚರಂತಿಮಠ, ರಮೇಶ್ ಕತ್ತಿ ಭಾಗಿಯಾಗಲಿದ್ದಾರೆ. ತಂಡವು ವಿಜಯಪುರ, ಬಾಗಲಕೋಟೆ, ಬೆಳಗಾವಿ ನಗರ, ಗ್ರಾಮಾಂತರ ಮತ್ತು ಚಿಕ್ಕೋಡಿಯಲ್ಲಿ ಪ್ರವಾಸ ಮಾಡಲಿದೆ.
ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಮತ್ತು ಮಾಜಿ ಸಚಿವ ವಿ.ಸೋಮಣ್ಣ ನೇತೃತ್ವದ ಮತ್ತೊಂದು ತಂಡದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಗೋಪಾಲಯ್ಯ, ಮುಖಂಡರಾದ ಮಲ್ಲಿಕಾರ್ಜುನಪ್ಪ, ವಿಜಯಶಂಕರ್, ಶ್ರೀನಿವಾಸ ಪ್ರಸಾದ್, ನಿರಂಜನ್, ರಾಮದಾಸ್, ನಾಗೇಂದ್ರ ಇರಲಿದ್ದಾರೆ. ಈ ತಂಡವು ಚಾಮರಾಜನಗರ, ಮೈಸೂರು, ಮೈಸೂರು ಗ್ರಾಮಾಂತರ, ಮಂಡ್ಯ, ರಾಮನಗರದಲ್ಲಿ ಪ್ರವಾಸ ಕೈಗೊಳ್ಳಲಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಶಾಸಕ ಸಿ.ಟಿ.ರವಿ ನೇತೃತ್ವದ ತಂಡದಲ್ಲಿ ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವರಾದ ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಶಿವರಾಮ್ ಹೆಬ್ಬಾರ್, ಮುಖಂಡರಾದ ಬಿ.ವೈ.ವಿಜಯೇಂದ್ರ, ಪ್ರಮೋದ್ ಮಧ್ವರಾಜ್, ದಿನಕರ್ ಶೆಟ್ಟಿ, ಆರಗ ಜ್ಞಾನೇಂದ್ರ, ವೇದವ್ಯಾಸ ಕಾಮತ್ ಇರಲಿದ್ದು, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದೆ.
ಬಿಜೆಪಿ ಮುಖಂಡರಿಂದಲೇ ಪಕ್ಷಕ್ಕೆ ಸೋಲು: ಸಂಸದ ಮುನಿಸ್ವಾಮಿ ಬೇಸರ
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದ ತಂಡದಲ್ಲಿ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬಿ.ಸಿ.ಪಾಟೀಲ್, ಶಂಕರ ಪಾಟೀಲ ಮುನೇನಕೊಪ್ಪ, ಮುಖಂಡರಾದ ಶಿವಕುಮಾರ್ ಉದಾಸಿ, ಅರವಿಂದ ಬೆಲ್ಲದ, ಸಂಗಣ್ಣ ಕರಡಿ, ಶಿವರಾಜ್ ಸಜ್ಜನ್ ಇರಲಿದ್ದಾರೆ. ಈ ತಂಡವು ಹಾವೇರಿ, ಹುಬ್ಬಳ್ಳಿ-ಧಾರವಾಡ, ಧಾರವಾಡ ಗ್ರಾಮಾಂತರ, ಗದಗ, ಕೊಪ್ಪಳದಲ್ಲಿ ಪ್ರವಾಸ ಕೈಗೊಳ್ಳಲಿದೆ.
