ಪುತ್ತೂರಿನಲ್ಲಿ ನಳಿನ್-ಡಿವಿಎಸ್‌ಗೆ ಶ್ರದ್ಧಾಂಜಲಿ ಬ್ಯಾನರ್: ಚಪ್ಪಲಿ ಹಾರ ಹಾಕಿ ಆಕ್ರೋಶ!
ಪುತ್ತೂರು ಮತ್ತು ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲಿನ ಬೆನ್ನಲ್ಲೇ ಕರಾವಳಿಯಲ್ಲಿ ರಾಜ್ಯದ ಬಿಜೆಪಿ ನಾಯಕರ ವಿರುದ್ದ ಅಸಮಾಧಾನ ಸ್ಪೋಟವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಹಾಗೂ ಡಿವಿ ಸದಾನಂದ ಭಾವಚಿತ್ರಕ್ಕೆ ಕಿಡಿಗೇಡಿಗಳು ಶ್ರದ್ಧಾಂಜಲಿ ಬರೆದು ಚಪ್ಪಲಿ ಹಾರ ಹಾಕಿ ಪುತ್ತೂರಿನಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ಮಂಗಳೂರು (ಮೇ.15): ಪುತ್ತೂರು ಮತ್ತು ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲಿನ ಬೆನ್ನಲ್ಲೇ ಕರಾವಳಿಯಲ್ಲಿ ರಾಜ್ಯದ ಬಿಜೆಪಿ ನಾಯಕರ ವಿರುದ್ದ ಅಸಮಾಧಾನ ಸ್ಪೋಟವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಹಾಗೂ ಡಿವಿ ಸದಾನಂದ ಭಾವಚಿತ್ರಕ್ಕೆ ಕಿಡಿಗೇಡಿಗಳು ಶ್ರದ್ಧಾಂಜಲಿ ಬರೆದು ಚಪ್ಪಲಿ ಹಾರ ಹಾಕಿ ಪುತ್ತೂರಿನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ದ.ಕ ಜಿಲ್ಲೆಯ ಪುತ್ತೂರಿನ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಬಿಜೆಪಿ ನಾಯಕರ ಫೋಟೋ ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಬ್ಯಾನರ್ ಹಾಕಲಾಗಿದೆ.
ನಳಿನ್ ಕಟೀಲ್ ಮತ್ತು ಡಿವಿ ಸದಾನಂದ ಗೌಡ ಬ್ಯಾನರ್ ಹಾಕಿ ಶ್ರದ್ಧಾಂಜಲಿ ಹಾಕಲಾಗಿದೆ. ಅಲ್ಲದೇ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿ ಆಕ್ರೋಶಿತರು ಕೃತ್ಯ ಎಸಗಿದ್ದಾರೆ. 'ಬಿಜೆಪಿ ಹೀನಾಯವಾಗಿ ಸೋಲಲು ಕಾರಣರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ' ಅಂತ ಬ್ಯಾನರ್ ನಲ್ಲಿ ಬರೆಯಲಾಗಿದ್ದು, ನೊಂದ ಹಿಂದೂ ಕಾರ್ಯಕರ್ತರ ಹೆಸರಿನಲ್ಲಿ ಬ್ಯಾನರ್ ಅಳವಡಿಕೆ ಮಾಡಿದ್ದಾರೆ. ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಪುತ್ತೂರಿನಲ್ಲಿ ಕಾರ್ಯಕರ್ತರ ತೀವ್ರ ಆಕ್ರೋಶಕ್ಕೆ ತುತ್ತಾಗಿರೋ ಬಿಜೆಪಿ, ಹಿಂದೂ ಕಾರ್ಯಕರ್ತರ ಕಡೆಗಣನೆ ಆರೋಪ ಕೂಡ ಹೊತ್ತಿದೆ.
ಸೋಲಿನ ಕಾರಣ ಗುರುತಿಸಿ ಮುಂದೆ ಸಾಗೋಣ, ಇದು ಮೋದಿ ಸೋಲು ಅಲ್ಲ: ಬೊಮ್ಮಾಯಿ
ಹಿಂದೂ ಮುಖಂಡ ಅರುಣ್ ಪುತ್ತಿಲ ಬಂಡಾಯ ಸ್ಪರ್ಧೆಯ ಕಣವಾಗಿದ್ದ ಪುತ್ತೂರಿನಲ್ಲಿ ಕಾಂಗ್ರೆಸ್ ವಿರುದ್ದ 4 ಸಾವಿರ ಮತಗಳ ಅಂತರದಲ್ಲಿ ಸೆಣೆಸಿ ಸೋತಿದ್ದರು ಹಿಂದೂ ಮುಖಂಡ ಅರುಣ್ ಪುತ್ತಿಲ. ಪುತ್ತೂರಿನಲ್ಲಿ ಮೂರನೇ ಸ್ಥಾನಕ್ಕೆ ಜಾರಿ ಬಿದ್ದಿದ್ದ ಬಿಜೆಪಿ ಸೋಲಿಗೆ ಕಾರಣ ಅಂತ ಇಬ್ಬರು ನಾಯಕರ ವಿರುದ್ದ ಕಿಡಿ ಕಾರಲಾಗಿದೆ. ಪುತ್ತೂರು ಭಾಗದವರೇ ಆದ ನಳಿನ್ ಕಟೀಲ್ ಹಾಗೂ ಡಿವಿಎಸ್ ವಿರುದ್ಧ ಆಕ್ರೋಶ ಸಾಮಾಜಿಕ ತಾಣಗಳಲ್ಲಿ ಸ್ಪೋಟಗೊಂಡಿದ್ದು, ಇದೀಗ ಯಾರೋ ಕಿಡಿಗೇಡಿಗಳು ಬ್ಯಾನರ್ ಅಳವಡಿಸಿದ್ದಾರೆ.