ಬಿಜೆಪಿ ತಮ್ಮ ವಿರೋಧಿಗಳನ್ನು ವ್ಯವಸ್ಥಿತವಾಗಿ ಮುಗಿಸಲು ಸಂಚು ರೂಪಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಂಥವರನ್ನು ಜೈಲಿಗೆ ಕಳುಹಿಸಿದರು. ಹೀಗಾಗಿ, ಮತ ನೀಡುವಾಗ ಯೋಚನೆ ಮಾಡಿ ಮತ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸಲು ಕಾಯುತ್ತಿದ್ದಾರೆ ಎಂದ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ‍ಅಭ್ಯರ್ಥಿ ಎಂ.ಲಕ್ಷ್ಮಣ

ಮೈಸೂರು(ಮಾ.30): ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸಲು ಯತ್ನಿಸಲಾಗುತ್ತಿದೆ ಎಂದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ‍ಅಭ್ಯರ್ಥಿ ಎಂ.ಲಕ್ಷ್ಮಣ ‍ಆರೋಪಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾಂಗ್ರೆಸ್‌ ‍ಭವನದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಬಿಜೆಪಿ ತಮ್ಮ ವಿರೋಧಿಗಳನ್ನು ವ್ಯವಸ್ಥಿತವಾಗಿ ಮುಗಿಸಲು ಸಂಚು ರೂಪಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಂಥವರನ್ನು ಜೈಲಿಗೆ ಕಳುಹಿಸಿದರು. ಹೀಗಾಗಿ, ಮತ ನೀಡುವಾಗ ಯೋಚನೆ ಮಾಡಿ ಮತ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸಲು ಕಾಯುತ್ತಿದ್ದಾರೆ ಎಂದರು.

ನಾನು ಹುಟ್ಟುತ್ತ ಒಕ್ಕಲಿಗ, ಬೆಳೆಯುತ್ತ ವಿಶ್ವ ಮಾನವ: ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌

ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. ನನ್ನನ್ನು ಸೋಲಿಸಿ ಮತ್ತೆ ಸಿದ್ದರಾಮಯ್ಯ ಅವರಿಗೆ ಅವಮಾನ ಮಾಡಬೇಡಿ. ನನ್ನನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯ ಅವರಿಗೆ ಗೌರವ ಸಲ್ಲಿಸಿ. ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಎಂದು ಅವರು ಮನವಿ ಮಾಡಿದರು.